Skip to main content

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ "ಗಾರ್ಜಿಯಸ್ ರಾಸ್ಕಲ್"..

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ "ಗಾರ್ಜಿಯಸ್ ರಾಸ್ಕಲ್"..
ಶೀರ್ಷಿಕೆಯಿಂದಲೇ ಎಲ್ಲರ ಗಮನ ಸೆಳೆದಿದೆ ಹೊಸತಂಡದ ಈ ಹೊಸ ಪ್ರಯತ್ನ...  
ಕನ್ನಡದಲ್ಲಿ ಹೊಸತಂಡದ ಹೊಸಪ್ರಯತ್ನವನ್ನು ಜನರು ಮೆಚ್ಚುಕೊಳ್ಳುತ್ತಿದ್ದಾರೆ. ಅದೇ ರೀತಿಯ ಹೊಸತಂಡವೊಂದರಿಂದ "ಗಾರ್ಜಿಯಸ್ ರಾಸ್ಕಲ್" ಎಂಬ ಚಿತ್ರ ಮೂಡಿಬಂದಿದೆ. ಇದೇ ಮಾರ್ಚ್ 6 ರಂದು ಚಿತ್ರ ತೆರೆಗೆ ಬರುತ್ತಿದೆ. ಅದೃಷ್ಟಲಕ್ಷ್ಮೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಆರ್ ಚೇತನ್ ಕೃಷ್ಣ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ ಜೊತೆಗೆ ಸಂಗೀತವನ್ನು ಸಂಯೋಜಿಸಿದ್ದಾರೆ. ಚೇತನ್ ಕೃಷ್ಣ ಅವರು ಸಂಗೀತ ನೀಡಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿದ್ದು, ತಮಿಳಿನ ಖ್ಯಾತ ಗಾಯಕ ವೇಲುಮುರುಗನ್ ಹಾಗೂ "ಸರಿಗಮಪ" ಖ್ಯಾತಿಯ ದರ್ಶನ್ ನಾರಾಯಣ್ ಹಾಡಿದ್ದಾರೆ. ಹಾಡುಗಳಿಗೆ ಕೇಳುಗರು ಫಿದಾ ಆಗಿದ್ದಾರೆ. 
 ಪ್ರಮೋದ್ ಜೋಯಿಸ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಶಂಕು ಛಾಯಾಗ್ರಹಣ, ಅಕ್ಷಯ್ ಪಿ ರಾವ್ ಸಂಕಲನ, ನಂದು (ಕೆ.ಜಿ.ಎಫ್) ಅವರ ಶಬ್ದ ವಿನ್ಯಾಸ ಹಾಗೂ ಶ್ರೀನಿವಾಸ್ ಬೆಟ್ಟದಪುರ ಅವರ ಸಹ ನಿರ್ಮಾಣವಿದೆ. ಕ್ರಿಯೇಟಿವ್ ಹೆಡ್ ಆಗಿ ಚರಣ್ ಸುವರ್ಣ ಕಾರ್ಯ ನಿರ್ವಹಿಸಿದ್ದಾರೆ.   
ಪ್ರೇರಣಾ ಭಟ್, ಯುವಿನ್, ರಾಜವೀರ್ ಸಿಂಗ್, ಚೇತನ್ ಮಹೇಶ್, ಶಕ್ತಿಕುಮಾರ್, ಸುನೀಲ್ ಪುರಾಣಿಕ್, ಸ್ವಾತಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ಶೀರ್ಷಿಕೆಯಿಂದಲೇ ಕುತೂಹಲ ಮೂಡಿಸಿರುವ ಹಾಗೂ ಡಾರ್ಕ್ ಕಾಮಿಡಿ ಕಥಾ ಹಂದರರದ ಜೊತೆಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಇರುವ ನಮ್ಮ ಚಿತ್ರಕ್ಕೆ ಬೆಂಗಳೂರು ಹಾಗೂ ಮಹಾರಾಷ್ಟ್ರದಲ್ಲಿ ಚಿತ್ರೀಕರಣವಾಗಿದೆ. ಮಾರ್ಚ್ 6 ರಂದು "ಗಾರ್ಜಿಯಸ್ ರಾಸ್ಕಲ್" ತೆರೆಗೆ ಬರುತ್ತಿದೆ. ನನ್ನ ನಿರ್ಮಾಣದ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಿರ್ಮಾಪಕ ಹಾಗೂ ಸಂಗೀತ ನಿರ್ದೇಶಕ ಚೇತನ್ ಕೃಷ್ಣ ಆರ್.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...