Skip to main content

ಟ್ರೇಲರ್ ನಲ್ಲೇ ಗಮನ ಸೆಳೆದ "ಎಲ್ರ ಕಾಲೆಳಿಯತ್ತೆ ಕಾಲ'....

ಟ್ರೇಲರ್ ನಲ್ಲೇ ಗಮನ ಸೆಳೆದ "ಎಲ್ರ ಕಾಲೆಳಿಯತ್ತೆ ಕಾಲ'....
ಚಂದನ್ ಶೆಟ್ಟಿ ಅಭಿನಯದ ಹಾಗೂ ಸುಜಯ್ ಶಾಸ್ತ್ರಿ ನಿರ್ದೇಶನದ ಈ ಚಿತ್ರ ಏಪ್ರಿಲ್ 17 ರಂದು ಬಿಡುಗಡೆ...
 ಸುಜಯ್ ಶಾಸ್ತ್ರಿ ನಿರ್ದೇಶನದ, ಗೋಕುಲ ಎಂಟರ್ಟೈನರ್ಸ್ ಲಾಂಛನದಲ್ಲಿ ಗೋವಿಂದರಾಜು ಅವರು ನಿರ್ಮಿಸಿರುವ ಹಾಗೂ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ "ಎಲ್ರ ಕಾಲೆಳಿಯತ್ತೆ ಕಾಲ" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. 90 ರ ಕಾಲಘಟ್ಟದ ರೆಟ್ರೊ ಶೈಲಿಯ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಗೆ ಚಂದನ್ ಶೆಟ್ಟಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಏಪ್ರಿಲ್ 17 ರಂದು ಚಿತ್ರ ಬಿಡುಗಡೆಯಾಗುತ್ತಿದ್ದು, ಚಿತ್ರ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ‌. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಬಗ್ಗೆ ಹೇಳಿದ್ದು ಹೀಗೆ.  
ಮೊದಲಿಗೆ ಕೇಳಿದನ್ನೆಲ್ಲಾ ಕೊಟ್ಟು ಒಂದೊಳ್ಳೆ ಚಿತ್ರ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕರಿಗೆ ಧನ್ಯವಾದ ಎಂದು ಮಾತನಾಡಿದ ನಿರ್ದೇಶಕ ಸುಜಯ್ ಶಾಸ್ತ್ರಿ, ರಿಯಾಲಿಟಿ ಶೋ ವೊಂದರಲ್ಲಿ ಚಂದನ್ ಶೆಟ್ಟಿ ಅವರನ್ನು ನೋಡಿದ ನನಗೆ ನಮ್ಮ ಕಥೆಗೆ ಇವರು ಸೂಕ್ತ ನಾಯಕ ಎಂದೆನಿಸಿತು. ನಂತರ ಚಂದನ್ ಶೆಟ್ಟಿ ಅವರಿಗೆ ನನ್ನ ಗೆಳೆಯ ರಾಜಗುರು ಹೊಸಕೋಟೆ ಬರೆದಿರುವ ಈ ಚಿತ್ರದ ಕಥೆ ಹೇಳಿದ್ದೆವು. ಚಂದನ್ ಅಭಿನಯಿಸಲು ಒಪ್ಪಿದರು. ಚಿತ್ರೀಕರಣಕ್ಕೂ ಮುನ್ನ ಪೂರ್ವತಯಾರಿ ನೀಡಲಾಯಿತು. ಈ ಚಿತ್ರಕ್ಕಾಗಿ ಚಂದನ್ ಬಹಳ ಶ್ರಮ ಪಟ್ಟಿದ್ದಾರೆ. ನಾಯಕಿ ಅರ್ಚನಾ ಕೊಟ್ಟಿಗೆ ಸಹ ಉತ್ತಮವಾಗಿ ಅಭಿನಯಿಸಿದ್ದಾರೆ. ಎಲ್ಲರ ಮನಸ್ಸಿಗೂ ಹತ್ತಿರವಾಗುವಂತಹ ಕಥೆಯನ್ನು ರಾಜಗುರು ಹೊಸಕೋಟೆ ಬರೆದಿದ್ದಾರೆ. ಪ್ರವೀಣ್ - ಪ್ರದೀಪ್ ಸುಮಧುರ ಸಂಗೀತ ನೀಡಿದ್ದಾರೆ. ತಂತ್ರಜ್ಞರ ಕಾರ್ಯ ವೈಖರಿ ಹಾಗೂ ಸಹ ಕಲಾವಿದರ ನಟನೆ ಸೊಗಸಾಗಿದೆ. ಏಪ್ರಿಲ್ 17 ನಮ್ಮ ಚಿತ್ರ ತೆರೆಗೆ ಬರುತ್ತಿದೆ. ಎಲ್ಲರೂ ನೋಡಿ. ಪ್ರೋತ್ಸಾಹ ನೀಡಿ ಎಂದರು.             
 ನಾನು ಈ ಚಿತ್ರದಲ್ಲಿ ನಟಿಸಲು ಮೊದಲ ಕಾರಣ ಕಥೆ. ಅಂತಹ ಅದ್ಭುತ ಕಥೆ ಇದು. ಇಂತಹ ಚಿತ್ರವನ್ನು ದಯವಿಟ್ಟು ಎಲ್ಲರೂ ನೋಡಿ ಗೆಲ್ಲಿಸಬೇಕು. ನಾಯಕನಾಗಿ ಇದು ನನ್ನ ಮೊದಲ ಚಿತ್ರ. ಸುಜಯ್ ಶಾಸ್ತ್ರಿ, ರಾಜಗುರು ಹೊಸಕೋಟೆ ಅವರೆಲ್ಲಾ ರಂಗಭೂಮಿ ಹಿನ್ನೆಲೆಯವರು. ಅವರು ಒಂದು ರೀತಿ ಶಾಲೆ ಇದ್ದ ಹಾಗೆ. ಅವರಿಂದ ನಾನು ಸಾಕಷ್ಟು ಕಲಿತಿದ್ದೇನೆ. ಟ್ರೇಲರ್ ಗೆ ನಿರೀಕ್ಷೆಗೂ ಮೀರಿ ಮೆಚ್ಚುಗೆ ಸಿಕ್ಕಿದೆ. ಮನೆಮಂದಿಯೆಲ್ಲಾ ಒಟ್ಟಿಗೆ ಕುಳಿತು ನೋಡುವ ಒಂದೊಳ್ಳೆ ಚಿತ್ರ ಇದೇ ಹದಿನೇಳರಂದು ನಿಮ್ಮ ಮುಂದೆ ಬರಲಿದೆ. ಕನ್ನಡಿಗರಿಂದ ಕನ್ನಡಿಗರಿಗಾಗಿಯೇ ಮಾಡಿರುವ ಈ ಕನ್ನಡ ಚಿತ್ರವನ್ನು ಚಿತ್ರಮಂದಿರಗಳಲ್ಲೇ ನೋಡಿ ಎಂದರು ನಾಯಕ ಚಂದನ್ ಶೆಟ್ಟಿ.    ಸುಜಯ್ ಶಾಸ್ತ್ರಿ ಅವರ "ಗುಬ್ಬಿ ಮೇಲೆ ಬ್ರಹ್ಮಾಸ್ತ್ರ" ಚಿತ್ರ ನೋಡಿದ ಮೇಲೆ ಅವರ ನಿರ್ದೇಶನದಲ್ಲಿ ಚಿತ್ರವನ್ನು ನಿರ್ಮಿಸುವ ಆಸೆಯಾಯಿತು. ರಾಜಗುರು ಅವರು ಹೇಳಿದ ಕಥೆ ಇಷ್ಟವಾಯಿತು. ನಂತರ ಈ ಚಿತ್ರ ನಿರ್ಮಾಣವಾಯಿತು. ಇದೇ ಏಪ್ರಿಲ್ 17 ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ಕೆ.ವಿ.ಎನ್ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿದೆ ಎಂದು ನಿರ್ಮಾಪಕ ಗೋವಿಂದರಾಜು ಹೇಳಿದರು.  ಕಾಲದ ಮಹತ್ವ ಸಾರುವ ಕಥೆಯಿದು ಎಂದು ಕಥೆಯ ಬಗ್ಗೆ ರಾಜಗುರು ಹೊಸಕೋಟೆ ಮಾಹಿತಿ ನೀಡಿದರು. ತಮ್ಮ ಪಾತ್ರ ಚೆನ್ನಾಗಿದೆ ಎಂದು ನಾಯಕಿ ಅರ್ಚನಾ ಕೊಟ್ಟಿಗೆ ಹೇಳಿದರು. ಚಿತ್ರದಲ್ಲಿ ನಟಿಸಿರುವ ಮಂಜು ಪಾವಗಡ, ಮಾಹಂತೇಶ್, ಅನಂತ ಪದ್ಮನಾಭ ಹಾಗೂ ಸಂಗೀತ ನಿರ್ದೇಶಕ ಪ್ರದೀಪ್ ಚಿತ್ರದ ಕುರಿತು ಮಾತನಾಡಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.