Skip to main content

ಇದು ಸಿಡಿದಿದ್ದ ಹೆಣ್ಣಿನ ಕಥೆ ‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ..

ಇದು ಸಿಡಿದಿದ್ದ ಹೆಣ್ಣಿನ ಕಥೆ ‘ಮೃತ್ಯುದೇವತೆ’ ಚಿತ್ರದ ಟ್ರೇಲರ್ ಬಿಡುಗಡೆ..
ನವೀನ್‍ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ.
ಅದಕ್ಕೂ ಮೊದಲು ಗುರುವಾರ ಸಂಜೆ ಉತ್ಸವ್‍ ಲೆಗಸಿ ಸಭಾಂಗಣದಲ್ಲಿ ಚಿತ್ರದ ‘ಕಾಳಿ’ ಮತ್ತು ‘ಮಹದೇವ’ ಹಾಡುಗಳಲ್ಲದೆ ಟ್ರೇಲರ್ ಸಹ ಬಿಡುಗಡೆಯಾಯಿತು. ಮಾಜಿ ಕೌನ್ಸಿಲರ್ ಮತ್ತು ಉದ್ಯಮಿ ಕೆ. ರಮೇಶ್‍ ಟ್ರೇಲರ್ ಬಿಡುಗಡೆ ಮಾಡಿದರೆ, ಉದ್ಯಮಿ ಹಾಗೂ ಸಮಾಜಸೇವಕರಾದ ಶ್ರೀನಿವಾಸ್‍ ಅವರು ‘ಮಹಾದೇವ’ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಚಿತ್ರದಲ್ಲೊಂದು ಪ್ರಮುಖ ಪಾತ್ರ ನಿರ್ವಹಿಸಿರುವ ಹಿರಿಯ ನಟಿ ವಿನಯಾ ಪ್ರಸಾದ್‍, ‘ಕಾಳಿ’ ಹಾಡಿನ ಮೇಕಿಂಗ್‍ ವೀಡಿಯೋ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ನವೀನ್‍ ಮಹಾದೇವ್‍, ‘ಇದಕ್ಕೂ ಮೊದಲು ಕಿರುಚಿತ್ರ ಮಾಡಿದ್ದೆ. ಅದರ ಬಿಡುಗಡೆಗೂ ಮೊದಲೇ ‘ಮೃತ್ಯುದೇವತೆ’ ಚಿತ್ರಕ್ಕೆ ಮೊದಲ ಬಾರಿಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದೇನೆ. ಹೆಣ್ಮಕ್ಕಳು ಅದೆಷ್ಟೇ ಬುದ್ಧಿವಂತರಾದರೂ, ಎಷ್ಟೋ ಓದಿಕೊಂಡಿದ್ದರೂ ಕೆಲವೊಮ್ಮೆ ಗೊತ್ತಿಲ್ಲದೆ ಯಾವುದೋ ಬಲೆಗೆ ಬೀಳುತ್ತಾರೆ. ಅದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಿದ್ದೇನೆ. ‘ಕುಡಿತ, ದುಡ್ಡು, ಕೆಟ್ಟ ಸಹವಾಸ ಮತ್ತು ದುರಹಂಕಾರ ಇರುವವರ ಜೊತೆಗೆ ಮಾನಕ್ಕೆ ಅಂಜುವ ಹೆಣ್ಣು ಮಕ್ಕಳು ಇರಬಾರದು’ ಎಂಬ ಸಂಭಾಷಣೆಯೊಂದು ಚಿತ್ರದಲ್ಲಿದೆ. ಇದೆಲ್ಲದರಿಂದ ತೊಂದರೆಗೊಳಗಾದ ಹುಡುಗಿ ಸಹನೆಯಿಂದ ಈ ಮಾತು ಹೇಳಿ ಎದ್ದು ಹೋಗುತ್ತಾಳೆ. ಆ ತೊಂದರೆ ಅತಿರೇಕಕ್ಕೆ ಹೋದಾಗ ಹುಡುಗಿ ಮೃತ್ಯದೇವತೆ, ಚಂಡಿ-ಚಾಮುಂಡಿ ಅವತಾರ ತಾಳುತ್ತಾಳೆ. ಅದೇ ಈ ಚಿತ್ರದ ಕಥಾವಸ್ತು. ಹೊಸಬರೇನು ಮಾಡಿದ್ದಾರೆ ಅಂದುಕೊಳ್ಳದೆ ಚಿತ್ರವನ್ನು ನೋಡಿ ಹರಸಿ-ಹಾರೈಸಿ. ಚಿತ್ರವನ್ನು ಡಾ. ರಾಜಕುಮಾರ್‍ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆ ಮಾಡುವ ಯೋಚನೆ ಇದೆ. ಈಗಾಗಲೇ ಚಿತ್ರ ಸಂಪೂರ್ಣವಾಗಿದ್ದು, ಸದ್ಯದಲ್ಲೇ ಸೆನ್ಸಾರ್‍ ಆಗಲಿದೆ’ ಎಂದು ಹೇಳಿದರು.
ಇದಕ್ಕೂ ಮೊದಲು ‘ಸಹಾರಾ’ ಎಂಬ ಮಹಿಳಾ ಪ್ರಧಾನ ಚಿತ್ರದಲ್ಲಿ ನಟಿಸಿದ್ದ ಸಾರಿಕಾ, ‘ಈ ಚಿತ್ರದಲ್ಲಿ ನನ್ನದು ಆರತಿ ಎಂಬ ಪಾತ್ರ. ಆಕೆ ತುಂಬಾ ಮುಗ್ಧತೆ ಇರುವ ಹುಡುಗಿ. ಅಂತವಳನ್ನು ಕೆಣಕಿದಾಗ, ಯಾವ ಮಟ್ಟಕ್ಕೆ ಹೋಗಬಹುದು ಎಂದು ತೋರಿಸುವ ಪಾತ್ರ ನನ್ನದು. ಈ ಚಿತ್ರದಲ್ಲಿ ಮೊದಲ ಬಾರಿಗೆ ಫೈಟಿಂಗ್‍ ಸಹ ಮಾಡಿದ್ದೇನೆ. ಛಾಯಾಗ್ರಾಹಕ ಅನಿರುದ್ಧ್ ನಮ್ಮನ್ನೆಲ್ಲಾ ಬಹಳ ಚೆನ್ನಾಗಿ ತೋರಿಸಿದ್ದಾರೆ. ಹಲವು ದಿನಗಳ ಕಾಲ ನಾನು ಸೂರ್ಯನನ್ನೇ ನೋಡಿರಲಿಲ್ಲ. ಏಕೆಂದರೆ, ಸತತವಾಗಿ ರಾತ್ರಿ ಹೊತ್ತು ಚಿತ್ರೀಕರಣ ಮಾಡಿದ್ದೇವೆ. ರಾತ್ರಿ ಕಾಡಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಚಿತ್ರತಂಡ ಕೊಟ್ಟ ಸಂಪೂರ್ಣ ಸಹಕಾರ ಮತ್ತು ಪ್ರೋತ್ಸಾಹದಿಂದ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ಚಿತ್ರದಲ್ಲಿ ವಿನಯಾ ಪ್ರಸಾದ್‍ರಂತಹ ಹಿರಿಯರ ಜೊತೆಗೆ ಕೆಲಸ ಮಾಡಿದ ಅನುಭವ ಅದ್ಭುತವಾಗಿತ್ತು. ಅವರಿಂದ ಕಲಿಯುವುದು ಬಹಳಷ್ಟಿತ್ತು’ ಎಂದರು.
ಈ ತಂಡದ ಒಂದು ವೈಷಿಷ್ಟ್ಯತೆ ಎಂದರೆ ಅದು ಒಗ್ಗಟ್ಟು ಎಂದು ಮಾತು ಪ್ರಾರಂಭಿಸಿದ ಹಿರಿಯ ನಟಿ ವಿನಯಾ ಪ್ರಸಾದ್, ‘ಎಲ್ಲರೂ ಕೆಲಸದ ಘನತೆಯನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡು ಕೆಲಸ ಮಾಡಿದ್ದಾರೆ. ಈ ಪೋಸ್ಟರ್‍ನಲ್ಲಿ ಗುಡ್ಡ-ಬೆಟ್ಟ, ಹಿಮ ಎಲ್ಲವೂ ಇದೆ. ಇದನ್ನೆಲ್ಲಾ ಪೋಸ್ಟರ್‍ಗೆ ವಿನ್ಯಾಸ ಮಾಡಿದ್ದಲ್ಲ. ಅಂಥದ್ದೊಂದು ಚೆಂದದ ವಾತಾವರಣದಲ್ಲಿ ಚಿತ್ರೀಕರಣ ಮಾಡಿದ್ದೇವೆ. ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಚಿತ್ರದ ಚಿತ್ರೀಕರಣವಾಗಿದೆ. ಒಳ್ಳೆಯ ಸಂದೇಶ ಕೊಡುವುದಕ್ಕೆ ಈ ಚಿತ್ರ ಮಾಡಿದ್ದಾರೆ. ಹಾಗಾಗಿ, ಈ ಚಿತ್ರ ನಿಜವಾಗಲೂ ಚೆನ್ನಾಗಿ ಮೂಡಿಬರುತ್ತದೆ ಎಂಬ ಭರವಸೆ ನನಗಿದೆ’ ಎಂದು ಹೇಳುವುದರ ಜೊತೆಗೆ, ಚಿತ್ರ ಗೆಲ್ಲಲಿ ಎಂದು ಶುಭ ಹಾರೈಸಿದರು.
ಚಿತ್ರದಲ್ಲಿ ಮತ್ತೊಂದು ಪ್ರಮುಖ ಪಾತ್ರವನ್ನು ನಿರ್ವಹಿಸಿರುವ ನಟಿ ಹಿಮಶ್ರೀ ಮಾತನಾಡಿ, ‘ಈ ಚಿತ್ರದಲ್ಲಿ ಸಂಧ್ಯಾ ಎಂಬ ಹಳ್ಳಿಹುಡುಗಿಯ ಪಾತ್ರ ಮಾಡಿದ್ದೇನೆ. ಮಂಡ್ಯ ಭಾಷೆ ಮಾತನಾಡುತ್ತೇನೆ. ಇದುವರೆಗೂ ನಾನು ಯಾವತ್ತೂ ಅಂತಹ ಪಾತ್ರ ಮಾಡಿರಲಿಲ್ಲ. ನನ್ನ ಪಾತ್ರಕ್ಕೆ ಮೇಕಪ್‍ ಸಹ ಇಲ್ಲ. ಚಿತ್ರದಲ್ಲಿ ನನಗೊಂದು ಹಾಡು ಇದೆ. ಒಂದೊಳ್ಳೆಯ ಚಿತ್ರ ಮಾಡಿದ್ದೇವೆ ಎಂಬ ಖುಷಿ ಇದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ’ ಎಂದರು.

‘ಮೃತ್ಯದೇವತೆ’ ಚಿತ್ರದಲ್ಲಿ ಸಾರಿಕಾ ಮತ್ತು ವಿನಯಾ ಪ್ರಸಾದ್‍ ಅವರ ಜೊತೆಗೆ ನವೀನ್‍ ಮಹದೇವ, ಹಿಮಶ್ರೀ, ಡಯಾನ, ಮಾಹಿನ್‍ ಕುಬೇರ, ಸೂರ್ಯ, ಪವನ್‍, ವರ್ಷಿತಾ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನಿರುದ್ಧ್ ಛಾಯಾಗ್ರಹಣ, ಶಿವಪ್ರಸಾದ್‍ ಸಂಗೀತವಿದ್ದು, ರಘು ಅವರ ನೃತ್ಯ ನಿರ್ದೇಶನ, ಅಲ್ಟಿಮೇಟ್‍ ಶಿವು ಹಾಗೂ ಚಿಟ್ಟ ಜಾಧವ್‍ ಅವರ ಸಾಹಸ ನಿರ್ದೇಶನ ಮತ್ತು ವಿಕ್ರಮಾದಿತ್ಯ ಅವರ ಸಂಕಲನವಿದೆ. ಚಿತ್ರವನ್ನು ನವೀನ್‍ ಮಹದೇವ್‍ ಅವರ ಪತ್ನಿ ಸರಸ್ವತಿ, ವರ್ಷಿತಾ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ನಿರ್ಮಿಸಿದ್ದಾರೆ.

Comments

Popular posts from this blog

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ.

ಅಮೇರಿಕಾದ ಟೆಕ್ಸಾಸ್‌ನ ಡಲ್ಲಾಸ್‌ನ ಅಲೆನ್ ಸಿಟಿಯಲ್ಲಿ ಬಸವ ದಿನ ಘೋಷಣೆ ಮತ್ತು ಅಮೇರಿಕಾದ ಮಿಚಿಗನ್‌ನ ಡೆಟ್ರಾಯಿಟ್‌ನಲ್ಲಿ ವಿ.ಎಸ್.ಎನ್.ಎ. 47ನೇ ಸಮಾವೇಶ. ಉತ್ತರ ಅಮೇರಿಕಾದ ವೀರಶೈವ ಸಮಾಜದ (ವಿ.ಎಸ್.ಎನ್.ಎ) ಪರವಾಗಿ, ಅಮೇರಿಕಾದ ಟೆಕ್ಸಾಸ್ನ ಡಲ್ಲಾಸ್ನ ಅಲೆನ್ ನಗರದಲ್ಲಿ ಮೇ 3 ಅನ್ನು “ಬಸವ ದಿನ” ಎಂದು ಘೋಷಿಸಲಾಗಿದೆ ಎಂದು ಘೋಷಿಸಲು ನಾವು ಬಯಸುತ್ತೇವೆ. ಇದು ಅಮೇರಿಕಾದ ವೀರಶೈವ ಮತ್ತು ಲಿಂಗಾಯತ ಸಮುದಾಯದ ಅತ್ಯಂತ ಸುಂದರ ಕ್ಷಣವಾಗಿದೆ. ನಗರದ ಮೇಯರ್ ಬೈನ್ ಎಲ್ ಬ್ರೂಕ್ಸ್ ಅವರು ವಿ.ಎಸ್.ಎನ್.ಎ. ಡಲ್ಲಾಸ್ ಶಾಖೆಯಲ್ಲಿ ಬಸವ ಜಯಂತಿ ಆಚರಣೆಯಲ್ಲಿ ಘೋಷಿಸಿದರು. ಸಮಾನತೆ ಮತ್ತು ಸಹಾನುಭೂತಿಯನ್ನು ಪ್ರತಿಪಾದಿಸಿದ ಮತ್ತು ಅವರ ಸಂದೇಶವು ಪ್ರಪಂಚದಾದ್ಯAತದ ಜನರಿಗೆ ಸ್ಫೂರ್ತಿ ನೀಡುತ್ತಿರುವ 12ನೇ ಶತಮಾನದ ಭಾರತೀಯ ತತ್ವಜ್ಞಾನಿ ಮತ್ತು ಸಮಾಜ ಸುಧಾರಕ ಜಗದ್ಗುರು ಬಸವಣ್ಣ ಅವರ ಜನ್ಮ ಮತ್ತು ಬೋಧನೆಗಳನ್ನು ಗೌರವಿಸಲು ಇದು. ಲಿಂಗ ಅಥವಾ ಸಾಮಾಜಿಕ ಸ್ಥಾನಮಾನದ ಆಧಾರದ ಮೇಲೆ ತಾರತಮ್ಯವಿಲ್ಲದ ನ್ಯಾಯಯುತ ಸಮಾಜದ ಬಸವಣ್ಣನವರ ದೃಷ್ಟಿಕೋನವು ಏಕತೆ, ಪರಸ್ಪರ ಗೌರವ ಮತ್ತು ನೈತಿಕ ಜೀವನದ ಮಹತ್ವವನ್ನು ಉತ್ತೇಜಿಸುವ ಮೂಲಕ ಇಂದಿಗೂ ಆಳವಾಗಿ ಪ್ರಸ್ತುತವಾಗಿದೆ. 1978 ರಲ್ಲಿ ಸ್ಥಾಪನೆಯಾದ ವಿ.ಎಸ್.ಎನ್.ಎ., ಯು.ಎಸ್.ಎ. ಮತ್ತು ಕೆನಡಾದಲ್ಲಿ 32 ಶಾಖೆಗಳನ್ನು ಹೊಂದಿದೆ. ವಿ.ಎಸ್.ಎನ್.ಎ. ಈ ವರ್ಷ 47ನೇ ಸಮಾವೇ...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...