Skip to main content

ದಿ ರೈಸ್ ಆಫ್ ಅಶೋಕ ಟ್ರೇಲರ್ ಅನಾವರಣ...ಸತೀಶ್ ನೀನಾಸಂ ಸಿನಿಮಾಗೆ ಚಂದನವನದ ತಾರೆಯರು ಸಾಥ್..

ದಿ ರೈಸ್ ಆಫ್ ಅಶೋಕ ಟ್ರೇಲರ್ ಅನಾವರಣ...
ಸತೀಶ್ ನೀನಾಸಂ ಸಿನಿಮಾಗೆ ಚಂದನವನದ ತಾರೆಯರು ಸಾಥ್..
ದಿ ರೈಸ್ ಆಫ್ ಅಶೋಕ ಟ್ರೇಲರ್ ಬಿಡುಗಡೆ...
ಸತೀಶ್ ನೀನಾಸಂ ಚಿತ್ರಕ್ಕೆ ಸ್ಯಾಂಡಲ್ ವುಡ್ ಸ್ಟಾರ್ಸ್ ಬೆಂಬಲ..
ಟ್ರೇಲರ್ ನಲ್ಲಿ ಕಿಚ್ಚು ಹಚ್ಚಿದ ಅಶೋಕ..
ಇದೇ ತಿಂಗಳ 27ಕ್ಕೆ ಸತೀಶ್ ನೀನಾಸಂ ಸಿನಿಮಾ ರಿಲೀಸ್..
ಸತೀಶ್ ನೀನಾಸಂ ಅಭಿನಯ ಬಹು ನಿರೀಕ್ಷಿತ ಸಿನಿಮಾ ದಿ ರೈಸ್ ಆಫ್ ಅಶೋಕ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ ತಿಂಗಳ 27ರಂದು ಬಹು ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಿ ರೈಸ್ ಆಫ್ ಅಶೋಕ ಟ್ರೇಲರ್ ಲಾಂಚ್ ಈವೆಂಟ್​​ಗೆ ಸ್ಯಾಂಡಲ್ ವುಡ್ ಸ್ಟಾರ್ಸ್ ಸಾಥ್ ಕೊಟ್ಟರು. ರವಿಚಂದ್ರನ್​, ದುನಿಯಾ ವಿಜಯ್, ವಸಿಷ್ಠ ಸಿಂಹ, ಲೂಸ್ ಮಾದ ಯೋಗಿ, ದಿಗಂತ್, ನಾಗಭೂಷಣ್ ಮತ್ತು ಶಿವರಾಜ್ ಕೆ ಆರ್ ಪೇಟೆ ಮೊದಲಾದವರು ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 
ಈ ವೇಳೆ ಕ್ರೇಜಿಸ್ಟಾರ್ ರವಿಚಂದ್ರನ್ ಮಾತನಾಡಿ, ಸತೀಶ್ ಚಿತ್ರದ ಟ್ರೇಲರ್, ಹಾಡು ಯಾವುದು ಕಾಣಿಸಲಿಲ್ಲ. ನಿನ್ನ ಕಣ್ಣಲ್ಲಿ ನೀರು ಕಾಣಿಸಿತು. ಅದು ಹೊರಗಡೆ ಬರಲಿಲ್ಲ. ನೀನು ಅಲ್ಲೇ ಅರ್ಧ ಗೆದ್ದಾಯ್ತು. ಗಂಡ್ಸು ಕಣ್ಣೀರು ಹಾಕಬಾರದು.‌ ಒಳಗೆ ಇಟ್ಟುಕೊಳ್ಳಬೇಕು. ಸಿನಿಮಾ ಮೇಲೆ ಪ್ರೀತಿ, ಆಸೆ, ಕನಸು ಇದೆ ಅನ್ನೋದು ನಿನ್ನ ಮಾತು, ನಿನ್ನ ಸ್ನೇಹಿತರು ಹೇಳ್ತಾರೆ. ನಿನ್ನ ಕನಸು, ಆಸೆ ನಿಜ ಆಗಲಿ. ಹೆಣ್ಮಕ್ಕಳಿಗೆ ಡೆಲಿವರಿ ನೋವು ಗೊತ್ತು. ಆದರೆ ಪ್ರತಿ ಸಿನಿಮಾ ಮಾಡುವಾಗ ಆಗುವುದು ಡೆಲಿವರಿ ನೋವೇ. ಆ ಆಪರೇಷನ್ ಮಾಡುವುದು ಪ್ರೇಕ್ಷಕರು. ಸಿಸರಿನ್ ಮಾಡುವುದು ನೀವೇ.‌ ಮೊದಲು ಆಪರೇಷನ್ ಮಾಡಿ.‌ ಮೊದಲು ಬದುಕಿಸಲು ಪ್ರಯತ್ನಿಸಿ. ಮೊದಲು ಸಿನಿಮಾ ನೋಡಿ. ಪ್ರೇಕ್ಷಕರ ಆಗಿ ಸಿನಿಮಾಗೆ ಹೋಗಿ. ವಿಮರ್ಶೆ ಮಾಡಲು ಹೋಗಬೇಡಿ. ಸಿನಿಮಾದವರು ಲೈಕ್ ಗೆ ಸಾಯುವುದನ್ನು ಬಿಡಿ. ಪ್ರೇಕ್ಷಕರನ್ನು ಸಿನಿಮಾ ಥಿಯೇಟರ್ ನಲ್ಲಿ ಸಿನಿಮಾ ನೋಡಲು ಬಿಡಿ. ಎರಡೂವರೆ ಗಂಟೆ ಅವರನ್ನು ಮೈಮರೆಸಲು ಬಿಡಿ. ಚೆನ್ನಾಗಿ ಆಗಲಿ ಎಂದು ಬಯಸುತ್ತೇವೆ. ಚೆನ್ನಾಗಿ ಮಾಡುವುದು ಸಿನಿಮಾದವರ ಕೆಲಸ. ಒಬ್ಬನಿಗೆ ನೂರು ರೂಪಾಯಿ ಕೊಟ್ಟು ಸಿನಿಮಾ ನೋಡಿ. ಒಂದಷ್ಟು ಸಿನಿಮಾ ಗೆಲ್ಸಿ ಎಂದು ಪ್ರೇಕ್ಷಕರಿಗೆ ಕಿವಿ ಮಾತು ಹೇಳಿದರು.
ನಟ ನೀನಾಸಂ ಸತೀಶ್ ಮಾತನಾಡಿ, ರವಿಚಂದ್ರನ್ ನಮಗೆ ತಂದೆ ಸಮನ. ವಿಜಿ ಸರ್ ಒಂದು ಕಾಲ್ ಗೆ ಬಂದ್ರು.‌ಯೋಗಿ ನನ್ನ ಗೆಳೆಯ. ವಸಿಷ್ಠ ಹಾರ್ಟ್ಲಿ ಮಾತನಾಡುವ ಗೆಳೆಯ. ನಾಗಭೂಷಣ್, ದಿಗ್ಗಿ, ಕೆಆರ್ ಪೇಟೆ ಎಲ್ಲರೂ ನನಗೆ ಸಪೋರ್ಟ್ ಮಾಡಲು ಬಂದಿರುವುದಕ್ಕೆ ಧನ್ಯವಾದ. ನಮ್ಮ ದಿ ರೈಸ್ ಆಫ್ ಅಶೋಕ ಸಿನಿಮಾವನ್ನು ಇದೇ ತಿಂಗಳ 27 ರಂದು ಪ್ರೇಕ್ಷಕರ ಮುಂದೆ ಇಡುತ್ತಿದ್ದೇವೆ. ನೀವು ಸಾಂಗ್ ನೋಡಿದ್ದೀರಾ? ನನ್ನ ಸ್ನೇಹಿತರು ಎಲ್ಲರೂ ಟ್ರೇಲರ್ ಲಾಂಚ್ ಗೆ ಬಂದಿದ್ದಾರೆ. ಸಪ್ತಮಿ ನನ್ನ ರೀತಿ ಚಿತ್ರದ ಹೀರೋ. ತೆಲುಗು, ತಮಿಳು ಮಾಡ್ತೀನಿ ಎಂದು ಹೇಳಿಕೊಂಡು ಬರ್ತಿದ್ದೆ. ಎಲ್ಲರೂ ಇವನಿಗೆ ಕೆಜಿಎಫ್, ಕಾಂತಾರ ಹುಚ್ಚು ಹಿಡಿದಿದೆ ಎಂದು ಮಾತನಾಡಿಕೊಂಡರು. ನನಗೆ ಕೆಜಿಎಫ್, ಕಾಂತಾರ ಹುಚ್ಚು ಹಿಡಿದಿಲ್ಲ. ನನ್ನ ಸಿನಿಮಾದ ಹುಚ್ಚು ಅದು.‌ ನಮ್ಮ ಸಿನಿಮಾವನ್ನು ಅವರು ನೋಡಲಿ. ಮೊದಲ ಚಿತ್ರ ತೋರಿಸಿದೆ. ಸಿನಿಮಾ ಸಖತ್ ಆಗಿ ಇದೆ ಎಂದು ತೆಲುಗು, ತಮಿಳಿನಲ್ಲಿ 200 ಥಿಯೇಟರ್ ನಲ್ಲಿ ರಿಲೀಸ್ ಮಾಡುತ್ತಿದ್ದಾರೆ. ಸಿನಿಮಾ ಬಗ್ಗೆ ಜಾಸ್ತಿ ಮಾತಾನಾಡಲ್ಲ. ಇದೇ ತಿಂಗಳ 27ಕ್ಕೆ ದಿ ರೈಸ್ ಆಫ್ ಅಶೋಕ ತೆರೆಗೆ ಬರ್ತಿದೆ. ಎರಡೂವರೆ ಕಾಲ ನನ್ನ ಕಷ್ಟ ಕಾಲದಲ್ಲಿ ನಿಂತ ಎಲ್ಲರಿಗೂ ಧನ್ಯವಾದ ಎಂದರು.

ದಿ ರೈಸ್ ಆಫ್ ಅಶೋಕದಲ್ಲಿ ಸತೀಶ್​ಗೆ ಜೋಡಿಯಾಗಿ ಕಾಂತಾರ ಸಿನಿಮಾ ಖ್ಯಾತಿಯ ಸಪ್ತಮಿ ಗೌಡ ನಟಿಸಿದ್ದಾರೆ. ಬಿ.ಸುರೇಶ್, ರವಿಶಂಕರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯಾ, ಯಶ್ ಶೆಟ್ಟಿ, ಡ್ರಾಗನ್ ಮಂಜು, ವಿಕ್ರಮ್ ವೇದ ಖ್ಯಾತಿಯ ಹರೀಶ್ ಪೆರಾಡಿ, ಜಗಪ್ಪ ತಾರಾಬಳಗದಲ್ಲಿದ್ದಾರೆ.

ದಿ ರೈಸ್ ಆಫ್ ಅಶೋಕ ಚಿತ್ರ ಇದೇ ತಿಂಗಳು ರಿಲೀಸ್ ಆಗುತ್ತಿದೆ. ದೊಡ್ಡಮಟ್ಟದಲ್ಲಿಯೇ ಈ ಸಿನಿಮಾ ತೆರೆಗೆ ಬರ್ತಿದೆ. ಕನ್ನಡ ಅಷ್ಟೆ ಅಲ್ಲ, ಇತರ ಭಾಷೆಯಲ್ಲೂ ಈ ಸಿನಿಮಾ ಬಿಡುಗಡೆಯಾಗುತ್ತಿದೆ.


ಈ ಚಿತ್ರ ವೃದ್ಧಿ ಕ್ರಿಯೇಷನ್ ಹಾಗೂ ಸತೀಶ್ ಪಿಕ್ಚರ್ಸ್ ಹೌಸ್ ಪ್ರೊಡಕ್ಷನ್ ನಡಿ ಮೂಡಿ‌ಬರ್ತಿದೆ. ವರ್ಧನ್ ನರಹರಿ, ಜೈಷ್ಣವಿ ಜೊತೆ ಸೇರಿ ಸತೀಶ್ ನೀನಾಸಂ ಕೂಡಾ ಸಿನಿಮಾಗೆ ಹಣ ಹಾಕಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.