Skip to main content

ಮಹಾ ಶಿವರಾತ್ರಿ ಸಂದರ್ಭದಲ್ಲಿ "ಸರ್ವಾಂತರ್ಯಾಮಿ”ಚಿತ್ರದ ಶಿವತಾಂಡವದ ಹಾಡು ಬಿಡುಗಡೆ..

ಮಹಾ ಶಿವರಾತ್ರಿ ಸಂದರ್ಭದಲ್ಲಿ "ಸರ್ವಾಂತರ್ಯಾಮಿ”ಚಿತ್ರದ ಶಿವತಾಂಡವದ ಹಾಡು ಬಿಡುಗಡೆ..
ಶಿವನ ಹಾಡಿನ ಮೂಲಕ ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ಚಿತ್ರತಂಡ..
ರಂಗಭೂಮಿ ಹಿನ್ನೆಲೆ ಇರುವ ರಂಗಸ್ವಾಮಿ ಕಪಿನಿಪಾಳ್ಯ ನಿರ್ದೇಶನದ, ಹಿತ ಆರ್ ಗೌಡ ನಿರ್ಮಾಣದ “ಸರ್ವಾಂತರ್ಯಾಮಿ” ಎಲ್ಲರ ಕೈಯಲ್ಲೂ ನಾನೇ ಸ್ವಾಮಿ’ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಪೂರ್ಣಗೊಂಡಿದೆ. ಚಿತ್ರಕ್ಕೆ ನಿರ್ದೇಶಕ ಹಾಗು ಗೀತರಚನೆಕಾರ ಕೆ.ರಾಮ್ ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ
ಶಿವರಾತ್ರಿಯ ಹಿನ್ನೆಲೆಯಲ್ಲಿ ಶಿವನ ಬಗ್ಗೆ ನಿರ್ದೇಶಕ ರಂಗಸ್ವಾಮಿ ಅವರೆ ಬರೆದಿರುವ ಶಿವನ ಕುರಿತಾದ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಪ್ರಚಾರ ಕಾರ್ಯ ಆರಂಭಿಸಿದೆ. ಶಿವ ತಾಂಡವದ ಈ ಗೀತೆಗೆ ರಮೇಶ್ ಕೃಷ್ಣ ಸಂಗೀತ ನೀಡಿದ್ದು, ರಂಗಸ್ವಾಮಿ ಕಪನಿಪಾಳ್ಯ ಹಾಗೂ ಸಂಜನಾ ಅಭಿನಯಿಸಿದ್ದಾರೆ. ವೇದಸ್ಯ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ. ಹಾಡಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ನಿರ್ದೇಶಕ ಹಾಗೂ ನಟ ರಂಗಸ್ವಾಮಿ ಕಪನಿಪಾಳ್ಯ ಕಪನಿಪಾಳ್ಯ ಮಾತನಾಡಿ, ಕಳೆದ 35 ವರ್ಷಗಳ ಹಿಂದೆ ಚಿತ್ರರಂಗದಲ್ಲಿದ್ದೆ, ಅಂದಿನಿಂದ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುವ ಆಸೆ ಇತ್ತು. ಹೀಗಾಗಿ ಈ ಚಿತ್ರ ಮಾಡಿದ್ದೇನೆ. ನಿರ್ದೇಶನದ ಜೊತೆಗೆ ಶಿಕ್ಷಕನ ಪಾತ್ರದಲ್ಲೂ ಆಭಿನಯಿಸಿದ್ದೇನೆ. ರಾಮ್‍ನಾರಾಯಣ್ ಬೆನ್ನೆಲುಬಾಗಿ ನಿಂತಿದ್ದಾರೆ. ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರದಲ್ಲಿ ನಾನೇ ಬರೆದಿರುವ ನಾಲ್ಕು ಹಾಡುಗಳಿದೆ. ಶಿವರಾತ್ರಿ ಸಂದರ್ಭದಲ್ಲಿ ಮೊದಲ ಹಾಡನ್ನು ಬಿಡುಗಡೆ ಮಾಡುತ್ತಿದ್ದೇವೆ. 
"ಸರ್ವಾಂತರ್ಯಾಮಿ" ಅಂದರೆ ಮೊಬೈಲ್‍. ಅದರಿಂದ ಆಗುವ ಅನುಕೂಲ, ಅನಾನುಕೂಲಗಳನ್ನು ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗಿದೆ. ಇದೊಂದು ಮಕ್ಕಳ ಚಿತ್ರ. ಮಕ್ಕಳಿಗಾಗಿ ಮಾಡಿದ್ದೇನೆ. ಚಿತ್ರೀಕರಣ ಮುಗಿದಿದ್ದು ಡಬ್ಬಿಂಗ್ ಸಹ ಪೂರ್ಣಗೊಂಡಿದೆ. ಸದ್ಯದಲ್ಲಿಯೇ ಚಿತ್ರವನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ನಿರ್ಮಾಪಕಿ ಹಿತಾ ಆರ್ ಗೌಡ ಮಾತನಾಡಿ ರಂಗಭೂಮಿ ಒಲವು ಅಪ್ಪನ ಮೇಲೆ ಇತ್ತು, ಅಪ್ಪ ಪಾತ್ರವನ್ನು ಜೀವಿಸಿದ್ದಾರೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ ಎಂದರು  

ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ ಕೆ ರಾಮ್ ನಾರಾಯಣ್ ಮಾತನಾಡಿ ನಿರ್ದೇಶಕ ರಂಗಸ್ವಾಮಿ ಅವರು ನನಗೆ ಹದಿನೈದು ವರ್ಷಗಳ ಪರಿಚಯ. ಅವರ ಸಿನಿಮಾ ಮಾಡುವ ಕನನು ಈಗ ನನಸಾಗಿದೆ. ಒಳ್ಳೆಯ ತಂಡ ಕಟ್ಟಿಕೊಂಡು ಸಿನಿಮಾ ಮಾಡಿದ್ದಾರೆ ತಂಡಕ್ಕೆ ಹಾಗೂ ಚಿತ್ರಕ್ಕೆ ಒಳ್ಳೆಯದಾಗಲಿ ಎಂದರು

ಮೊದಲ ಬಾರಿಗೆ ನಟಿಸಿದ್ದೇನೆ. ಆರಂಭದ ಚಿತ್ರದಲ್ಲಿ ಪಾರ್ವತಿ ದೇವಿಯ ಪಾತ್ರದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿರುವುದು ಖುಷಿ ಕೊಟ್ಟಿದೆ ಎಂದು ನಟಿ ಸಂಜನಾ ಹೇಳಿದರು.

ಕಲಾವಿದ ಸೂರ್ಯ ಪ್ರವೀಣ್ ಮಾತನಾಡಿ ಹಾಡು ಚೆನ್ನಾಗಿ ಬಂದಿದೆ. ಇದರಲ್ಲಿ ನನ್ನದು ವಿಭಿನ್ನ ಪಾತ್ರ ಎಂದರು.

ಕಲಾವಿದ ನಾಗರಾಜ್ ಮಾತನಾಡಿ 20 ವರ್ಷದಿಂದ ಚಿತ್ರರಂಗದಲ್ಲಿದ್ದೇನೆ. ಮೊದಲ ಬಾರಿಗೆ ಪೋಸ್ಟರ್ ನಲ್ಲಿ ಕಾಣಿಸಿಕೊಳ್ಳುವಂತಹ ಮುಖ್ಯ ಪಾತ್ರ ಮಾಡಿದ್ದೇನೆ. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಮಗಳಿಗಾಗಿ ಅಪ್ಪ ಏನೆಲ್ಲಾ ಮಾಡುತ್ತಾರೆ ಎನ್ನುವುದೇ ಚಿತ್ರದ ಒಂದೆಳೆ ಕಥೆ ಎಂದು ಹೇಳಿದರು.

ಛಾಯಾಗ್ರಾಹಕ ರಾಜು ಹೆಮ್ಮಿಗೆಪುರ, ಕಲಾವಿದರಾದ ವಿಕ್ಟರಿ ವಾಸು, ಮೈರಾ, ಅಮೂಲ್ಯ ನಾರಾಯಣ್,ಉಮೇಶ್ ಸಕ್ಕರೆನಾಡು, ಉಮೇಶ್ ಪುಂಗ ಮತ್ತಿತರರು ಚಿತ್ರದ ಕುರಿತು ಮಾಹಿತಿ ಹಂಚಿಕೊಂಡರು.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...