ಬೆಂಗಳೂರಿನಲ್ಲಿ ನಡೆದ ಸಿರಿ ವುಮನ್ ಅಚೀವರ್ಸ್ ಅವಾರ್ಡ್ 2026 ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು .ಇದೇ ಸಮಾರಂಭದಲ್ಲಿ ಹಲವು ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ತೋರಿದ ಮತ್ತು ವಾಲಿಬಾಲ್ ಕ್ರೀಡೆಯಲ್ಲಿ ಚಿನ್ನದ ಪದಕ ಪಡೆದಿರುವ ಶ್ರೀಮತಿ ಭಾರತಿ ಪರಮೇಶ್ವರ್,ಅವರಿಗೆ "ಸಿರಿ ಕರ್ನಾಟಕ ಕೀರ್ತಿ ಪ್ರಶಸ್ತಿ"ನೀಡಲಾಯಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಮತಿ ಮಮತಾ ದಯಾನಂದ್, ಶ್ರೀಮತಿ ಮಮತಾ ದೇವರಾಜ್, ಪದ್ಮಶ್ರೀ ಜೋಗತಿ ಮಂಜಮ್ಮ, ಭುವನ ಸುಂದರಿ ಭವ್ಯ ಗೌಡ, ಖ್ಯಾತ ನಟಿ ಪ್ರಿಯಾಂಕಾ ಉಪೇಂದ್ರ, ಕಿರು ಮತ್ತು ಹಿರಿತೆರೆಯ ನಟಿ ಅಂಕಿತ ಜಯರಾಮ್ ಮತ್ತು ನಟಿ ರೂಪಿಕ ಇವರೆಲ್ಲರ ಸಹಭಾಗಿತ್ವದಲ್ಲಿ ಅನೇಕ ಗಣ್ಯ ಮಾನ್ಯ ಮಹಿಳೆಯರ ಅಪಾರ ಪರಿಶ್ರಮ ಮತ್ತು ಸಮರ್ಪಣೆಯಿಂದ ಕರ್ನಾಟಕದ ಹೆಮ್ಮೆಯನ್ನೂ, ಭಾರತದ ಕೀರ್ತಿಯನ್ನೂ ದುಪ್ಪಟ್ಟು ಮಾಡಿರುವ ಮಹಿಳಾ ರತ್ನಾ ಮಣಿಗಳನ್ನು ಗುರುತಿಸಿ, ಗೌರವ ಪ್ರಶಸ್ತಿಯನ್ನು ನೀಡಲಾಯಿತು.
ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.
ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು. ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು. ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...
Comments
Post a Comment