Skip to main content

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ಶಿಖಂಡಿ"..

ಮೋಷನ್ ಪೋಸ್ಟರ್ ನಲ್ಲೇ ಮೋಡಿ ಮಾಡಿದ "ಶಿಖಂಡಿ"..
ಪೋಲಾ ಪ್ರವೀಣ್ ಕುಮಾರ್ ನಿರ್ಮಾಣದ ಈ ಚಿತ್ರಕ್ಕೆ ಗುರುಮೂರ್ತಿ ವಿ ನಿರ್ದೇಶನ..
ಈ ಹಿಂದೆ 'ಮಾರಕಾಸ್ತ್ರ' ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಗುರುಮೂರ್ತಿ ವಿ, ಈಗ ವಿಭಿನ್ನ ಕಥಾಹಂದರ ಹೊಂದಿರುವ "ಶಿಖಂಡಿ" ಚಿತ್ರವನ್ನು ನಿರ್ದೇಶಿಸಿದ್ದಾರೆ. ಪೋಲಾ ಪ್ರವೀಣ್ ಕುಮಾರ್ ಅವರು ಪೋಲಾ ಮೂವೀಸ್ ಮೂಲಕ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮೋಷನ್ ಪೋಸ್ಟರ್ ಅನಾವರಣವಾಯಿತು. ನಿರ್ಮಾಪಕ ಸಂಜಯ್ ಗೌಡ ಹಾಗೂ ನಿರ್ದೇಶಕರಾದ ಜಡೇಶ್ ಕೆ ಹಂಪಿ, ನವೀನ್ ರೆಡ್ಡಿ "ಶಿಖಂಡಿ" ಚಿತ್ರದ ಮೋಷನ್ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.
ಮಹಾಭಾರತದಲ್ಲಿ ಬರುವ "ಶಿಖಂಡಿ" ಪಾತ್ರವೇ ನಮ್ಮ ಚಿತ್ರದ ಕಥೆಗೆ ಸ್ಪೂರ್ತಿ ಎಂದು ಮಾತನಾಡಿದ ನಿರ್ದೇಶಕ ಗುರುಮೂರ್ತಿ, ಮಹಾಭಾರತದಲ್ಲಿ ಶಿಖಂಡಿ ಪುನರ್ಜನ್ಮ ಪಡೆದು ತನ್ನ ಸೇಡನ್ನು ತೀರಿಸಿಕೊಳ್ಳುವುದನ್ನು ನಾವೆಲ್ಲಾ ಕೇಳಿದ್ದೇವೆ. ಈ ಅಂಶವನ್ನೇ ಪ್ರಧಾನವಾಗಿಟ್ಟುಕೊಂಡು "ಶಿಖಂಡಿ" ಚಿತ್ರದ ಕಥೆ ಹೆಣೆಯಲಾಗಿದೆ. ಸಸ್ಪೆನ್ಸ್, ಥ್ರಿಲ್ಲರ್, ಹಾರಾರ್, ಕಾಮಿಡಿ ಸೇರಿದಂತೆ ಎಲ್ಲಾ ಅಂಶಗಳು ಇರುವ ಕೌಟುಂಬಿಕ ಕಥಾಹಂದರ ಹೊಂದಿರುವ ಚಿತ್ರವಿದು. ಕಥೆ ಕೇಳಿದ ತಕ್ಷಣ ಮೆಚ್ಚಿಕೊಂಡ ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್ ಅವರು ನಿರ್ಮಾಣಕ್ಕೆ ಮುಂದಾದರು. ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಚಿತ್ರೀಕರಣ ಮುಗಿದಿದೆ. ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೇ ವೇಳೆಗೆ ಸಿನಿಮಾ ಬಿಡುಗಡೆ ಮಾಡುವ ಯೋಜನೆ ಇದೆ. ಮೋಷನ್ ಪೋಸ್ಟರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದರು. 
ನಾನು ಬಳ್ಳಾರಿಯವನು. ಇದು ಮೊದಲ ನಿರ್ಮಾಣದ ಚಿತ್ರ. ಚಿತ್ರ ನಿರ್ಮಾಣ ಮಾಡಲು ಎರಡು ಕಾರಣ‌. ಒಂದು ಕಥೆ . ಮತ್ತೊಂದು ವಿಶೇಷ ಚೇತನರಾಗಿದ್ದರೂ ನಿರ್ದೇಶಕ ಗುರುಮೂರ್ತಿ ಅವರಿಗೆ ಸಿನಿಮಾ ಮೇಲಿರುವ ಪ್ರೀತಿ. ಒಂದೊಳ್ಳೆ ಚಿತ್ರ ನಿಮ್ಮ ಮುಂದೆ ತರುತ್ತಿದ್ದೇವೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದು ನಿರ್ಮಾಪಕ ಪೋಲಾ ಪ್ರವೀಣ್ ಕುಮಾರ್ ತಿಳಿಸಿದರು.
ನನಗೆ ಚಿತ್ರದ ಶೀರ್ಷಿಕೆ ಹೇಳಿದ ತಕ್ಷಣ ಆಶ್ಚರ್ಯವಾಯಿತು. ಆದರೆ ಕಥೆ ಕೇಳಿ ಸಂತೋಷವಾಯಿತು. ನಾನು ಮೈಸೂರಿನವನು. ನಾಯಕನಾಗಿ ಮೊದಲ ಚಿತ್ರ. ಸೂರ್ಯ ನನ್ನ ಪಾತ್ರದ ಹೆಸರು. ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು ನಾಯಕ ಯುವರಾಜ್ ಗೌಡ. 
ಇದು ನನ್ನ ಚೊಚ್ಚಲ ಚಿತ್ರ ಎಂದು ನಾಯಕಿ ಖ್ಯಾತಿ ತಿಳಿಸಿದರು. ಉತ್ತಮ ಪಾತ್ರದಲ್ಲಿ ನಟಿಸಿರುವುದಕ್ಕೆ ಖುಷಿಯಾಗಿದೆ ಎಂದು ನಟಿ ನಿಖಿತಾಸ್ವಾಮಿ ಹೇಳಿದರು. ತಮ್ಮ ಪಾತ್ರದ ಬಗ್ಗೆ "ಬಿಗ್ ಬಾಸ್" ಖ್ಯಾತಿಯ ನೀತು ಹಾಗೂ ಬಳ್ಳಾರಿಯ ಚಾಂದಿನಿ ವಿವರಣೆ ನೀಡಿದರು. ಹಿರಿಯ ಕಲಾವಿದರಾದ ರಘು ರಾಮನಕೊಪ್ಪ, ದೀಪಕ್ ಶೆಟ್ಟಿ, ವಿಜಯ್ ಚಂಡೂರ್ ಮುಂತಾದವರು ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಛಾಯಾಗ್ರಾಹಕ ಸ್ವಾಮಿ, ಸಂಗೀತ ನಿರ್ದೇಶಕ ಮಂಜುಕವಿ, ಹಾಡು ಬರೆದಿರುವ ಕಿನ್ನಾಳ್ ರಾಜ್, ಹಿನ್ನೆಲೆ ಸಂಗೀತ ನೀಡಿರುವ ಪ್ರದ್ಯೋತನ್, ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಹಾಗೂ ಚಿತ್ರಕಥೆ ಬರೆದಿರುವ ದಯಾಶಂಕರ್ ಮುಂತಾದವರು "ಶಿಖಂಡಿ" ಚಿತ್ರದ ಕುರಿತು ಮಾತನಾಡಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.