Skip to main content

ದೇವಸಸ್ಯ ಚಿತ್ರೀಕರಣ ಮುಕ್ತಾಯ ಚಿತ್ರದಲ್ಲಿ ಸಿದ್ದಿ ಸಂಸ್ಕೃತಿಯ ಅನಾವರಣ...

ದೇವಸಸ್ಯ ಚಿತ್ರೀಕರಣ ಮುಕ್ತಾಯ ಚಿತ್ರದಲ್ಲಿ ಸಿದ್ದಿ ಸಂಸ್ಕೃತಿಯ ಅನಾವರಣ...
  ಸಿರ್ಸಿ ತಾಲ್ಲೂಕು ಸುತ್ತ ಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿರುವ ಸಿದ್ದಿ ಜನಾಂಗದ ಸಂಸ್ಕೃತಿ, ಆಚಾರ, ವಿಚಾರಗಳ ಕುರಿತು‌ ನಿರ್ದೇಶಕ ಕಾರ್ತೀಕ್ ಭಟ್ ಕಥಾಹಂದರ ಹೆಣೆದಿರುವ ಚಿತ್ರ ದೇವಸಸ್ಯ. ಅಪರೂಪದ ಗಿಡವೊಂದರ ಸುತ್ತ ಈ ಚಿತ್ರಕಥೆ ಸಾಗಲಿದೆ.
 ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ಈ ಚಿತ್ರ ತೆರೆಗೆ ಬರುತ್ತಿದೆ. ಅನಂತ ಫಿಲಂಸ್ ಅಡಿ ಅನಂತಮೂರ್ತಿ ಎಂ.ಹೆಗಡೆ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಕೊನೆಯ ದಿನದ ಚಿತ್ರೀಕರಣ ಮಾಗಡಿ ರಸ್ತೆಯಲ್ಲಿರುವ ಪುಟ್ಟಣ್ಣ ಕಣಗಾಲ್ ಸ್ಟುಡಿಯೋದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ಥಳಕ್ಕಾಗಮಿಸಿದ ಮಾಧ್ಯಮ ಮಿತ್ರರೊಂದಿಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿತು.
    1995ರ ಕಾಲಘಟ್ಟದಲ್ಲಿ ನಡೆಯುವ ನಮ್ಮ ಮಣ್ಣಿನ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಊರಲ್ಲಿ ಟ್ರಾಕ್ಟರ್ ಓಡಿಸುತ್ತಿದ್ದ ಸಿದ್ಧಿ ಸಮುದಾಯದ ಯುವಕ ಸೆಲ್ವಿನ್ ದೇಸಾಯಿ ಈ ಚಿತ್ರದ ಪ್ರಮುಖ ಪಾತ್ರಧಾರಿ. ನಿರ್ದೇಶಕರು ಈತನಿಗೆ 2 ವರ್ಷಗಳ‌ ತರಬೇತಿ ನೀಡಿ ಬಣ್ಣ ಹಚ್ಚಿಸಿದ್ದಾರೆ. ರಂಗಪ್ರತಿಭೆ ಆಹಾನ್‌ಗೌಡ ಮತ್ತು ಬಿಂಬಿಕಾ ಜೆ.ರಾವ್ ಪ್ರಮುಖ ಪಾತ್ರಗಳಲ್ಲಿದ್ದಾರೆ, ಅಲ್ಲದೆ, 150ಕ್ಕೂ ಹೆಚ್ಚು ಸಿದ್ಧಿ ಕಲಾವಿದರು ನಟಿಸಿರುವುದು ಈ ಚಿತ್ರದ ವಿಶೇಷ. ಈ ಚಿತ್ರಕ್ಕಾಗಿ 1995ರ ಕಾಲಘಟ್ಟದ ಹಳ್ಳಿಯೊಂದರ ಸೆಟ್ ಹಾಕಿ ಅಲ್ಲಿ, 93 ದಿನಗಳ ಕಾಲ ಚಿತ್ರೀಕರಿಸಲಾಗಿದೆ.
   ಈ ಸಂದರ್ಭದಲ್ಲಿ ನಿರ್ಮಾಪಕ ಅನಂತಮೂರ್ತಿ ಹೆಗಡೆ ಮಾತನಾಡುತ್ತ ನನಗೆ ಮೊದಲಿಂದಲೂ ಸಿನಿಮಾ ಬಗ್ಗೆ ತುಂಬಾ ಆಸಕ್ತಿ, ಅದೇ ಕಾರಣಕ್ಕೆ ಈ ಚಿತ್ರ ನಿರ್ಮಾಣ ಮಾಡುತ್ತಿದ್ದೇನೆ. ಕಳೆದ ಮಾರ್ಚ್ ನಲ್ಲಿ ಶೂಟಿಂಗ್ ಆರಂಭಿಸಿ, ಉತ್ತರ ಕನ್ನಡದಲ್ಲೇ ಬಹುತೇಕ ಚಿತ್ರೀಕರಣ ನಡೆಸಿದ್ದೇವೆ, ಸುಮಾರು 150ರಂದ 200 ಜನ ಚಿತ್ರದಲ್ಲಿ ಕೆಲಸ ಮಾಡಿದ್ದಾರೆ. ಅದ್ಭುತವಾದ, ವಿಶೇಷವಾದ ಸಂಜೀವಿನಿ ಗಿಡವೇ ದೇವಸಸ್ಯ. ಇಂತಹ ವಿಶಿಷ್ಟವಾದ ಸ್ಕ್ರಿಪ್ಟ್ ಸಿಕ್ಕಿರೋದು ನಮ್ಮ ಅದೃಷ್ಟ. ನಿರ್ದೇಶಕರು ಈ ಚಿತ್ರಕ್ಕಾಗಿ 3 ವರ್ಷ ಹಗಲಿರುಳು ಕಷ್ಟಪಟ್ಟಿದ್ದಾರೆ. ಚಿತ್ರಕ್ಕಾಗಿಯೇ 30ವರ್ಷಗಳ ಹಿಂದಿದ್ದ ಊರನ್ನು ಮರುಸೃಷ್ಠಿ ಮಾಡಿದ್ದೇವೆ. ಇದು ಸಸ್ಯವೊಂದರ ಕುರಿತಂತೆ ಮಾಡಿರುವ ಕಥೆಯಾಗಿದ್ದರಿಂದ 5 ಭಾಷೆಗಳಲ್ಲಿ ನಿರ್ಮಿಸುತ್ತಿದ್ದೇವೆ ಎಂದು ಹೇಳಿದರು.
  ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ ಮೊದಲಿಂದಲೂ ನನಗೆ ಸಿನಿಮಾ ಎಂದರೆ ಹುಚ್ಚು. ಕೆಲ ಚಲನಚಿತ್ರ, ಸೀರಿಯಲ್‌ಗಳಿಗೆ ಬರಹಗಾರನಾಗಿ ಕೆಲಸ ಮಾಡಿ, ಮೊದಕಬಾರಿಗೆ ನಿರ್ದೇಶನಕ್ಕೆ ಕೈ ಹಾಕಿದ್ದೇನೆ. 
ಸಿರ್ಸಿ ಸುತ್ತಮುತ್ತಲಿನ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಸಮುದಾಯದ ಬಗ್ಗೆ ಚಿತ್ರದಲ್ಲಿ ಹೇಳಿದ್ದೇವೆ, ಇದು ಕಥೆಯಲ್ಲ, ಹೊಸ ಜಗತ್ತು, ಉತ್ತರ ಕನ್ನಡದಲ್ಲಿ ಮಲೆನಾಡು, ಬಯಲುಸೀಮೆ ಎರಡೂ ಇದೆ. ಅದರಲ್ಲಿ ಸಾಕಷ್ಟು ಕಥೆಗಳಿದ್ದು, ಅದರಲ್ಲಿ ಇದೂ ಒಂದು, 46 ರಿಂದ 47 ವರ್ಷನ್ ಕಥೆ ಬರೆದು ಫೈನಲ್ ಮಾಡಿದ್ದೇವೆ,‌ನಿರ್ಮಾಪಕರಿಗೆ ಕಥೆ ಹೇಳಿದಾಗ ಅವರು ತುಂಬಾ ಇಷ್ಟಪಟ್ಟು ಚಿತ್ರ ನಿರ್ಮಿಸಿದ್ದಾರೆ. ಎರಡು ಊರುಗಳ ಮಧ್ಯೆ ನಡೆಯುವ ಕಥೆಯಿದು. ಸಿದ್ದಿ ಹುಡುಗನ ಪಾತ್ರವನ್ನು ಸೆಲ್ವಿನ್ ದೇಸಾಯಿ ಮಾಡಿದ್ದಾರೆ ಎಂದರು. 
 ನಂತರ ನಟ ಸೆಲ್ವಿನ್ ಮಾತನಾಡಿ ನಾನು ಊರಲ್ಲಿ ಟ್ರ‍್ಯಾಕ್ಟರ್ ಓಡಿಸಿಕೊಂಡಿದ್ದೆ. ನನಗೆ ಕನ್ನಡ ಚೆನ್ನಾಗಿ ಬರುತ್ತೆ. ನಿರ್ದೇಶಕರು ಬಂದು ಸಿನಿಮಾದಲ್ಲಿ ಆಕ್ಟ್ ಮಾಡ್ತೀಯಾ ಅಂದ್ರು, ನನ್ನಂಥವನಿಂದ ಸಾಧ್ಯವಾ ಅಂತ ನಕ್ಕಿದ್ದೆ. ನಂತರ ಅವರೇ ಕರೆದುಕೊಂಡು ಹೋಗಿ ಅಭಿನಯ, ಆಕ್ಷನ್ ಕಲಿಸಿದರು ಎಂದು ವಿವರಿಸಿದರು. 
  ಮತ್ತೊಬ್ಬನಟ ಅಹಾನ್ ಮಾತನಾಡುತ್ತ ಇದರಲ್ಲಿ ನಾನು ಕುರ್ಮುಷ್ಠ ಎಂಬ ಪಾತ್ರವನ್ನು ಮಾಡಿದ್ದೇನೆ ಎಂದರು. ನಾಯಕಿ ಬಿಂಬಿಕಾ ಮಾತನಾಡಿ ಈ ಚಿತ್ರದಲ್ಲಿ ನಾನು ಮಾತಂಗಿ ಎಂಬ ಸಿದ್ದಿ ಜನಾಂಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಇದು ನನ್ನ 5 ನೇ ಚಿತ್ರ ಎಂದರು. ಯಶವಂತ್ ಅವರ ಛಾಯಾಗ್ರಹಣ, ಹರಿ ಅಜಯ್ ಅವರ ಸಂಗೀತ ಸಂಯೋಜನೆ, ಕೆಜಿಎಫ್. ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ. ಉತ್ತರ ಕನ್ನಡ ಜಿಲ್ಲೆಯ ಅದ್ಭುತ ಪ್ರಾಕೃತಿಕ ಸೊಬಗಲ್ಲಿ ರಾಜೇಶ್ ಕೃಷ್ಣನ್, ಆಂಥೋನಿದಾಸ್, ಇಂದು ನಾಗರಾಜ್, ರವಿ ಮೂರೂರು ಹಾಡಿರುವ ವಿಭಿನ್ನ ಶೈಲಿಯ 7 ಹಾಡುಗಳನ್ನ ಸೆರೆಹಿಡಿಯಲಾಗಿದೆ. ಕಾಂತಾರ ಖ್ಯಾತಿಯ ಮಿಥುನ್‌ಸಿಂಗ್ ಅವರ ಸಾಹಸ ನಿರ್ದೇಶನ, ಯಶವಂತ ಅವರ ಕ್ಯಾಮೆರಾ ಕೈಚಳಕ, ಹರಿಅಜಯ್ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಈ ಚಿತ್ರದಲ್ಲಿ ಸೆಲ್ವಿನ್ ದೇಸಾಯಿ, ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಅಯ್ಯಪ್ಪ ಶರ್ಮ, ರವಿ ಮೂರೂರು, ಮಂಜುನಾಥ ಹೆಗಡೆ, ಸಲಗ ಖ್ಯಾತಿಯ ಗೀತಾ ಸಿದ್ಧಿ ಹಾಗೂ ಇತರರು ನಟಿಸಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.