ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ'ಕಾಮನ್ ಮ್ಯಾನ್' ಆದ ಗೌರೀಶಂಕರ್... ಸಾಮಾನ್ಯ ವ್ಯಕ್ತಿಯೊಬ್ಬ ರಾಜ್ಯದ ಮುಖ್ಯಮಂತ್ರಿಯಾದರೆ ಹೇಗಿರುತ್ತೆ ಎಂಬ ಎಳೆ ಇಟ್ಟುಕೊಂಡು ಕಥೆ ಬರೆದು ಸುರಭಿ ಫಿಲಂಸ್ ಅಡಿ ಎನ್. ನರಸಿಂಹಮೂರ್ತಿ ಅವರು 'ಕಾಮನ್ ಮ್ಯಾನ್' ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಅವರು ಈ ಚಿತ್ರದ ಚಿತ್ರಕಥೆ ರಚಿಸಿ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕೆರೆಬೇಟೆ ಖ್ಯಾತಿಯ ನಟ ಗೌರೀಶಂಕರ್ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಲಾಂಚ್ ಕಾರ್ಯಕ್ರಮ ನಡೆಯಿತು. ವಿನಯ ಚಂದ್ರ ಅವರ ಸಂಗೀತ ನಿರ್ದೇಶನ, ಜೆ.ಜಿ.ಕೃಷ್ಣ, ದೀಪಕ್ ಕುಮಾರ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಾಯಿಪ್ರಕಾಶ್ ನನ್ನ ನಿರ್ದೇಶನದ 106ನೇ ಚಿತ್ರವಿದು. ಒಬ್ಬ ಕಾಮನ್ ಮ್ಯಾನ್ ರಾಜ್ಯದ ಸಿಎಂ ಆದರೆ ಏನು ಮಾಡಬಹುದು ಎಂದು ನಮ್ಮ ಚಿತ್ರದ ಮೂಲಕ ತೋರಿಸಿದ್ದೇವೆ. ಜೀವನದಲ್ಲಿ ಪ್ರತಿಯೊಬ್ಬರಿಗೂ ಒಂದೊಂದು ಆಸೆ ಇರುತ್ತೆ. ನಾಯಕ ಒಬ್ಬ ಲಾಯರ್, ಆತ ಅನಿರೀಕ್ಷಿತವಾಗಿ ರಾಜ್ಯದ ಸಿಎಂ ಆಗ್ತಾನೆ. ನಂತರ ಆತ ಏನೇನು ಮಾಡಬಹುದು, ಸಮಾಜದಲ್ಲಿ ಏನಾದರೂ ಸುಧಾರಣೆ ಮಾಡಲು ಸಾಧ್ಯವಾಯಿತಾ ಎಂಬುದನ್ನು ಕುತೂಹಲಕರವಾಗಿ ಹೇಳೋ ಪ್ರಯತ್ನ ಮಾಡಿದ್ದೇನೆ. ನಾಯಕನ ತಂದೆ ಒಬ್ಬ ಕಲಾವಿದ. ತನ್ನ ಮಗ ಲಾಯರ್ ಆಗಿ ...