Skip to main content

ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಟ್ರೇಲರ್ ರಿಲೀಸ್..

ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಟ್ರೇಲರ್ ರಿಲೀಸ್..
ಮತ್ತೊಂದು ಥ್ರಿಲ್ಲಿಂಗ್ ಕಥೆಯೊಂದಿಗೆ ಬಂದ ವಿಜಯ್ ರಾಘವೇಂದ್ರ..
ಕುತೂಹಲ ಹೆಚ್ಚಿಸಿದ ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಟ್ರೇಲರ್.. 
ಫೆ.20ಕ್ಕೆ ವಿಜಯ್ ರಾಘವೇಂದ್ರ ಚಿತ್ರ ಬಿಡುಗಡೆ..
ಸಸ್ಪೆನ್ಸ್ ಕಥೆಗಳನ್ನು ಸೊಗಸಾಗಿ ಕಟ್ಟಿಕೊಡುವ ನಿರ್ದೇಶಕ ದೇವಿ ಪ್ರಸಾದ್ ಶೆಟ್ಟಿ ಈಗ ಸೆಕೆಂಡ್ ಕೇಸ್ ಸೀತಾರಾಮ್ ಮೂಲಕ ಪ್ರೇಕ್ಷಕರ ಎದುರು ಬರ್ತಿದ್ದಾರೆ. ಅಂದಹಾಗೇ 'ಸೀತಾರಾಮ್ ಬಿನೋಯ್ ಕೇಸ್ ನಂಬರ್ 18’ ಚಿತ್ರದ ಸೀಕ್ವೆಲ್ ಇದಾಗಿದ್ದು, ವಿಜಯ್ ರಾಘವೇಂದ್ರ ಅವರು ಪೊಲೀಸ್ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅವರು ಮತ್ತೆ ಖಾಕಿ‌ ತೊಟ್ಟು ಮತ್ತೊಂದು ಥ್ರಿಲ್ಲಿಂಗ್ ಕಥೆ ಭೇದಿಸಲು ಹೊರಟಿದ್ದಾರೆ.‌ ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಟ್ರೇಲರ್ ನಿನ್ನೆ ಬೆಂಗಳೂರಿನ ಉತ್ಸವ್ ಲೆಗಸಿಯಲ್ಲಿ ಬಿಡುಗಡೆ ಮಾಡಲಾಯಿತು. 
ಈ ವೇಳೆ ನಟ ವಿಜಯ್ ರಾಘವೇಂದ್ರ ಮಾತನಾಡಿ, ಸೀತಾರಾಮ್ ಬಿನೋಯ್ ನನ್ನ ವೃತ್ತಿ ಜೀವನಕ್ಕೆ ವಿಶೇಷ ಬಲ ಕೊಟ್ಟ ಸಿನಿಮಾ. ಆ ಚಿತ್ರದ ಬರವಣಿಗೆ, ಪ್ರೆಸೆಂಟೇಷನ್ ಎಲ್ಲವೂ ಶಕ್ತಿ ನೀಡಿತ್ತು. ನಂತರ ಕೇಸ್ ಆಫ್ ಕೊಂಡಾಣ ಮಾಡಿದೆವು. ಬಳಿಕ ಈ ಇನ್ನೊಂದು ಸೀತಾರಾಮ್ ಮಾಡಿದ್ದೇವೆ. ದೇವಿ ಸರ್ ಒಳ್ಳೆ ಸ್ಕ್ರಿಪ್ಟ್ ಬರೆದಿದ್ದಾರೆ‌. ಸಾತ್ವಿಕ್ ಅದಕ್ಕೆ ಸಪೋರ್ಟ್ ಮಾಡಿದರು. ಇಡೀ ಚಿತ್ರತಂಡ ಸೇರಿಕೊಂಡು ಸೆಕೆಂಡ್ ಕೇಸ್ ಆಫ್ ಸೀತಾರಾಮ್ ಚಿತ್ರ ಮಾಡಿದೆವು. ನವನೀತ್ ಶ್ಯಾಮ್ ಸಂಗೀತ ಚಿತ್ರದ ಜೀವಾಳ. ಚಿತ್ರ ಮಾಡೋದು ಎಷ್ಟೋ ಕಷ್ಟವೋ ಬಿಡುಗಡೆ ಕೂಡ ಕಷ್ಟ. ನಮಗೆ ಈ ಚಿತ್ರಕ್ಕೆ ಪವನ್ ಸರ್ ಬೆಂಬಲವಾಗಿ ನಿಂತಿದ್ದಾರೆ. ಚಿತ್ರ ನೋಡಿ ಜೊತೆಗೆ ನಿಲ್ಲೋದಾಗಿ ಹೇಳಿದರು. ಕೇವಲ ದಿನಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೆ ನಿಮ್ಮ ಬೆಂಬಲ ಇರಲಿ ಎಂದು ಹೇಳಿದರು.
ನಿರ್ದೇಶಕ ಕಂ ಪವನ್ ಒಡೆಯರ್ ಮಾತನಾಡಿ, ಸೀತಾರಾಮ್ ಬಿನೋಯ್ ಟ್ರೆಂಡ್ ಸೆಟ್ ಮಾಡಿದ ಚಿತ್ರ. ಬರವಣಿಗೆ, ಟೇಕಿಂಗ್, ಪ್ರೆಸೆಂಟೆಷನ್ ಎಲ್ಲವೂ ಚೆನ್ನಾಗಿತ್ತು. ಅದರ ಮುಂದುವರೆದ ಭಾಗ ಸೆಕೆಂಡ್ ಕೇಸ್ ಸೀತಾರಾಮ್. ನಿರ್ದೇಶಕರು ಹಾಗೂ ನಿರ್ಮಾಪಕರು ಇಬ್ಬರು ಫ್ಯಾಷನೇಟೆಡ್. ಸಿನಿಮಾವನ್ನು ಹೋಮ್ ವರ್ಕ್ ಮಾಡಿದ ರೀತಿ ಮಾಡಿ ಕೆಲಸ ಮಾಡಿದ್ದಾರೆ. ಸಿನಿಮಾ ಮೇಲೆ ಇಡೀ ತಂಡಕ್ಕೆ ತುಡಿತ ಇದೆ. ರಫ್ ಕಟ್ ನೋಡಿದಾಗ ಬಹಳ ಇಷ್ಟವಾಯ್ತು. ಈ ಚಿತ್ರವನ್ನು ಪ್ರೆಸೆಂಟ್ ಮಾಡಲು ತುಂಬಾ ಖುಷಿ ಇದೆ. ಬೇರೆ ಭಾಷೆಗಳ ಸಸ್ಪೆನ್ಸ್ ಸಿನಿಮಾಗಳಿಗೆ ಹೋಲಿಕೆ ಮಾಡಿದರೆ ಈ ಚಿತ್ರ ಒಂದು ಹೆಜ್ಜೆ ಮುಂದೆ ಇದೆ. ಈ ಸಿನಿಮಾದ ಬಗ್ಗೆ ಹೇಳುವ ಬದಲು ಎಕ್ಸ್ ಪಿರಿಯನ್ಸ್ ಮಾಡಬೇಕು ಎಂದು ಅನುಭವ ಹಂಚಿಕೊಂಡರು.
'ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರದಲ್ಲಿ ವಿಜಯ್ ರಾಘವೇಂದ್ರ, ಗೋಪಾಲ್ ಕೃಷ್ಣ ದೇಶಪಾಂಡೆ ನಟಿಸಿದ್ದಾರೆ. ಪವನ್ ಒಡೆಯರ್ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ದೇವಿ ಪ್ರಸಾದ್ ಶೆಟ್ಟಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ‘ಫ್ಲೈಯಿಂಗ್ ಎಲಿಫಂಟ್ ಸ್ಟೋರಿ ಟೆಲ್ಲರ್ಸ್’ ಸಿನಿಮಾ ಮೂಲಕ ದೇವಿ ಪ್ರಸಾದ್ ಶೆಟ್ಟಿ ಹಾಗೂ ಸಾತ್ವಿಕ್ ಹೆಬ್ಬಾರ್ ಈ ಚಿತ್ರ ನಿರ್ಮಿಸಿದ್ದಾರೆ.
ಫೆಬ್ರವರಿ 20ರಂದು 'ಸೆಕೆಂಡ್ ಕೇಸ್ ಆಫ್ ಸೀತಾರಾಮ್' ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಮುಂದಾಗಿದೆ. ಹೇಮಂತ್ ಆಚಾರ್ಯ ಛಾಯಾಗ್ರಹಣ ಹಾಗೂ ನವನೀತ ಶಾಮ್
ಸಂಗೀತ, ಶಶಾಂಕ್ ಸಂಕಲನ ಚಿತ್ರಕ್ಕಿದೆ. ಪ್ರೇಕ್ಷಕರನ್ನು‌ ಸೀಟಿನ ತುದಿಗೆ ಕೂರಿಸುವ ಕಥೆಯೊಂದಿಗೆ ಇಡೀ ತಂಡ ಹಾಜರಾತಿ ಹಾಕಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...