Skip to main content

ಹಾಡುಗಳ ಮುದ್ರಣ ಪೂರ್ಣಗೊಳಿಸಿದ ‘ಡಿಯರ್ ಹಸ್ಬೆಂಡ್’..

ಹಾಡುಗಳ ಮುದ್ರಣ ಪೂರ್ಣಗೊಳಿಸಿದ ‘ಡಿಯರ್ ಹಸ್ಬೆಂಡ್’..
ಸದ್ದಿಲ್ಲದೆ ‘ಡಿಯರ್ ಹಸ್ಬೆಂಡ್’ ಸಾಂಗ್ಸ್ ರೆಕಾರ್ಡಿಂಗ್ ಕಂಪ್ಲೀಟ್..
ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ಹೊಸಚಿತ್ರ ‘ಡಿಯರ್ ಹಸ್ಬೆಂಡ್’..

’ಡಿಯರ್ ಹಸ್ಬೆಂಡ್’ ಹಾಡಿಗೆ ಧ್ವನಿಯಾದ ಗಾಯಕ ನಕಾಶ್..

ಸೂರಜ್-ಶರಣ್ಯಾ-ಪ್ರವೀಣ್ ಹೊಸ ರೊಮ್ಯಾಂಟಿಕ್ ಕ್ರೈಂ-ಥ್ರಿಲ್ಲರ್ ಕಹಾನಿ...

ಬೆಂಗಳೂರು, ಮೇ. 23; ‘ಜಿ9 ಕಮ್ಯುನಿಕೇಶನ್ ಅ್ಯಂಡ್ ಮೀಡಿಯಾ’ ಸಂಸ್ಥೆಯ ಅಡಿಯಲ್ಲಿ ನಿರ್ಮಾಣವಾಗುತ್ತಿರುವ, ಗುರುರಾಜ ಕುಲಕರ್ಣಿ (ನಾಡಗೌಡ) ನಿರ್ದೇಶನದ ‘ಡಿಯರ್ ಹಸ್ಬೆಂಡ್’ ಚಿತ್ರದ ತೆರೆ ಹಿಂದಿನ ಕೆಲಸಗಳು ಭರದಿಂದ ನಡೆಯುತ್ತಿದೆ. ಈಗಾಗಲೇ ಸದ್ದಿಲ್ಲದೆ, ‘ಡಿಯರ್ ಹಸ್ಬೆಂಡ್’ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಹಾಡುಗಳ ಧ್ವನಿ ಮುದ್ರಣ ಕಾರ್ಯವನ್ನೂ ಕೂಡ ಮಾಡಿ ಮುಗಿಸಿದೆ. 
ಇನ್ನು ‘ಡಿಯರ್ ಹಸ್ಬೆಂಡ್’ ಚಿತ್ರದ ಕೊನೆಯ ಹಾಡಿಗೆ ಬಾಲಿವುಡ್ ನ ಖ್ಯಾತ ಗಾಯಕ ನಕಾಶ್ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಸ್ಟುಡಿಯೋ ಒಂದರಲ್ಲಿ ಈ ಹಾಡಿನ ಧ್ವನಿಮುದ್ರಣ ಕಾರ್ಯ ನಡೆಯಿತು. ವೀರ್ ಸಮರ್ಥ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ‘ಮಾಲಾಶ್ರೀ ಸಿಕ್ಕಳೋ… ಮೆಲ್ಲನೆ ನಕ್ಕಳೋ…’ ಎಂದು ಆರಂಭವಾಗುವ ಟಪೋರಿ ಶೈಲಿಯ ಈ ಹಾಡಿನ ಸಾಲುಗಳಿಗೆ ಪ್ರಮೋದ ಮರವಂತೆ ಸಾಹಿತ್ಯವಿದ್ದು, ಮುಂಬೈನಿಂದ ಬೆಂಗಳೂರಿಗೆ ಬಂದ ಬಾಲಿವುಡ್ ನ ಖ್ಯಾತ ಗಾಯಕ ನಕಾಶ್ ಈ ಹಾಡಿಗೆ ಧ್ವನಿಯಾಗಿ ಮೆರಗು ತಂದಿದ್ದಾರೆ. 
‘ಡಿಯರ್ ಹಸ್ಬೆಂಡ್’ ಚಿತ್ರದ ಹಾಡುಗಳ ಬಗ್ಗೆ ಮಾತನಾಡಿರುವ ಚಿತ್ರದ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ), ‘ಈಗಾಗಲೇ ‘ಡಿಯರ್ ಹಲ್ಬೆಂಡ್’ ಚಿತ್ರದ ಒಂದಷ್ಟು ಭಾಗದ ಚಿತ್ರೀಕರಣ ಮಾಡಿ ಮುಗಿಸಿದ್ದೇವೆ. ಇದೀಗ ಬಾಕಿಯಿದ್ದ ಸಿನಿಮಾದ ಹಾಡುಗಳ ರೆಕಾರ್ಡಿಂಗ್ ಕೂಡ ಪೂರ್ಣವಾಗಿದೆ. ಗಾಯಕ ನಕಾಶ್ ಅವರು ಸಿನಿಮಾದಲ್ಲಿ ಈ ಹಾಡಿನ ಹಿನ್ನೆಲೆ, ಸಾಹಿತ್ಯದ ಅರ್ಥವನ್ನು ತಿಳಿದುಕೊಂಡು ತುಂಬ ಖುಷಿಯಿಂದ ಈ ಹಾಡನ್ನು ಹಾಡಿದ್ದಾರೆ. ರಾತ್ರಿ ಶುರುವಾದ ಈ ಹಾಡಿನ ರೆಕಾರ್ಡಿಂಗ್ ಮುಂಜಾನೆವರೆಗೂ ನಡೆಯಿತು. ಈ ಹಾಡನ್ನು ಈ ಸಿನಿಮಾದ ಯುಎಸ್ಪಿ ಎಂದೇ ಹೇಳಬಹುದು’ ಎಂದು ವಿವರಣೆ ನೀಡಿದ್ದಾರೆ. 

‘ಇಲ್ಲಿಯವರೆಗೆ ಸಂಗೀತ ನಿರ್ದೇಶ ವೀರ್ ಸಮರ್ಥ್ ಮತ್ತು ಗೀತ ಸಾಹಿತಿ ಪ್ರಮೋದ್ ಮರವಂತೆ ಅವರ ಕಾಂಬಿನೇಶನ್ ನಲ್ಲಿ ಬಂದಿರುವ ಹಾಡುಗಳದ್ದು ಒಂದು ಶೈಲಿಯಾಗಿದ್ದರೆ, ಈ ಹಾಡು ಅದೆಲ್ಲದಕ್ಕಿಂತ ವಿಭಿನ್ನವಾದ ಮತ್ತೊಂದು ಶೈಲಿಯಲ್ಲಿದೆ. ಖಂಡಿತವಾಗಿಯೂ ಹೊಸತರದಲ್ಲಿ ಮೂಡಿಬಂದಿರುವ ಈ ಹಾಡು ಕನ್ನಡದ ಸಿನಿಪ್ರಿಯರನ್ನ ಸೆಳೆಯಲಿದೆ. ಮಂಡ್ಯ ಹಿನ್ನೆಲೆಯಲ್ಲಿ ಈ ಹಾಡು ನೋಡುಗರನ್ನು ಕೂತಲ್ಲೇ ಕುಣಿಸುವಂತೆ ತೆರೆಮೇಲೆ ಬರಲಿದೆ’ ಎಂದು ಹಾಡಿನ ಬಗ್ಗೆ ವಿಶ್ವಾಸದ ಮಾತುಗಳನ್ನಾಡಿದ್ದಾರೆ ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ) 

ಈ ಹಾಡಿನ ರೆಕಾರ್ಡಿಂಗ್ ಸಮಯದಲ್ಲಿ ನಟರಾದ ಪ್ರವೀಣ್ ಗೌಡ, ಗೀತ ಸಾಹಿತಿ ಪ್ರಮೋದ್ ಮರವಂತೆ ಸೇರಿದಂತೆ ಚಿತ್ರತಂಡದ ಅನೇಕರು ಹಾಜರಿದ್ದರು. 

ಇನ್ನು ಸಸ್ಪೆನ್ಸ್ ಕಂ ಕ್ರೈಂ-ಥ್ರಿಲ್ಲರ್ ಶೈಲಿಯಲ್ಲಿ ಮೂಡಿಬರುತ್ತಿರುವ ‘ಡಿಯರ್ ಹಸ್ಬೆಂಡ್’ ಚಿತ್ರದಲ್ಲಿ ನಟರಾದ ಸೂರಜ್ ಗೌಡ, ಶರಣ್ಯಾ ಶೆಟ್ಟಿ, ಪ್ರವೀಣ್, ಕುಮಾರ ಬಂಗಾರಪ್ಪ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರಮೋದ ಮರವಂತೆ ಸಾಹಿತ್ಯ, ರಘು ನಿಡುವಳ್ಳಿ ಸಂಭಾಷಣೆ ಚಿತ್ರಕ್ಕಿದೆ. ಸಂಪತ್ ಡಿ. ಆರ್ ನಿರ್ಮಾಣ ವಿನ್ಯಾಸ ಮತ್ತು ಬಿ. ಎಸ್. ಕೆಂಪರಾಜ್ ಈ ಚಿತ್ರಕ್ಕೆ ಸಂಕಲನ ಕಾರ್ಯ ನಿರ್ವಹಿಸುತ್ತಿದ್ದಾರೆ. 

ಕೆಲ ತಿಂಗಳ ಹಿಂದಷ್ಟೇ ನಟ ಕಿಚ್ಚ ಸುದೀಪ್, ‘ಡಿಯರ್ ಹಸ್ಬೆಂಡ್’ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ‘ಡಿಯರ್ ಹಸ್ಬೆಂಡ್’ ಚಿತ್ರದ ಮುಂದಿನ ಹಂತದ ಚಿತ್ರೀಕರಣವನ್ನು ಬೆಂಗಳೂರು, ಮಂಡ್ಯ, ಮೈಸೂರು, ಶ್ರೀರಂಗಪಟ್ಟಣ, ಗೋವಾ ಮತ್ತಿತರ ಕಡೆಗಳಲ್ಲಿ ನಡೆಸುವ ಯೋಜನೆಯಲ್ಲಿದೆ ಚಿತ್ರತಂಡ. ಸದ್ಯ ಭರದಿಂದ ‘ಡಿಯರ್ ಹಸ್ಬೆಂಡ್’ ಚಿತ್ರದ ಕೆಲಸಗಳನ್ನು ನಡೆಸುತ್ತಿರುವ ಚಿತ್ರತಂಡ, ಇದೇ ವರ್ಷಾಂತ್ಯಕ್ಕೆ ‘ಡಿಯರ್ ಹಸ್ಬೆಂಡ್’ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಜನೆ ಹಾಕಿಕೊಂಡಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.