Skip to main content

ಕೆಡಿ ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್...

ಕೆಡಿ ಚಿತ್ರದಲ್ಲಿ ಕಾಲ ಭೈರವನಾದ ಕಿಚ್ಚ ಸುದೀಪ್...  
  ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣದ, ಜೋಗಿ ಪ್ರೇಮ್ ಅವರ ನಿರ್ದೇಶನದ ಕೆಡಿ ಚಿತ್ರ ಸಾಕಷ್ಟು ವಿವಾದಗಳನ್ನು ದಾಟಿ ಕಡೆಗೂ ಸೆನ್ಸಾರ್ ಮಂಡಳಿಯಿಂದ ಪ್ರಮಾಣ ಪತ್ರ ಪಡೆದು ಏಪ್ರಿಲ್ 30ರಂದು ಅದ್ದೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದೆ, ದ್ರುವ ಸರ್ಜಾ, ರೀಶ್ಮಾ ನಾಣಯ್ಯ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ನೀಡಲು ಹಾಗೂ ಚಿತ್ರದ ಮತ್ತೊಂದು ಹಾಡಿನ ಬಿಡುಗಡೆಯ ಜತೆ ಸುದೀಪ್ ಅವರ ಜತೆ ವಿಶೇಷ ಸಂವಾದ ಕಾರ್ಯಕ್ರಮ ಸೋಮವಾರ ಸಂಜೆ ನೆರವೇರಿತು. 
    ನಿರ್ದೇಶಕ ಪ್ರೇಮ್, ನಾಯಕನಟ ದ್ರುವ ಸರ್ಜಾ, ನಾಯಕಿ ರೀಶ್ಮಾ ನಾಣಯ್ಯ ಭಾಗಿಯಾಗಿದ್ದ ವೇದಿಕೆಯಲ್ಲಿ ಕಾಲಭೈರವನ ಅವತಾರದಲ್ಲಿ ಕಾಣಿಸಿಕೊಂಡಿದ್ದ ಕಿಚ್ಚ ಸುದೀಪ್ ಮುಖ್ಯ ಆಕರ್ಷಣೆಯಾಗಿದ್ದರು.     
   ತುಂಬಾ ಸಮಯದವರೆಗೆ ಮಾತನಾಡಿದ ಕಿಚ್ಚ ಸುದೀಪ್ ಮಾಧ್ಯಮದವರ ಪ್ರಶ್ನೆಗಳಿಗೆ ಜಾಣ್ಮೆಯ ಉತ್ತರ ನೀಡುತ್ತಾ ಹೋದರು.
 ಕೆಡಿ ಚಿತ್ರದಲ್ಲಿ ತಮ್ಮ ಪಾತ್ರ ತುಂಬಾ ಚೆನ್ನಾಗಿ ಮೂಡಿಬಂದಿದೆ. 150 ದಿನಗಳ ಕಾಲ ನಡೆದ 
ಚಿತ್ರೀಕರಣದಲ್ಲಿ ನನ್ನದು ಮೂರು ದಿನದ ಕೆಲಸ ಮಾತ್ರ. ದ್ರುವ ನನ್ನ ಸೋದರನಿದ್ದಂತೆ, ಆತ ಒಂದು ದೊಡ್ಡ ಸಿನಿಮಾ ಮಾಡಿದಾಗ, ಅದರ ಭಾಗವಾಗಿ ನಿಲ್ಲಬೇಕೆಂದು ನಾನಿಲ್ಲಿಗೆ ಬಂದೆ. ನಾಯಕಿ ರೀಶ್ಮಾ ಕೂಡ ಉತ್ತಮ ನಟಿ ಎಂದು ನಾಯಕ, ನಾಯಕಿ ಇಬ್ಬರನ್ನೂ  ಮೆಚ್ಚಿಕೊಂಡರು. ನಂತರ ಚಿತ್ರೋದ್ಯಮ ಈಗ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾತನಾಡಿ, ಸದ್ಯ ಕನ್ನಡ ಚಿತ್ರರಂಗ ಅಳಿವಿನಂಚಿನಲ್ಲಿದೆ, ಮಾಧ್ಯಮಗಳು ಇಂತಹ ಚಿತ್ರಗಳು ಬಂದಾಗ ಸಪೋರ್ಟ್ ಮಾಡಬೇಕು ಎಂದೂ ಹೇಳಿದರು.
   ಮಾತು ಮುಂದುವರೆಸಿದ ಸುದೀಪ್ ನಿರ್ದೇಶಕ ಪ್ರೇಮ್ ಒಬ್ಬ ಫ್ಯಾಷನೇಟ್ ಫಿಲಂ ಮೇಕರ್, ಆಗು ಹೋಗುಗಳ ಬಗ್ಗೆ ಒಂದೊಳ್ಳೇ ಸಿನಿಮಾ ಕೊಡಲು ಪ್ರಯತ್ನಿಸುತ್ತಾರೆ, ಅವರು ತೆಗೆದಿರುವ ಪ್ರತಿ ಫ್ರೇಮ್ ತುಂಬಾ ಇಷ್ಟವಾಯ್ತು. ಪ್ರೇಮ್ ನನಗೆ ಒಬ್ಬ ವ್ಯಕ್ತಿಯಾಗಿ ಇಷ್ಟ, ನಾವು ಇಷ್ಟಪಟ್ಟವರಿಗಾಗಿ ನಾನು ಏನು ಬೇಕಾದರೂ ಮಾಡಲು ಸಿದ್ದ. ಅವರು ಎಲ್ಲಿರ‍್ತಾರೋ ಅಲ್ಲಿ ಎನರ್ಜಿ ಇರುತ್ತೆ, ಆಗ ನಮ್ಮ ಎನರ್ಜಿಯೂ ಜಾಸ್ತಿ ಆಗುತ್ತೆ ಎಂದರು. ನಂತರ ಹಾಡಿನ ವಿವಾದದ ಬಗ್ಗೆ ಮಾತನಾಡುತ್ತ ಪ್ರೇಮ್ ಈ ಹಿಂದೆ ಸಾಕಷ್ಟು ಸದಭಿರುಚಿಯ ಸಾಹಿತ್ಯ ಬರೆದು, ತಂದೆ, ತಾಯಿ, ಮಕ್ಕಳು ಒಂದಾಗುವಂತೆ ಮಾಡಿದ್ದುಂಟು, ಆದರೆ ಒಂದು ತಪ್ಪು ನಡೆದಿದೆ, ಅದನ್ನು ಸರಿಪಡಿಸಿಕೊಂಡಿದ್ದಾರೆ, ನಮ್ಮವರನ್ನು ನಾವು ಕಡೆಗಣಿಸದೆ ಕೈಹಿಡಿಯಬೇಕು ಎಂದು ಕಿವಿಮಾತು ಹೇಳಿದರು. ನಂತರ ಪೈರಸಿ ಕುರಿತಂತೆ ಮಾತನಾಡಿ ದ್ರುವ ಸರ್ಜಾ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗವಿದೆ, ಅವರೇ ಪೈರಸಿ ಆಗದಂತೆ ನೋಡಿಕೊಳ್ಳುತ್ತಾರೆ, ಅದನ್ನೂ ಮೀರಿ ನಮಗೆ ಚಿತ್ರಮಂದಿರ ದೇವಾಲಯವಿದ್ದಂತೆ, ದೇವರನ್ನು ನೋಡಲು ದೇವಸ್ಥಾನಕ್ಕೆ ಬರಬೇಕು, ಹಾಗೇ ನಮ್ಮ ಮೇಲೆ ಪ್ರೀತಿಯಿರುವವರು ಥೇಟರಿಗೆ ಬಂದೇ ಬರುತ್ತಾರೆ ಎಂದು ಪ್ರೇಕ್ಷಕರ ಮೇಲೆ ನಂಬಿಕೆ ವ್ಯಕ್ತಪಡಿಸಿದರು, 
   ನಿರ್ದೇಶಕ ಜೋಗಿ ಪ್ರೇಮ್ ಮಾತನಾಡಿ ಸುದೀಪ್ ಅವರು ನನಗೆ ಬ್ರದರ್ ಥರ, ನನ್ನ ಬಗ್ಗೆ ಯಾವುದೇ ವಿವಾದ ಆಗಲಿ ಸದಾ ಬೆಂಬಲಕ್ಕೆ ನಿಲ್ತಾರೆ, ಈ ಸಿನಿಮಾದಲ್ಲಿ ಒಂದು ಪವರ್ ಫುಲ್ ಪಾತ್ರವಿದೆ ನೀವು ಮಾಡಬೇಕು ಎಂದು ಅವರನ್ನು ಕೇಳಿದಾಗ ಒಂದೇ ಮಾತಿಗೆ ಆಯ್ತು ಬರ‍್ತೀನಿ ಅಂದರು, ಚಿತ್ರದಲ್ಲಿ ಅವರು ಕಾಲಭೈರವನಾಗಿ ಅಬ್ಬರಿಸಿದ್ದಾರೆ. ಅವರ ಪಾತ್ರ ತುಂಬಾ ವೈಲೆಂಟ್ ಆಗಿದೆ, ಅದು ಎಷ್ಟು ಪವರ್ ಫುಲ್ ಅಂತ ನೀವೆಲ್ಲ ಸಿನಿಮಾ ನೋಡಿದಾಗ ಗೊತ್ತಾಗುತ್ತೆ ಎಂದರು. 
  ನಂತರ ಚಿತ್ರದ ನಾಯಕ ದ್ರುವ ಸರ್ಜಾ, ನಾಯಕಿ ರೀಶ್ಮಾ ನಾಣಯ್ಯ ತಮ್ಮ ಪಾತ್ರಗಳ ಕುರಿತಂತೆ ಹಾಗೂ ಸುದೀಪ್ ಅವರು ಕೆಡಿ ಚಿತ್ರದ ಭಾಗವಾಗಿರುವ ಕುರಿತಂತೆ ಮಾತನಾಡಿದರು. ಜತೆಗೆ ಸಂಜಯದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಇವರೆಲ್ಲ ಚಿತ್ರದ ಪ್ರಮುಖ ಪಾತ್ರಗಳಲ್ಲಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.