Skip to main content

ಸಾಮಾಜಕ್ಕೆ ಉತ್ತಮ ಸಂದೇಶ ಹೊತ್ತು ತರುತ್ತಿರುವ "ಧೃತಿ"..

ಸಾಮಾಜಕ್ಕೆ ಉತ್ತಮ ಸಂದೇಶ ಹೊತ್ತು ತರುತ್ತಿರುವ "ಧೃತಿ"..
 ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಮೇ 8 ರಂದು ತೆರೆಗೆ..                       
ಚಿತ್ರ ನಿರ್ದೇಶನ ಹಲವು ಪ್ರತಿಭೆಗಳ ಕನಸು. ಅದು ಕೆಲವರಿಗೆ ನನಸಾಗುತ್ತದೆ. ಕೆಲವರಿಗೆ ಕನಸಾಗಿಯೇ ಉಳಿಯುತ್ತದೆ. ಉದ್ಯಮಿ ಜಗದೀಶ್ ಕೂಡ ಚಿಕ್ಕಂದಿನಿಂದಲೂ ನಿರ್ದೇಶಕನಾಗುವ ಕನಸು ಹೊತ್ತವರು. ಆ ಕನಸನ್ನು "ಧೃತಿ" ಚಿತ್ರವನ್ನು ನಿರ್ದೇಶಿಸುವ ಮೂಲಕ ನನಸಾಗಿಸಿಕೊಂಡಿದ್ದಾರೆ ಜಗದೀಶ್. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ "ಧೃತಿ" ಚಿತ್ರದ ಕುರಿತು ನಿರ್ದೇಶಕ ಜಗದೀಶ್ ಹಾಗೂ ಚಿತ್ರತಂಡದವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದು ಹೀಗೆ.     
ನಾನೊಬ್ಬ ಉದ್ಯಮಿ. ‌ಚಿಕ್ಕಂದಿನಿಂದಲೂ ಚಿತ್ರ ನಿರ್ದೇಶನ ಮಾಡಬೇಕೆಂಬ ಆಸೆ ನನಗೆ. ಅದು ಈಗ ಈ ಚಿತ್ರದ ಮೂಲಕ ಈಡೇರಿದೆ. ಆರು ವರ್ಷಗಳ ಹಿಂದೆ ಈ ಚಿತ್ರದ ಸ್ಕ್ರಿಪ್ಟ್ ವರ್ಕ್ ಆರಂಭವಾಗಿದ್ದು. ಬಂಡವಾಳ ಹೆಚ್ಚು ಇರದ ಕಾರಣ ಮೊಬೈಲ್ ನಲ್ಲೇ ಚಿತ್ರೀಕರಣ ಮಾಡುವ ಯೋಜನೆ ಇತ್ತು. ಆನಂತರ ನನ್ನ ಪತ್ನಿ ಹಾಗೂ ಸಹೃದಯಿ ಸ್ನೇಹಿತರು ಸಹಕಾರ ನೀಡಿದರು. ಆನಂತರ ಈ ಚಿತ್ರವನ್ನು ಕ್ಯಾಮೆರಾದಲ್ಲಿ ಚಿತ್ರಿಸಲಾಯಿತು‌. ಚಿತ್ರೀಕರಣ ಪ್ರಾರಂಭವಾದ ಕೆಲವೇ ದಿನಗಳಲ್ಲಿ ಛಾಯಾಗ್ರಾಹಕರು ವಿಧಿವಶರಾದರು‌‌. ಆಗ ನಾನೇ ಛಾಯಾಗ್ರಹಣದ ಬಗ್ಗೆ ತಿಳಿದುಕೊಂಡು ಆ ಜವಾಬ್ದಾರಿಯನ್ನು ನಿರ್ವಹಿಸಿದ್ದೆ. ನಮ್ಮ ಸುತ್ತಮುತ್ತ ನಡೆಯುವ ಹಾಗೂ ನಡೆದಿರುವ ಹೆಣ್ಣಿನ ಮೇಲಿನ ಶೋಷಣೆಯ ಬಗ್ಗೆ ಈ ಚಿತ್ರದ ಕಥೆ ಇದೆ. ಹಾಗಂತ ನಮ್ಮ ಚಿತ್ರದಲ್ಲಿ ಬರೀ ಶೋಷಣೆಯನ್ನೇ ತೋರಿಸಿಲ್ಲ. ಅದಕ್ಕೆ ಪರಿಹಾರವನ್ನು ತೋರಿಸಿದ್ದೇವೆ. ಪ್ರಶಾಂತ್ ಈ ಚಿತ್ರದ ನಾಯಕ. ಆಂಚಲ್ ನಾಯಕಿ. ಹಲವಾರು ನೂತನ ಪ್ರತಿಭೆಗಳು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ‌‌. ಪ್ರಸನ್ನ ಕುಮಾರ್ ಅವರ ಸಂಗೀತ ಈ ಚಿತ್ರದ ಹೈಲೆಟ್. ಕಥೆ, ಚಿತ್ರಕಥೆ, ಸಂಭಾಷಣೆ, ಗೀತರಚನೆ ಹಾಗೂ ನಿರ್ಮಾಣ ಕೂಡ ನನ್ನದೆ‌. ಮೇ 8 ರಂದು ನಮ್ಮ ಚಿತ್ರ ತೆರೆಗೆ ಬರುತ್ತಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ನಮ್ಮ ಚಿತ್ರ ನೋಡಿ ಎಂದರು ನಿರ್ದೇಶಕ ಹಾಗೂ ನಿರ್ಮಾಪಕ ಜಗದೀಶ್ .                                      
ಇದು ನನ್ನ ಮೊದಲ ಚಿತ್ರ. ಮೊದಲ ಚಿತ್ರದಲ್ಲೇ ಇಂತಹ ಒಳ್ಳೆಯ ಪಾತ್ರ ಸಿಕ್ಕಿರುವುದು ಖುಷಿಯಾಗಿದೆ. "ಧೃತಿ" ನನ್ನ ಪಾತ್ರದ ಹೆಸರು. ಸಾಕಷ್ಟು ಸಮಸ್ಯೆ ಎದುರಾದರೂ "ಧೃತಿಗೆಡದೆ" ಎಲ್ಲವನ್ನು ಎದುರಿಸುವ ಪಾತ್ರ ನನ್ನದು ಎಂದು ನಾಯಕಿ ಆಂಚಲ್ ಹೇಳಿದರು.    
ನಾನು ಮೂಲತಃ ನೃತ್ಯ ಕಲಾವಿದ ಹಾಗೂ ನೃತ್ಯ ನಿರ್ದೇಶಕ. ರಂಗಭೂಮಿ ಕಲಾವಿದನೂ ಹೌದು. ಯಾವ ರೀತಿಯ ಪಾತ್ರದ ಮೂಲಕ ನಾನು ನಟನಾಗಿ ಚಿತ್ರರಂಗ ಪ್ರವೇಶಿಸಬೇಕೆಂದುಕೊಂಡಿದ್ದೆನೊ ಅದೇ ತರಹದ ಪಾತ್ರ ನನಗೆ ಸಿಕ್ಕಿರುವುದು ಖುಷಿಯಾಗಿದೆ ಎಂದು ನಾಯಕ ಪ್ರಶಾಂತ್ ತಿಳಿಸಿದರು.    
ಸಂಗೀತದ ಕುರಿತು ಪ್ರಸನ್ನ ಕುಮಾರ್ ಮಾಹಿತಿ ನೀಡಿದರು. ನಟರಾದ ಮನೋಜ್ ಕುಮಾರ್ ಹಾಗೂ ಮಧು ಮಂದಗೆರೆ ತಮ್ಮ ಪಾತ್ರದ ಕುರಿತು ಮಾತನಾಡಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.