Skip to main content

ಈ ವಾರ ತೆರೆಗೆ "ಆಲ್ಫಾ" #men love vengeance"...

ಈ ವಾರ ತೆರೆಗೆ "ಆಲ್ಫಾ" #men love vengeance"...L A ಪ್ರೊಡಕ್ಷನ್ಸ್ ನಿರ್ಮಾಣದ ಹಾಗೂ ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಹೇಮಂತ್ ಕುಮಾರ್ ನಾಯಕ..
 ಒಂದೊಳ್ಳೆ ಕಂಟೆಂಟ್ ವುಳ್ಳ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಆಲ್ಫಾ #men love vengeance" ಚಿತ್ರ ಈ ವಾರ(ಫೆಬ್ರವರಿ 20)ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
L A ಪ್ರೊಡಕ್ಷನ್ಸ್ ಲಾಂಛನದಲ್ಲಿ ಆನಂದಕುಮಾರ್ ಅವರು ನಿರ್ಮಿಸಿರುವ ಈ ಚಿತ್ರವನ್ನು ವಿಜಯ್ ನಿರ್ದೇಶಿಸಿದ್ದಾರೆ. ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ " ಗೀತಾ" ಹಾಗೂ ಧನಂಜಯ್ ನಟನೆಯ "ಗುರುದೇವ ಹೊಯ್ಸಳ" ಚಿತ್ರಗಳ ನಂತರ ವಿಜಯ್ ಅವರು ನಿರ್ದೇಶಿಸಿರುವ ಮೂರನೇ ಚಿತ್ರ "ಆಲ್ಫಾ"#men love vengeance".
ಹೇಮಂತ್ ಕುಮಾರ್ ಎಂಬ ನೂತನ ಪ್ರತಿಭೆ ಈ ಚಿತ್ರದ ನಾಯಕನಾಗಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ನವನಾಯಕನಟನಾಗಿ ಪದಾರ್ಪಣೆ ಮಾಡುತ್ತಿದ್ದಾರೆ. ನಾಯಕಿಯಾಗಿ ಗೋಪಿಕಾ ಸುರೇಶ್ ಹಾಗೂ ಅಯನಾ ನಟಿಸಿದ್ದಾರೆ. " ಬಿಗ್ ಬಾಸ್" ಖ್ಯಾತಿಯ ಕಾರ್ತಿಕ್ ಮಹೇಶ್ ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವಿನಾಶ್, ಅಚ್ಯುತ್ ಕುಮಾರ್, ರಮೇಶ್ ಇಂದಿರಾ, ಬಾಲು ನಾಗೇಂದ್ರ, ಮಾನಸಿ ಸುಧೀರ್, ಗಿರಿರಾಜ್, ರಾಘು ಶಿವಮೊಗ್ಗ ಹೀಗೆ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಈ ಚಿತ್ರದಲ್ಲಿದೆ.
 ನಾಗಾರ್ಜುನ ಶರ್ಮ ಅವರು ಬರೆದಿರುವ ಐದು ಹಾಡುಗಳು ಚಿತ್ರದಲ್ಲಿದ್ದು, ಹೆಸರಾಂತ ಸಂಗೀತ ನಿರ್ದೇಶಕ ಜೆ.ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ಚಂಪಕಧಾಮ ಬಾಬು ನಿರ್ಮಾಣ ನಿರ್ವಹಣೆ, ಅಮರ್ ಕಲಾ ನಿರ್ದೆಶನ ಹಾಗೂ ಭೂಷಣ್ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಜನಪ್ರಿಯ ಸಂಭಾಷಣೆಗಾರ ಮಾಸ್ತಿ ಸಂಭಾಷಣೆ ಬರೆದಿದ್ದಾರೆ. ಮೈನವಿರೇಳಿಸುವ ಸಾಹಸ ಸನ್ನಿವೇಶಗಳು ಚಿತ್ರದಲ್ಲಿದ್ದು, ವಿಜಯ್, ವಿನೊದ್, ಅರ್ಜುನ್ ರಾಜ್ ಹಾಗೂ ಯೋಗಾನಂದ ಸಾಹಸ ನಿರ್ದೇಶನ ಮಾಡಿದ್ದಾರೆ.
ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ "ಆಲ್ಫಾ #men love vengeance" ಎಲ್ಲರ ಗಮನ ಸೆಳೆದಿದೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...