Skip to main content

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ಸರಳ ಸುಬ್ಬರಾವ್"

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ಸರಳ ಸುಬ್ಬರಾವ್"
ಪ್ರೇಮಿಗಳ ದಿನದ ಸಂದರ್ಭದಲ್ಲಿ ತೆರೆಗೆ ಬರಲಿದೆ 1970ರ ಕಾಲಘಟ್ಟದ ಈ ಪ್ರೇಮ ಕಥಾನಕ..
ರಿಯಾನ್ ಕ್ರಿಯೇಷನ್ಸ್ ಲಾಂಛನದಲ್ಲಿ ಲೋಹಿತ್ ನಂಜುಂಡಯ್ಯ ನಿರ್ಮಿಸಿರುವ, ಸದಭಿರುಚಿ ಚಿತ್ರಗಳ ನಿರ್ದೇಶಕ ಮಂಜು ಸ್ವರಾಜ್ ನಿರ್ದೇಶನದಲ್ಲಿ ಅಜೇಯ್ ರಾವ್ ಹಾಗೂ ಮಿಶಾ ನಾರಂಗ್ ನಾಯಕ, ನಾಯಕಿಯಾಗಿ ನಟಿಸಿರುವ ಮತ್ತು 1970 ರ ಕಾಲಘಟ್ಟದ ಪ್ರೇಮ ಕಥಾನಕ ಹೊಂದಿರುವ "ಸರಳ ಸುಬ್ಬರಾವ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಿರೀಕ್ಷೆಗೂ ಮೀರಿ ಟ್ರೇಲರ್ ಗೆ ಮೆಚ್ಚುಗೆಯಾಗುತ್ತಿದೆ. ಫೆಬ್ರವರಿ 12 ರಂದು ಚಿತ್ರ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
"ಸರಳ ಸುಬ್ಬರಾವ್" 1970 ರ ಕಾಲಘಟ್ಟದ ಪ್ರೇಮಕಥೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಚಿತ್ರ ಫೆಬ್ರವರಿ 12 ರಂದು ತೆರೆಗೆ ಬರಲಿದೆ. ತ್ರಿವೇಣಿ ಅವರ ಕಾದಂಬರಿ ಆಧರಿಸಿದ ಕಥೆ ಇದು. ಈವರೆಗೂ ಕನ್ನಡದಲ್ಲಿ ತ್ರಿವೇಣಿ ಅವರ ಕಾದಂಬರಿಗಳನ್ನು ಆಧರಿಸಿ ಬಂದಿರುವ ಚಿತ್ರಗಳೆಲ್ಲಾ ಗೆದ್ದಿದೆ. ಕನ್ನಡದಲ್ಲಿ ತೀರ ಅಪರೂಪ ಎನ್ನಬಹುದಾದ ಕಥೆ ಕೂಡ. ನಮ್ಮ ಚಿತ್ರ ಎಲ್ಲರಿಗೂ ಮೆಚ್ಚುಗೆಯಾಗುವ ಭರವಸೆ ಇದೆ. ಹೆಚ್ಚು ಕಡಿಮೆ ನೂರು ವರ್ಷಗಳ ಇತಿಹಾಸವಿರುವ ಮೈಸೂರಿನ ಮನೆಯೊಂದರಲ್ಲಿ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ನಮ್ಮ ಚಿತ್ರ ನೋಡುಗರ ಮನ ಗೆದ್ದಿದೆ. ಅಜೇಯ್ ರಾವ್ ನಾಯಕರಾಗಿ ನಟಿಸಿರುವ ಈ ಚಿತ್ರದ ನಾಯಕಿ ಪಂಜಾಬಿನ ಮಿಶಾ ನಾರಂಗ್. ರಂಗಾಯಣ ರಘು, ವೀಣಾ ಸುಂದರ್, ಶ್ರೀ, ರಘು ರಾಮನಕೊಪ್ಪ, ವಿಜಯ್ ಚಂಡೂರ್ ಹೀಗೆ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ‌. ಅಂತರಾಷ್ಟ್ರೀಯ ಖ್ಯಾತಿಯ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಪ್ರದೀಪ್ ಪದ್ಮಕುಮಾರ್ ಛಾಯಾಗ್ರಹಣ ಹಾಗೂ ಬಸವರಾಜ್ ಅರಸ್ ಸಂಕಲನ "ಸರಳ ಸುಬ್ಬರಾವ್" ಚಿತ್ರಕ್ಕಿದೆ ಎಂದು ನಿರ್ದೇಶಕ ಮಂಜು ಸ್ವರಾಜ್ ತಿಳಿಸಿದರು.
ನಾನು ಹುಟ್ಟಿದ್ದು 1980ರಲ್ಲಿ. ಈ ಚಿತ್ರದ ಕಥೆ ನಡೆಯುವುದು 1970ರ ಕಾಲಘಟ್ಟದಲ್ಲಿ ಎಂದು ಮಾತನಾಡಿದ ನಾಯಕ ಅಜೇಯ್ ರಾವ್, ಕನ್ನಡದಲ್ಲಿ ಅಪರೂಪ ಎನ್ನಬಹುದಾದ ಕಥೆಯನ್ನು ನಿರ್ದೇಶಕ ಮಂಜು ಸ್ವರಾಜ್ ಹಾಗೂ ನಿರ್ಮಾಪಕ ಲೋಹಿತ್ ಆಯ್ಕೆ ಮಾಡಿಕೊಂಡಿದ್ದಾರೆ. ರೆಟ್ರೊ ಶೈಲಿಯಲ್ಲಿ ಕಾಣಿಸಿಕೊಂಡಿರುವಿದಕ್ಕೆ ಖುಷಿಯಿದೆ. ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಪ್ರೇಮಿಗಳ ದಿನದ ಸಂದರ್ಭದಲ್ಲಿ ನಮ್ಮ ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲಿ ಕುಟುಂಬ ಸಮೇತ ನಮ್ಮ ಚಿತ್ರ ನೋಡುವ ಮೂಲಕ ಪ್ರೋತ್ಸಾಹಿಸಿ ಎಂದರು. 
ಈ ಚಿತ್ರದಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಮಿಶಾ ನಾರಂಗ್‌.
ನಿರ್ದೇಶಕರು ಹೇಳಿದ ಈ ಕಥೆ ಬಹಳ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ. ಅಜೇಯ್ ರಾವ್ ಸೇರಿದಂತೆ ಚಿತ್ರತಂಡದ ಎಲ್ಲರ ಸಹಕಾರದಿಂದ ನಮ್ಮ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಫೆಬ್ರವರಿ 12 ರಂದು ನಮ್ಮ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ‌. ಪ್ರೋತ್ಸಾಹ ನೀಡಿ ಎಂದು ನಿರ್ಮಾಪಕ ಲೋಹಿತ್ ನಂಜುಂಡಯ್ಯ ಹೇಳಿದರು.
ಚಿತ್ರದಲ್ಲಿ ನಟಿಸಿರುವ ರಘು ರಾಮನಕೊಪ್ಪ, ವೀಣಾ ಸುಂದರ್, ಚಿತ್ಕಲಾ ಬಿರಾದಾರ್ ಮುಂತಾದ ಚಿತ್ರತಂಡದ ಸದಸ್ಯರು "ಸರಳ ಸುಬ್ಬರಾವ್" ಚಿತ್ರದ ಕುರಿತು ಮಾತನಾಡಿದರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...