Skip to main content

ಸಮಯದ ಮಹತ್ವ ಸಾರುವ ಚಂದನ್ ಶೆಟ್ಟಿ ಅಭಿನಯದ ಹಾಗೂ ಸುಜಯ್ ಶಾಸ್ತ್ರಿ ನಿರ್ದೇಶನದ "ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರ ಏಪ್ರಿಲ್ 17 ರಂದು ತೆರೆಗೆ"

ಸಮಯದ ಮಹತ್ವ ಸಾರುವ ಚಂದನ್ ಶೆಟ್ಟಿ ಅಭಿನಯದ ಹಾಗೂ ಸುಜಯ್ ಶಾಸ್ತ್ರಿ ನಿರ್ದೇಶನದ "ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರ ಏಪ್ರಿಲ್ 17 ರಂದು ತೆರೆಗೆ"
ಹಾಸ್ಯ ನಟನಾಗಿ ಎಲ್ಲರ ಗಮನ ಸೆಳೆದಿರುವ ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಖ್ಯಾತ ಗಾಯಕ - ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಪೂರ್ವದಲ್ಲಿ ಚಿತ್ರತಂಡ "ಮಾತು ಮಧುರ" ಎಂಬ ಹಾಡನ್ನು ಆನಂದ್ ಆಡಿಯೋ ಮೂಲಕ ಅನಾವರಣ ಮಾಡಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 
ಕಾರಣಾಂತರದಿಂದ ನಮ್ಮ ಚಿತ್ರ ಬಿಡುಗಡೆ ತಡವಾಗಿದೆ. ಈಗ ಬಿಡುಗಡೆಗೆ ಮುಹೂರ್ತ ಕೂಡಿ ಬಂದಿದೆ ಎಂದು ಮಾತನಾಡಿದ ನಿರ್ದೇಶಕ ಸುಜಯ್ ಶಾಸ್ತ್ರಿ, ಇದೊಂದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಕನಕಪುರದಲ್ಲೇ ಹೆಚ್ಚಿನ ಭಾಗದ ಚಿತ್ರೀಕರಣವಾಗಿದೆ. ಸಮಯದ ಮಹತ್ವ ಸಾರುವ ಈ ಚಿತ್ರಕ್ಕೆ ನನ್ನ ಸ್ನೇಹಿತ ರಾಜಗುರು ಹೊಸಕೋಟೆ ಕಥೆ ಬರೆದಿದ್ದಾರೆ. ಕಥೆಗೆ ಈ ಶೀರ್ಷಿಕೆ ಪೂರಕವಾಗಿದೆ. ಇದು ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಅರ್ಚನಾ ಕೊಟ್ಟಿಗೆ ಈ ಚಿತ್ರದ ನಾಯಕಿ. ದತ್ತಣ್ಣ, ತಾರಾ ಅನುರಾಧ, ಮಂಜು ಪಾವಗಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇಂದು "ಮಾತು ಮಧುರ" ಹಾಡು ಬಿಡುಗಡೆ ಮಾಡಿದ್ದೇವೆ. ಪ್ರವೀಣ್ - ಪ್ರದೀಪ್ ಸಂಗೀತ ನೀಡಿದ್ದಾರೆ. ಗೋವಿಂದರಾಜು ಅವರು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡಿದ್ದಾರೆ. ಕೌಟುಂಬಿಕ ಕಾಮಿಡಿ ಜಾನರ್ ನ ಈ ಚಿತ್ರ ಏಪ್ರಿಲ್ 17 ರಂದು ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.               
ಇದು ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರ. ಸಾಕಷ್ಟು ತಯಾರಿ ಮಾಡಿಕೊಂಡು ಈ ಚಿತ್ರದಲ್ಲಿ ನಟಿಸಿದ್ದೇನೆ. ಪಾತ್ರಕ್ಕಾಗಿ ದೇಹದ ತೂಕ ಸಹ ಹೆಚ್ಚಿಸಿಕೊಂಡಿದ್ದೆ. ಸಮಯಕ್ಕೆ ಬೆಲೆ ಕೊಡಬೇಕು. ಇಲ್ಲದಿದ್ದರೆ ಏನೆಲ್ಲಾ ಆಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಮನಮುಟ್ಟುವ ಹಾಗೆ ತೋರಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ ಎಂದು ನಾಯಕ ಚಂದನ್ ಶೆಟ್ಟಿ ಹೇಳಿದರು .                                                                        ಇದು ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಮೂರನೇ ಚಿತ್ರ. ಒಂದೊಳ್ಳೆ ಸಂದೇಶವಿರುವ ಚಿತ್ರವೂ ಹೌದು. ನಮ್ಮ ಚಿತ್ರವನ್ನು ಎಲ್ಲರು ಚಿತ್ರಮಂದಿರಗಳಲ್ಲೇ ನೋಡಿ ಎಂದರು ನಿರ್ಮಾಪಕ ಗೋವಿಂದರಾಜು.ಈ ಚಿತ್ರದಲ್ಲಿ ಐದು ಹಾಡುಗಳಿದೆ. ಇಂದು ಬಿಡುಗಡೆಯಾಗಿರುವ "ಮಾತು ಮಧುರ" ಹಾಡನ್ನು ದರ್ಶನ್ ನಾರಾಯಣ್ ಹಾಗೂ ಅನುರಾಧಾ ಭಟ್ ಹಾಡಿದ್ದಾರೆ. ನಾಲ್ಕು ಹಾಡುಗಳು 90ರ ಕಾಲಘಟದ ಹಾಡುಗಳ ಹಾಗೆ ಇರುತ್ತದೆ. ಒಂದು ಪ್ರಮೋಷನ್ ಸಾಂಗ್ ಇದ್ದು, ಅದನ್ನು ಚಂದನ್ ಶೆಟ್ಟಿ ಅವರೆ ಹಾಡಿ ಸಂಗೀತ ಸಂಯೋಜನೆ ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕರಾದ ಪ್ರವೀಣ್ - ಪ್ರದೀಪ್ ತಿಳಿಸಿದರು. 

ವಸಂತ ನನ್ನ ಪಾತ್ರದ ಹೆಸರು. ನಾನು ಈ ಚಿತ್ರದಲ್ಲಿ ಮೆಸ್ ಓನರ್ ಎಂದು ನಾಯಕಿ ಅರ್ಚನಾ ಕೊಟ್ಟಿಗೆ ಹೇಳಿದರು. ಚಿತ್ರ ಆರಂಭವಾದ ಕುರಿತು ಹಾಗೂ ಕಥೆ ಬಗ್ಗೆ ಕಥೆ ಬರೆದಿರುವ ರಾಜಗುರು ಹೊಸಕೋಟೆ ಮಾಹಿತಿ ನೀಡಿದರು. 

.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.