Skip to main content

"ಕವಳ" ನೆತ್ತರಿನ ಕಥೆ .. ಈ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ...

"ಕವಳ" ನೆತ್ತರಿನ ಕಥೆ .. ಈ ಚಿತ್ರಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಚಾಲನೆ...
    ‌ರಾಧಾಕೃಷ್ಣ ಆರ್ಟ್ಸ್ ಹಾಗೂ ಡ್ರೀಮ್ ವರ್ಲ್ಡ್ ಸಿನಿಮಾಸ್ ಮೂಲಕ ಲೋಕೇಶ್ ಬಿ. ಹಾಗೂ ಅಡವಯ್ಯ ಪೂಜಾರ್ ಅವರ ನಿರ್ಮಾಣದ ಕವಳ ಚಿತ್ರದ ಮುಹೂರ್ತ ಸಮಾರಂಭ ನಗರದ ಕಾಡು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಅದ್ದೂರಿಯಾಗಿ ನೆರವೇರಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕ್ರೇಜಿ ಸ್ಟಾರ್ ರವಿಚಂದ್ರನ್ ಅವರು ಕವಳ ಚಿತ್ರಕ್ಕೆ ಚಾಲನೆ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
     ಈ ಹಿಂದೆ ಆರ್.ಎಕ್ಸ್.ಸೂರಿ, ಭೈರಾದೇವಿ ಚಿತ್ರಗಳನ್ನು ನಿರ್ದೇಶಿಸಿದ್ದ ಶ್ರೀ ಜೈ ಅವರು ಈ ಚಿತ್ರದ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.  
   ಸಂದೀಪ್ ನಾಗರಾಜ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರದಲ್ಲಿ ತಮಿಳಿನ ಹೆಸರಾಂತ ತಂತ್ರಜ್ಞ ಸಮುದ್ರಖನಿ ಅವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ಶ್ರೀ ಜೈ ಕವಳ ಎಂದರೆ ತಾಂಬೂಲ‌. ಅದನ್ನು ಜಗಿದಾಗ ಬರುವ ಕೆಂಪುಬಣ್ಣವನ್ನು ಚಿತ್ರದಲ್ಲಿ ಹೇಳಿದ್ದೇವೆ‌. ಒಂದಷ್ಟು ನೈಜಘಟನೆಗಳನ್ನು ಸ್ಪೂರ್ತಿಯಾಗಿಟ್ಟುಕೊಂಡು ಈ ಚಿತ್ರದ ಕಥೆ ಹೆಣೆದಿದ್ದೇನೆ. ಒಂದು ಸ್ಟ್ರಾಂಗ್ ರೀಜನ್ ಗೋಸ್ಕರ ಹರಿಯುವ ರಕ್ತಧಾರೆ. ಕವಳನ ಕಥೆ ಸ್ಪೂರ್ತಿಯಾಗಿರಬಹುದು. ಅದರೆ ಇದು ಆತನದೇ ಕಥೆಯಲ್ಲ. ಯುಗಾದಿ ನಂತರ ಆರಂಭಿಸಿ ಕಾಶಿ, ಹೈದರಾಬಾದ್ ಸೇರಿದಂತೆ ಹಲವಾರು ಲೊಕೇಶನ್ ಗಳಲ್ಲಿ ಶೂಟ್ ಮಾಡುವ ಯೋಜನೆಯಿದೆ. ಸಮುದ್ರಖನಿ ಅವರದು ಹೊರರಾಜ್ಯದಿಂದ ಬಂದವರ ಹೇಗೆ ಕನ್ನಡ ಮಾತಾಡುತ್ತಾರೋ ಅದೇ ರೀತಿ ಇರುತ್ತದೆ. ನಿರ್ಮಾಪಕರು ನನ್ನನ್ನು ನಂಬಿ ದೊಡ್ಡ ಮಟ್ಟದ ಬಂಡವಾಳ ಹಾಕುತ್ತಿದ್ದಾರೆ. ಸ್ಕ್ರಿಪ್ಟ್ ಅದ್ಭುತವಾಗಿ ಮೂಡಿಬಂದಿದೆ ಎಂದರು. ನಂತರ ಸಮುದ್ರಖನಿ ಮಾತನಾಡುತ್ತ ಕನ್ನಡದಲ್ಲಿ ಪುನೀತ್ ರಾಜಕುಮಾರ್ ಅವರ ಜತೆ ಎರಡು ಸಿನಿಮಾ ಮಾಡಿದ್ದು ಮರೆಯಲಾಗದ ಅನುಭವ. ನನ್ಎ ಕನ್ನಡ ಸ್ವಲ್ಪ ಬರುತ್ತೆ. ಇದರಲ್ಲಿ ಒಂದು ನೆಗೆಟಿವ್ ಪಾತ್ರ ಮಾಡುತ್ತಿದ್ದೇನೆ ಎಂದರು. ನಿರ್ಮಾಪಕ ಲೋಕೇಶ್ ಮಾತನಾಡಿ ಸ್ಟಾರ್ಟಪ್ ಬ್ಯುಸಿನೆಸ್ ಮಾಡುತ್ತಿದ್ದೇನೆ.‌ಮೊದಲಿಂದಲೂ ಸಿನಿಮಾ ಬಗ್ಗೆ ಒಲವಿತ್ತು ಎಂದರು. ಮತ್ತೊಬ್ಬ ನಿರ್ಮಾಪಕ ಅಡವಯ್ಯ ಪೂಜಾರ್ ಮಾತನಾಡಿ ಸುಮಾರು 40 ಕಥೆಗಳನ್ನು ಕೇಳಿ ಇದನ್ನು ಫೈನಲ್ ಮಾಡಿದ್ದೇನೆ. ಗೂಗ್ಲಿಯಲ್ಲಿ ಸಂದೀಪ್ ಅಭಿನಯ ನೋಡಿದ್ದೆ. ನಾಯಕನ ಪಾತ್ರಕ್ಕೆ ಅವರೇ ಬೇಕೆಂದು ನಿರ್ದೇಶಕರಿಗೆ ಒತ್ತಾಯಿಸಿದೆ.ಸಮುದ್ರಖನಿ ಅವರ ಒಪ್ಪುತ್ತಾರೆ ಎಂಬ ನಂಬಿಕೆಯಿರಲಿಲ್ಲ ಎಂದು ಹೇಳಿದರು.
 ನಾಯಕ ಸಂದೀಪ್ ನಾಗರಾಜ್ ಮಾತನಾಡಿ ನಾನು ಈಪಾತ್ರ ಮಾಡುತ್ತೇನೆ ಎಂದು ನನ್ನ ನಂಬಿ ಇಂಥ ದೊಡ್ಡ ಪಾತ್ರ ಕೊಟ್ಟಿದ್ದಾರೆ. ‌ಚೆನ್ನಾಗಿ ಮಾಡುತ್ತೇನೆ ಎಂದರು.‌
 ಈ ಚಿತ್ರಕ್ಕೆ ಎ.ಕರುಣಾಕರನ್ ಅವರ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಅವರ ಸಂಗೀತ, ಅರ್ಜುನ್ ರಾಜ್, ವಿಕ್ರಮ್ ಮೋರ್ ಅವರ ಸಾಹಸ, ಕಲೈ, ಮುರಳಿ ಅವರ ನೃತ್ಯ, ದೀಪು ಎಸ್.ಕುಮಾರ್ ಅವರ ಸಂಕಲನವಿದೆ.            
   ಕವಳ ಚಿತ್ರದ ಉಳಿದ ಪಾತ್ರಗಳಲ್ಲಿ ಹಿರಿಯ ನಟರಾದ ಅಚ್ಯುತ್ ಕುಮಾರ್, ರಂಗಾಯಣ ರಘು, ನಾಜರ್, ಈಶ್ವರಿರಾವ್, ಬಲ ರಾಜವಾಡಿ, ಕಿಶೋರ್, ಶ್ರವಣ್, ಗಿಲ್ಲಿ ನಟ, ಪ್ರಕಾಶ್ ತುಮ್ಮಿನಾಡ್ ಹಾಗೂ ಇತರರು ನಟಿಸುತ್ತಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.