Skip to main content

ಫಿಲ್ಮ್ ಫೇರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಮರ್ಜಿತ್ ಲಂಕೇಶ್..

ಫಿಲ್ಮ್ ಫೇರ್ ಪ್ರಶಸ್ತಿ ಮುಡಿಗೇರಿಸಿಕೊಂಡ ಸಮರ್ಜಿತ್ ಲಂಕೇಶ್..
ಕೇರಳದ ಕೊಚ್ಚಿಯಲ್ಲಿ ಇತ್ತೀಚೆಗೆ ನಡೆದ 2024ನೇ ಸಾಲಿನ 70ನೇ ಫಿಲ್ಮ್‌ಫೇರ್ ಪ್ರಶಸ್ತಿ ಕಾರ್ಯಕ್ರಮದಲ್ಲಿ ‘ಗೌರಿ’ ಚಿತ್ರದ ಅಭಿನಯಕ್ಕಾಗಿ ಸಮರ್ಜಿತ್‍ ಲಂಕೇಶ್‍ ಅವರಿಗೆ ಅತ್ಯುತ್ತಮ ನವ ನಟ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇದು ಲಂಕೇಶ್‍ ಕುಟುಂಬಕ್ಕೆ ಸಿಗುತ್ತಿರುವ ಮೂರನೆಯ ಪ್ರತಿಷ್ಠಿತ ಪ್ರಶಸ್ತಿಯಾಗಿದೆ.
ಇದಕ್ಕೂ ಮೊದಲು, ಕನ್ನಡದ ಜನಪ್ರಿಯ ಸಾಹಿತಿ ಮತ್ತು ‘ಲಂಕೇಶ್ ‍ಪತ್ರಿಕೆ’ ಸಂಪಾದಕರಾಗಿದ್ದ ಪಿ. ಲಂಕೇಶ್‍ ಅವರು 1980ರಲ್ಲಿ ‘ಎಲ್ಲಿಂದಲೋ ಬಂದವರು’ ಚಿತ್ರದ ನಿರ್ದೇಶನಕ್ಕಾಗಿ ಫಿಲ್ಮ್‌ಫೇರ್ (ದಕ್ಷಿಣ) ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು. ತಮ್ಮ ಬರವಣಿಗೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಪ್ರಖರವಾಗಿ ಬೆಳಗಿದ್ದ ಲಂಕೇಶ್‍, ಅಪಾರ ಸಂಖ್ಯೆಯ ಓದುಗರ ಪ್ರೀತಿಪಾತ್ರರಾಗಿದ್ದರು. ಚಿತ್ರರಂಗದಲ್ಲೂ ನಿರ್ದೇಶಕರಾಗಿ ದೊಡ್ಡ ಹೆಸರು ಮಾಡಿದ್ದ ಅವರು, ‘ಪಲ್ಲವಿ’, ‘ಅನುರೂಪ’, ‘ಖಂಡವಿದೆಕೋ ಮಾಂಸವಿದೆಕೋ’ ಮತ್ತು ‘ಎಲ್ಲಿಂದಲೋ ಬಂದವರು’ ಚಿತ್ರಗಳನ್ನು ನಿರ್ದೇಶಿಸುವುದರ ಜೊತೆಗೆ, ಈ ಚಿತ್ರಗಳಿಗೆ ಹಲವು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
‘ತುಂಟಾಟ’ ಚಿತ್ರದ ಮೂಲಕ ನಿರ್ದೇಶಕರಾದ ಲಂಕೇಶ್‍ ಅವರ ಮಗ ಇಂದ್ರಜಿತ್‍ ಲಂಕೇಶ್‍, ಮುಂದಿನ ದಿನಗಳಲ್ಲಿ ‘ಮೋನಾಲಿಸಾ’, ‘ಐಶ್ವರ್ಯ’, ‘ಹುಡುಗ ಹುಡುಗಿ’, ‘ಲವ್‍ ಯೂ ಆಲಿಯಾ’, ‘ಶಕೀಲಾ’ (ಪ್ಯಾನ್‍ ಇಂಡಿಯಾ ಚಿತ್ರ), ‘ಗೌರಿ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದವರು. ಉಪೇಂದ್ರ ಮತ್ತು ದೀಪಿಕಾ ಪಡುಕೋಣೆ ಅಭಿನಯದ ‘ಐಶ್ವರ್ಯ’ ಚಿತ್ರದ ನಿರ್ದೇಶನಕ್ಕಾಗಿ ಅವರು ಪ್ರತಿಷ್ಠಿತ ಫಿಲ್ಮ್‌ಫೇರ್ ಸಂಸ್ಥೆಯಿಂದ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದಿದ್ದರು.
ಈಗ ಲಂಕೇಶ್‍ ಕುಟುಂಬದ ಮೂರನೆ ತಲೆಮಾರಿನ ಕುಡಿಯಾದ ಸಮರ್ಜಿತ್‍, ತಮ್ಮ ತಾತ ಮತ್ತು ತಂದೆಯ ರೀತಿಯಲ್ಲೇ, ತಮ್ಮ ಚೊಚ್ಚಲ ಅಭಿನಯದ ಚಿತ್ರಕ್ಕೆ ಪ್ರಶಸ್ತಿ ಪಡೆದಿದ್ದಾರೆ. ‘ಗೌರಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ಸಮರ್ಜಿತ್‍, ಮೊದಲ ಚಿತ್ರದಲ್ಲೇ ತಮ್ಮ ಪ್ರತಿಭೆಯಿಂದ ಗಮನಸೆಳೆದಿದ್ದರು. ಮೊದಲ ಪ್ರಯತ್ನದಲ್ಲೇ ಜನರ ಪ್ರೀತಿಗೆ ಪಾತ್ರರಾಗಿದ್ದರು. ಇದೀಗ ಅವರು, ‘ಗೌರಿ’ ಚಿತ್ರದ ಅಭಿನಯಕ್ಕಾಗಿ ಫಿಲ್ಮ್‌ಫೇರ್ ನಿಂದ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇನ್ನಷ್ಟು ಭರವಸೆ ಮೂಡಿಸಿದ್ದಾರೆ.

‘ಗೌರಿ’ ಚಿತ್ರದ ನಂತರ ಕಳೆದ ವರ್ಷ ಬಿಡುಗಡೆಯಾಗಿದ್ದ ‘ವೃಷಭ’ ಎಂಬ ಪ್ಯಾನ್‍ ಇಂಡಿಯಾ ಚಿತ್ರದಲ್ಲಿ ನಟಿಸಿದ್ದ ಸಮರ್ಜಿತ್‍, ಮೋಹನ್‍ ಲಾಲ್‍ರಂತಹ ದಿಗ್ಗಜ ನಟರ ಎದುರು ನಟಿಸಿ, ಸೈ ಎನಿಸಿಕೊಂಡಿದ್ದಾರೆ. ಇಡೀ ಚಿತ್ರವನ್ನು ತಮ್ಮ ಹೆಗಲ ಮೇಲೆ ಹೊತ್ತು ಮುನ್ನಡೆಸಿದ್ದಾರೆ. ಈ ಚಿತ್ರದಲ್ಲಿನ ಅವರ ಅಭಿನಯಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಹಲವು ಅವಕಾಶಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ಈ ಪೈಕಿ ಒಂದು ಕನ್ನಡ ಮತ್ತು ಒಂದು ಹಿಂದಿ ಚಿತ್ರಗಳನ್ನು ಸಮರ್ಜಿತ್‍ ಒಪ್ಪಿಕೊಂಡಿದ್ದು, ಈ ಚಿತ್ರಗಳನ್ನು ಜನಪ್ರಿಯ ನಿರ್ದೇಶಕರು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರಗಳ ಇನ್ನಷ್ಟು ವಿವರಗಳು ಸದ್ಯದಲ್ಲೇ ಹೊರಬೀಳಲಿವೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.