Skip to main content

ಕೆವಿಎನ್ ಪ್ರೊಡಕ್ಷನ್ ವತಿಯಿಂದ ಅಣ್ಣಾವ್ರ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್...

ಕೆವಿಎನ್ ಪ್ರೊಡಕ್ಷನ್ ವತಿಯಿಂದ ಅಣ್ಣಾವ್ರ ಹುಟ್ಟುಹಬ್ಬಕ್ಕೆ ಸ್ಪೆಷಲ್ ಗಿಫ್ಟ್...
ಹೊಸ ಅವತಾರದಲ್ಲಿ ಕರುನಾಡ ಕಿಂಗ್ ಶಿವಣ್ಣ.
ಅಣ್ಣಾವ್ರ ಜನ್ಮೋತ್ಸವಕ್ಕೆ ಶಿವಣ್ಣ ನಟನೆ ಬೇಲ್ ಫಸ್ಟ್ ಲುಕ್ ಅನಾವರಣ....
ಕೆವಿಎನ್-ಪವನ್ ಒಡೆಯರ್-ಶಿವಣ್ಣ ಕಾಂಬಿನೇಷನ್ ಸಿನಿಮಾದ ಟೈಟಲ್ ರಿವೀಲ್..ಇದು ಡಾ.ರಾಜ್ ಕುಮಾರ್ ಬರ್ತಡೇ ಸ್ಪೆಷಲ್..
ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ನಿರ್ದೇಶಕ ಪವನ್‌ ಒಡೆಯರ್‌ ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಬಹು ನಿರೀಕ್ಷಿತ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ನ್ನು ಇಂದು ಅಣ್ಣಾವ್ರ ಜನ್ಮೋತ್ಸವದ ಅಂಗವಾಗಿ ಅನಾವರಣ ಮಾಡಲಾಗಿದೆ.
ವೆಂಕಟ್ ಕೆ ನಾರಾಯಣ್, ಶಿವಣ್ಣ ಹಾಗೂ ಪವನ್ ಒಡೆಯರ್ ಕಾಂಬೋದ ಈ ಸಿನಿಮಾಗೆ ಬೇಲ್ ಎಂಬ ಟೈಟಲ್ ಇಡಲಾಗಿದೆ. ಮಳೆ‌ಯಲ್ಲಿ ಛತ್ರಿ ಹಿಡಿದು ಶಿವಣ್ಣ‌‌ ನಿಂತಿರುವ ಪೋಸ್ಟರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚುವಂತೆ ಮಾಡಿದೆ. 
ಈ ಮಹತ್ವಾಕಾಂಕ್ಷೆ ಪ್ರಾಜೆಕ್ಟ್ ನ್ನು ವೆಂಕಟ್ ಕೆ ನಾರಾಯಣ್ ಅವರು ತಮ್ಮದೇ ಕೆವಿಎನ್ ಪ್ರೊಡಕ್ಷನ್ ಬ್ಯಾನರ್ ನಡಿ ನಿರ್ಮಾಣ ಮಾಡುತ್ತಿದ್ದಾರೆ. ಗೋವಿಂದಾಯ ನಮಃ, ಗೂಗ್ಲಿ, ರಣವಿಕ್ರಮ, ನಟಸಾರ್ವಭೌಮ, ರೇಮೋ ಸೇರಿದಂತೆ ಅನೇಕ‌ ಸೂಪರ್ ಹಿಟ್ ಚಿತ್ರ ಕೊಟ್ಟಿರುವ ಪವನ್ ಒಡೆಯರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಪವನ್ ಶಿವಣ್ಣಗೆ ಆಕ್ಷನ್ ಕಟ್ ಹೇಳಬೇಕೆಂಬ ಬಹುದಿನಗಳ ಕನಸನ್ನು ಈಡೇರಿಸಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ನಿರ್ದೇಶಕ ಪವನ್ ಒಡೆಯರ್, "ಇದು ನನಗೂ ಮತ್ತು ನಿರ್ಮಾಣ ಸಂಸ್ಥೆಗೂ ಅತ್ಯಂತ ವಿಶೇಷವಾದ ಸಿನಿಮಾವಾಗಲಿದೆ. ನಿಮಗಾಗಿ ನಾವು ಬಹಳಷ್ಟು ಕಾಯ್ದಿರಿಸಿದ್ದೇವೆ ಮತ್ತು ಶೀಘ್ರದಲ್ಲೇ ಟೀಸರ್ ಅನ್ನು ಘೋಷಿಸುತ್ತೇವೆ. ಶಿವಣ್ಣ ಅವರೊಂದಿಗೆ ಕೆಲಸ ಮಾಡುವುದು ನನ್ನ ಕನಸು ನನಸಾಗಿದೆ. ಅವರು ದಶಕಗಳಿಂದ ಐಕಾನ್ ಆಗಿದ್ದಾರೆ ಮತ್ತು ಹಿಂದೆಂದೂ ಮಾಡದ ರೀತಿಯಲ್ಲಿ ಅವರನ್ನು ಪ್ರಸ್ತುತಪಡಿಸುತ್ತಿರುವುದು ನನಗೆ ತುಂಬಾ ಸಂತೋಷ ತಂದಿದೆ" ಎಂದರು. 

'ಬೇಲ್' ನಮಗೆ ಬಹಳ ವಿಶೇಷವಾದ ಯೋಜನೆಯಾಗಿದ್ದು, ಇದು ಬಲವಾದ ಕಥೆ ಹೇಳುವಿಕೆಯನ್ನು ವಿಶಿಷ್ಟ ಸಿನಿಮೀಯ ದೃಷ್ಟಿಕೋನದೊಂದಿಗೆ ಸಮತೋಲನಗೊಳಿಸುತ್ತದೆ. ಪವನ್ ಒಡೆಯರ್ ಅವರಂತಹ ಸಾಬೀತಾದ ಕಥೆಗಾರರೊಂದಿಗೆ ಕೈ ಜೋಡಿಸುವುದು ಮತ್ತು ಶಿವಣ್ಣ ಅವರಂತಹ ಐಕಾನ್ ಜೊತೆಗೆ ಕೆಲಸ ಮಾಡುವುದು ಸಂಪೂರ್ಣ ಗೌರವವಾಗಿದೆ ಮತ್ತು ಅರ್ಥಪೂರ್ಣ ಸಿನಿಮಾವನ್ನು ನೀಡುವ ನಮ್ಮ ಉದ್ದೇಶದೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುತ್ತದೆ. ಪ್ರೇಕ್ಷಕರು ಇಲ್ಲಿಯವರೆಗೆ ನೋಡಿರದ ಹೊಸ ದೃಷ್ಟಿಕೋನದಲ್ಲಿ ಶಿವಣ್ಣ ಅವರನ್ನು ಪ್ರಸ್ತುತಪಡಿಸಲು ನಾವು ವಿಶೇಷವಾಗಿ ಎದುರು ನೋಡುತ್ತಿದ್ದೇವೆ' ವೆಂಕಟ್ ಕೆ‌ ಕೊನಂಕಿ ಹೇಳಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.