Skip to main content

‘ರಾಮರಸ’ದಲ್ಲಿ "ಗುರು ಸಿದ್ದ" ಪಾತ್ರದಲ್ಲಿ ಪ್ರಜ್ವಲ್‍ ದೇವರಾಜ್..

‘ರಾಮರಸ’ದಲ್ಲಿ "ಗುರು ಸಿದ್ದ" ಪಾತ್ರದಲ್ಲಿ ಪ್ರಜ್ವಲ್‍ ದೇವರಾಜ್..
ರಾಮನವಮಿ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಅವರಿಂದ ಕ್ಯಾರೆಕ್ಟರ್ ಟೀಸರ್ ಅನಾವರಣ... 
ಜಿ ಸಿನಿಮಾಸ್ ಮತ್ತು ಸೆವೆನ್ ಸ್ಟಾರ್ ಮೂವೀಸ್ ಜಂಟಿಯಾಗಿ ನಿರ್ಮಿಸುತ್ತಿರುವ ‘ರಾಮರಸ’ ಚಿತ್ರದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟಿಸಿದ್ದಾರೆ. ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ.ಗಿರಿರಾಜ್ ನಿರ್ದೇಶನದ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗುರು ಸಿದ್ಧ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕರ್ನಾಟಕದ ಅಲೆಮಾರಿ ಪರಂಪರೆಯಾದ 'ಸುಡುಗಾಡು ಸಿದ್ಧ' ಸಮುದಾಯದ ಹಿನ್ನೆಲೆಯನ್ನು ಈ ಪಾತ್ರ ಹೊಂದಿದೆ. ಇತ್ತೀಚೆಗೆ ರಾಮನವಮಿ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಅವರು "ಗುರು ಸಿದ್ದ" ಪಾತ್ರದ ಕ್ಯಾರೆಕ್ಟರ್ ಟೀಸರ್ ಅನಾವರಣ ಮಾಡಿ "ರಾಮರಸ" ಚಿತ್ರತಂಡಕ್ಕೆ ಶುಭ ಕೋರಿದರು. ಸಾಕಷ್ಟು ಗಣ್ಯರು ಸಮಾರಂಭಕ್ಕೆ ಸಾಕ್ಷಿಯಾದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   
 "ರಾಮರಸ" ಆರಂಭವಾದ್ದುದ್ದರ ಬಗ್ಗೆ ತಿಳಿಸಿ ಮಾತನಾಡಿದ ನಿರ್ಮಾಪಕ ಗುರು ದೇಶಪಾಂಡೆ, ನಮ್ಮ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರು ಅಭಿನಯಿಸಿರುವುದು ಬಹಳ ಖುಷಿಯಾಗಿದೆ. "ಜಂಟಲ್ ಮ್ಯಾನ್" ಚಿತ್ರದ ನಂತರ ಅವರ ನಮ್ಮ ಸಂಸ್ಥೆಯ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಗುರು ಸಿದ್ದ‌ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಪಾತ್ರ ಪವಾಡ ಪುರುಷರು ಎಂದೇ ಕರೆಯಲ್ಪಡುವ ಸುಡುಗಾಡು ಸಿದ್ದರ ಪಾತ್ರವಾಗಿರುತ್ತದೆ. ಅವರು ಪರಮಶಿವನ ಪರಮ ಭಕ್ತರು. ಒಂದೇ ಕಡೆ ಇರದ ಸಿದ್ದರು ಹಳ್ಳಿಹಳ್ಳಿಗೆ ಸಂಚಾರ ಮಾಡುವುದರ ಜೊತೆಗೆ, ಭವಿಷ್ಯ ನುಡಿಯುವುದು ಮತ್ತು ಅಪರೂಪದ ಗಿಡಮೂಲಿಕೆಗಳ ಮೂಲಕ ಚಿಕಿತ್ಸೆ ನೀಡುವುದು ಮುಂತಾದ ಜನಾನುರಾಗಿ ಕೆಲಸಗಳನ್ನು ಮಾಡುತ್ತಾರೆ. ಈ ಪಾತ್ರದ ಟೀಸರ್ ಅನಾವರಣ ಮಾಡಿಕೊಟ್ಟ ವಿನಯ್ ಗುರೂಜಿ ಅವರಿಗೆ ಅನಂತ ಧನ್ಯವಾದ. ಇನ್ನೂ , ಈ ಚಿತ್ರದ ಕೊನೆಯ ಇಪ್ಪತ್ತು ನಿಮಿಷಗಳ ಕ್ಲೈಮ್ಯಾಕ್ಸ್ ಅನ್ನು ಜನರು ಚಪ್ಪಲಿ ಬಿಟ್ಟು ನೋಡುವುದಂತು ಖಂಡಿತ. ಅಷ್ಟು ಅದ್ಭುತವಾಗಿ ಮೂಡಿಬಂದಿದೆ. ಹಾಡುಗಳು ಸಹ ಒಂದಕ್ಕಿಂತ ಒಂದು ಚೆನ್ನಾಗಿದೆ. ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂದರು.              
ಈ ಚಿತ್ರವನ್ನು ಗುರು ದೇಶಪಾಂಡೆ ಅವರು ಅದು ಹೇಗೆ ಕಡಿಮೆ ಬಜೆಟ್ ನಲ್ಲಿ ಮಾಡೋಣ ಅಂದುಕೊಂಡರೊ ಗೊತ್ತಿಲ್ಲ. ಇದೊಂದು ಬಿಗ್ ಬಿಗ್ ಬಜೆಟ್ ಸಿನಿಮಾ. ನನ್ನ ಪಾತ್ರ ಕೂಡ ಚೆನ್ನಾಗಿದೆ. ವಿ.ಎಫ್.ಎಕ್ಸ್ ವರ್ಕ್ ಅಂತೂ ಅದ್ಬುತವಾಗಿದೆ. ಇದು ಈ ವರ್ಷದ ದೊಡ್ಡ ಚಿತ್ರವಾಗಲಿದೆ ಎಂದು ಪ್ರಜ್ವಲ್ ದೇವರಾಜ್ ಹೇಳಿದರು.  ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡದವರಿಗೆ ಸಹ ನಿರ್ಮಾಪಕ ವಿಕ್ರಮ್ ಆರ್ಯ ಧನ್ಯವಾದ ಹೇಳಿದರು. 
 ಚಿತ್ರತಂಡದಿಂದ ನೀಡಲಾದ ರೈಸಿಂಗ್ ಸ್ಟಾರ್ ಎಂಬ ಬಿರುದು ಸ್ವೀಕರಿಸಿ ಮಾತನಾಡಿದ ನಾಯಕ ಕಾರ್ತಿಕ್ ಮಹೇಶ್, ಪ್ರಜ್ವಲ್ ದೇವರಾಜ್ ಅವರಿಂದ ನಾನು ಈ ಬಿರುದು ಸ್ವೀಕರಿಸಿದ್ದು ಖುಷಿಯಾಗಿದೆ. ಒಂದೊಳ್ಳೆ ಚಿತ್ರದಲ್ಲಿ ನಟಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಎಂದರು.          
ಛಾಯಾಗ್ರಾಹಕ ಕೆ.ಕೃಷ್ಣಕುಮಾರ್, ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ, ಗೀತರಚನೆಕಾರರಾದ ಡಾ||ವಿ.ನಾಗೇಂದ್ರ ಪ್ರಸಾದ್, ಪುನೀತ್ ರಂಗಸ್ವಾಮಿ, ಸಾಹಸ ನಿರ್ದೇಶಕ ಅರ್ಜುನ್ ಮಾಸ್ಟರ್, ನಟಿ ಯಮುನಾ ಶ್ರೀನಿಧಿ ಮುಂತಾದವರು "ರಾಮರಸ" ಚಿತ್ರದ ಕುರಿತು ಮಾತನಾಡಿದರು. ಕಾರ್ಯಕ್ರಮದ ಆರಂಭದಲ್ಲಿ "ಜಂಟಲ್ ಮ್ಯಾನ್" ಚಿತ್ರಕ್ಕಾಗಿ ರಾಜ್ಯ ಪ್ರಶಸ್ತಿ ಪಡೆದಿರುವ ಪ್ರಜ್ವಲ್ ದೇವರಾಜ್ ಅವರನ್ನು ಸನ್ಮಾನಿಸಲಾಯಿತು. ಆ ಚಿತ್ರದ ನಿರ್ದೇಶಕ ಜಡೇಶ್ ಹಂಪಿ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.