Skip to main content

ಜೂನ್ 20 ರಂದು ಮಂತ್ರಾಲಯದ ರಾಯರ ಸನ್ನಿಧಿಯಲ್ಲೇ ಅದ್ದೂರಿಯಾಗಿ ಬಿಡುಗಡೆಯಾಗಲಿದೆ "ರಾಯರ ದರ್ಶನ" ಆಲ್ಬಂ ಸಾಂಗ್.. ಆಗಸ್ಟ್ ನಲ್ಲಿ TNIT ಮಾಧ್ಯಮ ಪ್ರಶಸ್ತಿ ಪ್ರದಾನ..

ಜೂನ್ 20 ರಂದು ಮಂತ್ರಾಲಯದ ರಾಯರ ಸನ್ನಿಧಿಯಲ್ಲೇ ಅದ್ದೂರಿಯಾಗಿ ಬಿಡುಗಡೆಯಾಗಲಿದೆ "ರಾಯರ ದರ್ಶನ" ಆಲ್ಬಂ ಸಾಂಗ್..            
ಆಗಸ್ಟ್ ನಲ್ಲಿ TNIT ಮಾಧ್ಯಮ ಪ್ರಶಸ್ತಿ ಪ್ರದಾನ..
 ಕಲಿಯುಗದ ಕಾಮಧೇನು ಕಲ್ಪವೃಕ್ಷರೆಂದೆ ಖ್ಯಾತರಾದ ಮಂತ್ರಾಲಯದ ಗುರು ಶ್ರೀರಾಘವೇಂದ್ರಸ್ವಾಮಿಗಳ ಕುರಿತು ಈವರೆಗೂ ಸಾಕಷ್ಟು ಭಕ್ತಿಗೀತೆಗಳು ಹಾಗೂ ಆಲ್ಬಂ ಸಹ ಬಂದಿದೆ. ಆದರೆ ಈವರೆಗೂ ಯಾರು ಹೇಳದ ಹಾಗೂ ತೋರಿಸದ ರಾಯರ ಬಗ್ಗೆಗಿನ ಕೆಲವು ವಿಶೇಷ ವಿಷಯಗಳು ಹಾಗೂ ಮಂತ್ರಾಲಯದಲ್ಲಿ ರಾಯರಿಗೆ ವರ್ಷಾವಧಿ ನಡೆಯುವ ವಿಶೇಷ ಉತ್ಸವಗಳನ್ನು ಕಣ್ತುಂಬಿಕೊಳ್ಳುವ "ರಾಯರ ದರ್ಶನ" ಆಲ್ಭಂ ಬಿಡುಗಡೆಗೆ ಸಿದ್ದವಾಗಿದೆ. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಲಾಂಛನದಲ್ಲಿ ಸುಗುಣ ರಘು ನಿರ್ಮಾಣ ಮಾಡಿರುವ ಈ ಆಲ್ಬಂನ ಲೋಕಾರ್ಪಣೆ ಜೂನ್ 20 ರಂದು ಮಂತ್ರಾಲಯದಲ್ಲಿ ಅದ್ದೂರಿಯಾಗಿ ನೆರವೇರಲಿದೆ. ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರ ದಿವ್ಯ ಸಾನಿಧ್ಯದಲ್ಲಿ ಹಾಗೂ ದೇಶದ ವಿವಿಧ ವಿಭಾಗದ ಗಣ್ಯರ ಉಪಸ್ಥಿತಿಯಲ್ಲಿ ಈ ಸಮಾರಂಭ ನಡೆಯಲಿದೆ ಹಾಗೂ ಇದೇ ಸಂಸ್ಥೆಯಿಂದ ಮಾಧ್ಯಮದವರಿಗೆ ನೀಡಲಾಗುವ "TNIT" ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ನಲ್ಲಿ ನೆರವೇರಲಿದೆ. ಈ ಎರಡು ಸಮಾರಂಭಗಳ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಲಕ್ಷ್ಮೀ ಗಣೇಶ ಪ್ರೊಡಕ್ಷನ್ಸ್ ಹಾಗೂ ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆಯ ಮುಖ್ಯಸ್ಥರಾದ ರಘು ಭಟ್ ಹಾಗೂ ಸುಗುಣ ರಘು ಉಪಸ್ಥಿತರಿದ್ದರು. "ರಾಯರ ದರ್ಶನ" ಆಲ್ಬಂ ನ ಟೀಸರ್ ಅನ್ನು ಹಿರಿಯ ನಟಿ ತಾರಾ ಅನುರಾಧ ಅನಾವರಣ ಮಾಡಿದರು. ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು, ಮಹೇಶ್ ಗೌಡ, ಮಂತ್ರಾಲಯ ಮಠದ ಶ್ರೀನಿಧಿ ಕರಣಂ, ಶ್ರೀಶ ಜೋಯಿಸ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಆಲ್ಬಂ ಸಾಂಗ್ ಗೆ ಸಂಗೀತ ಸಂಯೋಜಿಸಿರುವ ಅಜನೀಶ್ ಲೋಕನಾಥ್, ಸಿ.ಆರ್.ಬಾಬಿ, ಹಾಡು ಬರೆದಿರುವ ನಾಗಾರ್ಜುನ ಶರ್ಮ ಹಾಗೂ ಗಾಯಕ ಅಬ್ಬಿ ವಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಮಂತ್ರಾಲಯದ ಪ್ರಸ್ತುತ ಪೀಠಾಧಿಪತಿಗಳಾದ ಶ್ರೀಸುಬುಧೇಂದ್ರ ತೀರ್ಥರ ಅಡಿದಾವರೆಗಳಿಗೆ ವಂದಿಸಿ ಮಾತು ಆರಂಭಿಸಿದ ಈ ಎರಡು ಕಾರ್ಯಕ್ರಮಗಳ ಸಾರಥ್ಯ ವಹಿಸಿರುವ ರಘು ಭಟ್, "ರಾಯರ ದರ್ಶನ" ಆಲ್ಬಂ ಸಾಂಗ್ ಅಂದುಕೊಂಡ ಹಾಗೆ ಮೂಡಿಬರಲು ಶ್ರೀರಾಘವೇಂದ್ರಸ್ವಾಮಿಗಳ ಹಾಗೂ ಶ್ರೀಸುಬಧೇಂದ್ರ ತೀರ್ಥರ ಪರಮಾನುಗ್ರಹವೆ ಕಾರಣ. ಈ ಆಲ್ಬಂ ಸಾಂಗ್ ನಿರ್ಮಾಣವಾಗಲು ಒಂದು ವರ್ಷ ಸಮಯ ಬೇಕಾಯಿತು. ಕಾರಣ, ಇದರಲ್ಲಿ ಮಂತ್ರಾಲಯದಲ್ಲಿ ನಡೆಯುವ ಪೂಜೆ ಹಾಗೂ ವೈಭವೋತ್ಸವ, ಆರಾಧನೆ ಮುಂತಾದ ಉತ್ಸವಗಳ ವಿವರಣೆ ಇದೆ. ಅಜನೀಶ್ ಲೋಕನಾಥ್ ಹಾಗೂ ಸಿ ಆರ್ ಬಾಬಿ ಅವರ ಅದ್ಭುತ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಆಲ್ಬಂ ಸಾಂಗ್ ಅನ್ನು "ಕಾಂತಾರ" ಸಿನಿಮಾದ ಬ್ರಹ್ಮಕಳಶ ಹಾಡಿನ ಖ್ಯಾತಿಯ ಅಬ್ಬಿ ವಿ ಹಾಡಿದ್ದಾರೆ. ನಾಗಾರ್ಜುನ ಶರ್ಮ ಬರೆದಿದ್ದಾರೆ. ಜೂನ್ 20 ರಂದು ಮಂತ್ರಾಲಯದ ರಾಯರ ಸನ್ನಿಧಿಯಲ್ಲೇ "ರಾಯರ ದರ್ಶನ" ಆಲ್ಬಂ ಸಾಂಗ್ ಅದ್ದೂರಿಯಾಗಿ ಅನಾವರಣವಾಗಲಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಸಂಜೆ ಕೂಡ ಅಂದು ಇರುತ್ತದೆ. ಮೂರು ರಾಜ್ಯಗಳ ಉಪ ಮುಖ್ಯಮಂತ್ರಿಗಳನ್ನು ಸಮಾರಂಭಕ್ಕೆ ಆಹ್ವಾನಿಸುವ ಪ್ರಯತ್ನ ನಡೆಯುತ್ತಿದೆ. ಇನ್ನೂ ನಮ್ಮ ಸಂಸ್ಥೆಯಿಂದ ಕಳೆದ ಒಂಭತ್ತು ವರ್ಷಗಳಿಂದ ವಿದ್ಯುನ್ಮಾನ ಮಾಧ್ಯಮದವರಿಗೆ "TNIT" ಪ್ರಶಸ್ತಿ ಕೊಡುತ್ತಾ ಬರುತ್ತಿದ್ದೇವೆ. ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿದ ಈ ಪ್ರಶಸ್ತಿ ಕೆಳದೆರೆಡು ವರ್ಷಗಳಿಂದ ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ಮಾಧ್ಯಮದವರನ್ನು ಗರುತಿಸಿಕೊಡಲಾಗುತ್ತಿದೆ. ಈ ಬಾರಿ ವಿದ್ಯುನ್ಮಾನ ಮಾಧ್ಯಮದ ಜೊತೆಗೆ ಮುದ್ರಣ ಮಾಧ್ಯಮದವರಿಗೂ ಸಹ ಪ್ರಶಸ್ತಿ ನೀಡಿ ಗೌರವಿಸುತ್ತಿದ್ದೇವೆ. ಆಗಸ್ಟ್ ನಲ್ಲಿ ಬೆಂಗಳೂರಿನಲ್ಲೇ ಈ ಸಮಾರಂಭ ನಡೆಯಲಿದೆ. ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುವುದು. ಇಂದಿನ ಸಮಾರಂಭಕ್ಕೆ ಆಗಮಿಸಿದ ಗಣ್ಯರಿಗೆ ಹಾಗೂ ಸಹಕಾರ ನೀಡಿದ ಪ್ರತಿಯೊಬ್ಬರಿಗೂ ಧನ್ಯವಾದ ಎಂದರು. 
  ನಾನು ಚಿಕ್ಕವಯಸ್ಸಿನಿಂದಲೂ "ಪೂಜ್ಯಾಯಾ ರಾಘವೇಂದ್ರಯಾ" ಶ್ಲೋಕ ಹೇಳಿಯೆ ಆಚೆ ಹೊಗುತ್ತಿದ್ದದ್ದು ಎಂದು ಮಾತನಾಡಿದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ತಮ್ಮ ಜೀವನದಲ್ಲಿ ಆದ ರಾಯರ ಅನುಗ್ರಹವನ್ನು ಮಾತುಗಳ ಮೂಲಕ ಹಂಚಿಕೊಂಡರು. ನಾನು ಹಾಗೂ ಬಾಬಿ ಅವರು ರಾಯರ ಮೇಲಿನ ಅಪಾರ ಭಕ್ತಿಯಿಂದ ಈ ಆಲ್ಬಂ ಗೆ ಸಂಗೀತ ಸಂಯೋಜನೆ ಮಾಡಿದ್ದೇವೆ. ಇದು ನಮ್ಮ ಪುಣ್ಯ. "ಕಾಂತಾರ" ದ "ಬ್ರಹ್ಮಕಳಶ"ದ ಹಾಡನ್ನು ಹಾಡಿರುವ ಕೆನಡಾ ಮೂಲದ ಅಬ್ಬಿ ವಿ ಅವರು ರಾಯರ ಮೇಲಿನ ಈ ಹಾಡನ್ನು ಬಹಳ ಸುಶ್ರಾವ್ಯವಾಗಿ ಹಾಡಿದ್ದಾರೆ. ಅಷ್ಟೇ ಚೆನ್ನಾಗಿ ನಾಗಾರ್ಜುನ ಶರ್ಮ ಬರೆದಿದ್ದಾರೆ ಎಂದರು. ‌‌ ‌ ‌‌‌‌‌‌ ‌ ಟೀಸರ್ ಬಿಡುಗಡೆ ಮಾಡಿ ಅತಿಥಿಗಳಾಗಿ ಆಗಮಿಸಿದ್ದ ನಟಿ ತಾರಾ ಅನುರಾಧ, ಹಿರಿಯ ಪತ್ರಕರ್ತರಾದ ಗಣೇಶ್ ಕಾಸರಗೋಡು, " ಕ್ಯೂ.ಪಿ.ಎಲ್" ನ ಮುಖ್ಯಸ್ಥರಾದ ಮಹೇಶ್ ಗೌಡ ಮಾತನಾಡಿ, ರಘು ಭಟ್ ದಂಪತಿಗಳ ಎರಡು ಪ್ರಯತ್ನಕ್ಕೆ ಯಶಸ್ಸನ್ನು ಕೋರಿದರು. ಗಾಯಕ ಅಬ್ಬಿ ವಿ "ರಾಯರ ದರ್ಶನ" ಆಲ್ಬಂನ ಕೆಲವು ಸಾಲುಗಳನ್ನು ಹಾಡಿದರು. ಗೀತರಚನೆಕಾರ ನಾಗಾರ್ಜುನ ಶರ್ಮ ಹಾಡು ಹುಟ್ಟಿದ ಸಮಯದ ಕುರಿತು ವಿವರಣೆ ನೀಡಿದರು. ಮಂತ್ರಾಲಯದಿಂದ ಬಂದಿದ್ದ ಶ್ರೀನಿಧಿ ಕರಣಂ ಹಾಗೂ ಶ್ರೀಶ ಜೋಯಿಸ್ ಅವರು ಜೂನ್ 20 ರ "ರಾಯರ ದರ್ಶನ" ಆಲ್ಬಂ ಬಿಡುಗಡೆ ಸಮಾರಂಭಕ್ಕೆ ಮಂತ್ರಾಲಯಕ್ಕೆ ಎಲ್ಲರನ್ನು ಆಹ್ವಾನಿಸಿದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.