Skip to main content

"NH 66" ನಲ್ಲಿ ಪ್ರಮೋದ್ ಶೆಟ್ಟಿ ಪ್ರಯಾಣ‌..

"NH 66" ನಲ್ಲಿ ಪ್ರಮೋದ್ ಶೆಟ್ಟಿ ಪ್ರಯಾಣ‌..
 ಮಂಜುನಾಥ್ ಟಿ.ಆರ್ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಶೃತಿ ಹರಿಹರನ್.. ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ ಶೀರ್ಷಿಕೆ ಅನಾವರಣ ಸಮಾರಂಭ ರಾಜರಾಜೇಶ್ವರಿ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ನೆರವೇರಿತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ "NH 66" ಎಂದು ಹೆಸರಿಡಲಾಗಿದೆ. ನಟ ಉಗ್ರಂ ಮಂಜು ಸೇರಿದಂತೆ ಅನೇಕ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು‌.  
ನಾನು ಹಿರಿಯ ನಿರ್ದೇಶಕ ಭಾರ್ಗವ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ್ದೆ. ನಂತರ ಕಾರಣಾಂತರದಿಂದ ವಿದೇಶಕ್ಕೆ ತೆರಳಿದೆ. ಅಲ್ಲಿಯೇ ಸ್ಕ್ರಿಪ್ಟ್ ರಚನೆ , ಚಿತ್ರಕಥೆ ಬಗ್ಗೆ ವಿಶೇಷ ಅಧ್ಯಯನ ನಡಿಸಿದೆ. ಈಗ ಇಲ್ಲಿಗೆ ಬಂದು ನನ್ನ ಮೊದಲ ನಿರ್ದೇಶನದ ಚಿತ್ರವನ್ನು ಆರಂಭಿಸಿದ್ದೇನೆ. ರಾಯರ ಪರಮಭಕ್ತನಾದ ನಾನು ಅವರ ಹೆಸರಿನಲ್ಲಿಯೇ ರಾಯ ಫಿಲಂಸ್ ಎಂಬ ಸಂಸ್ಥೆಯ ಮೂಲಕ ಈ ಚಿತ್ರವನ್ನು ನಿರ್ಮಾಣ ಕೂಡ ಮಾಡುತ್ತಿದ್ದೇನೆ. "NH 66" ಹೆಸರೆ ಹೇಳುವಂತೆ ಒಂದು ರೋಡ್ ಸ್ಟೋರಿ. ಥ್ರಿಲ್ಲರ್ ಡ್ರಾಮ ಜಾನರ್ ನ ಚಿತ್ರವೂ ಹೌದು. ಪ್ರಮೋದ್ ಶೆಟ್ಟಿ ಹಾಗೂ ಶೃತಿ ಹರಿಹರನ್ ಅವರಿಗೆ ಈ ಚಿತ್ರದ ಕಥೆ ಹೇಳಿದಾಗ, ಕಥೆ ಇಷ್ಟಪಟ್ಟು ಈ ಚಿತ್ರದಲ್ಲಿ ನಟಿಸಲು ಒಪ್ಪಿದರು. ರಾಜೇಶ್ ನಟರಂಗ ಅವರು ಕೂಡ ಪ್ರಮುಖಪಾತ್ರದಲ್ಲಿ ಅಭಿನಯಿಸಲಿದ್ದಾರೆ. ಇದು ಎರಡು ರಾತ್ರಿಗಳಲ್ಲಿ ಮಂಗಳೂರಿನಿಂದ ಗೋವಾಗೆ ಹೋಗುವ ಮಧ್ಯದಲ್ಲಿ ನಡೆಯುವ ಕಥೆಯಾಗಿದ್ದು, ಮೂರು ಅಥವಾ ನಾಲ್ಕು ಪಾತ್ರಗಳ ಸುತ್ತ ಕಥೆ ಸುತ್ತುತ್ತದೆ. "NH 66" ಚಿತ್ರಕ್ಕೆ "ಒನ್ ಹೈವೆ. ಮೆನಿ ಸೀಕ್ರೆಟ್ಸ್" ಎಂಬ ಅಡಿಬರಹವಿದೆ. ಏಪ್ರಿಲ್ 6 ರಿಂದ ಮಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ಸುನೀತ್ ಹಲಗೇರಿ ಛಾಯಾಗ್ರಹಣ ಹಾಗೂ ಸ್ವಾಮಿನಾಥನ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಮಂಜುನಾಥ್ ಟಿ.ಆರ್ ತಿಳಿಸಿದರು.  
 ಮಂಜುನಾಥ್ ಅವರು ಹೇಳಿದ ಕಥೆ ಇಷ್ಟವಾಯಿತು. ಅವರೆ ಹೇಳಿದ ಹಾಗೆ ಇದೊಂದು ರೋಡ್ ಸ್ಟೋರಿ ಜೊತೆಗೆ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ನಾನು ಕ್ಯಾಬ್ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಶೃತಿ ಹರಿಹರನ್ ಹಾಗೂ ರಾಜೇಶ್ ನಟರಂಗ ಅವರ ಜೊತೆಗೆ ನಟಿಸುತ್ತಿರುವುದಕ್ಕೆ ಬಹಳ ಸಂತೋಷವಾಗಿದೆ. ರಾಯರ ಭಕ್ತರಾದ ಮಂಜುನಾಥ್ ಅವರು ತಮ್ಮ ಮೊದಲ ನಿರ್ದೇಶನದ ಚಿತ್ರವನ್ನು ರಾಯರ ಸನ್ನಿಧಿಯಲ್ಲೇ ಆರಂಭಿಸಿದ್ದಾರೆ. ರಾಯರು ಅವರಿಗೆ ಒಳ್ಳೆಯದು ಮಾಡಲಿ ಎಂದರು ನಟ ಪ್ರಮೋದ್ ಶೆಟ್ಟಿ.   
 ಮಂಜುನಾಥ್ ಅವರಿಗೆ ಸಿನಿಮಾ ಮೇಲೆ ಇರುವ ಪ್ರೀತಿ ಹಾಗೂ ಅವರು ಕಥೆ ಹೇಳಿದ ರೀತಿ ಬಹಳ ಇಷ್ಟವಾಯಿತು. ನಾನು ಈವರೆಗೂ ಸಾಕಷ್ಟು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಈವರೆಗೂ ಮಾಡಿರದ ಪಾತ್ರವನ್ನು ಈ ಚಿತ್ರದಲ್ಲಿ ಮಾಡುತ್ತಿದ್ದೇನೆ. ಪ್ರಮೋದ್ ಶೆಟ್ಟಿ ಅವರ ಜೊತೆಗೆ ಅಭಿನಯಿಸುತ್ತಿರುವುದು ಖುಷಿಯಾಗಿದೆ ಎಂದು ನಟಿ ಶೃತಿ ಹರಿಹರನ್ ಹೇಳಿದರು.  
 ಛಾಯಾಗ್ರಾಹಕ ಸುನೀತ್ ಹಲಗೇರಿ ಹಾಗೂ ಸಂಗೀತ ನಿರ್ದೇಶಕ ಸ್ವಾಮಿನಾಥನ್ ಅವರು 'NH 66' ಚಿತ್ರದ ಕುರಿತು ಮಾತನಾಡಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.