Skip to main content

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ "ಟಗರು ಪಲ್ಯ" ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ...

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ "ಟಗರು ಪಲ್ಯ" ಖ್ಯಾತಿಯ ನಿರ್ದೇಶಕ‌ ಉಮೇಶ್ ಕೆ ಕೃಪ ನಿರ್ದೇಶನದ ಎರಡನೇ ಚಿತ್ರಕ್ಕೆ ಚಾಲನೆ...ನಾಗೇಶ್ ವಾಸ್ಟರ್ ನಿರ್ಮಾಣದ ಈ ಚಿತ್ರದ ಪ್ರಮುಖಪಾತ್ರದಲ್ಲಿ "ಪುಟ್ಟಕ್ಕನ ಮಕ್ಕಳು" ಧಾರಾವಾಹಿ ಖ್ಯಾತಿಯ ಧನುಷ್...    
ಎರಡು ವರ್ಷಗಳ ಹಿಂದೆ ತೆರೆಕಂಡ "ಟಗರು ಪಲ್ಯ" ನೋಡುಗರಿಂದ ಹಾಗೂ ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡ ಚಿತ್ರ. ಉಮೇಶ್ ಕೆ ಕೃಪ ಈ ಚಿತ್ರದ ನಿರ್ದೇಶಕರು. ಪ್ರಸ್ತುತ ಉಮೇಶ್ ಕೆ ಕೃಪ ನಿರ್ದೇಶಿಸುತ್ತಿರುವ, ಆಕಾಂಕ್ಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಾಗೇಶ್ ವಾಸ್ಟರ್ ಅವರು ನಿರ್ಮಾಣ ಮಾಡುತ್ತಿರುವ "ಪ್ರೊಡಕ್ಷನ್ ನಂ 2" ನೂತನ ಚಿತ್ರದ ಮುಹೂರ್ತ ಸಮಾರಂಭ ಶುಕ್ರವಾರ ಬೆಳಗ್ಗೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇದು ನನ್ನ ಎರಡನೇ ನಿರ್ದೇಶನದ ಚಿತ್ರ. ನನ್ನ ಮೊದಲ ನಿರ್ದೇಶನದ ಚಿತ್ರ "ಟಗರು ಪಲ್ಯ" ಚಿತ್ರಕ್ಕೆ ಎಲ್ಲರೂ ತೋರಿದ ಪ್ರೋತ್ಸಾಹ ಹಾಗೂ ಮೆಚ್ಚುಗೆಗೆ ಧನ್ಯವಾದ. ನನ್ನ ಎರಡನೇ ನಿರ್ದೇಶನದ ಚಿತ್ರಕ್ಕೆ ಚಾಲನೆ ದೊರಕಿದೆ. ನಾನೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಇನ್ನೂ ಹೆಸರಿಡದ ಈ ಹೊಸ ಚಿತ್ರಕ್ಕೆ ನಾಗೇಶ್ ವಾಸ್ಟರ್ ಬಂಡವಾಳ ಹೂಡುತ್ತಿದ್ದಾರೆ. ಎಸ್ ಕೆ ರಾವ್ ಛಾಯಾಗ್ರಹಣ, ಪಳನಿ ಡಿ ಸೇನಾಪತಿ ಸಂಗೀತ ನಿರ್ದೇಶನ, ಮಧು ತುಂಬಕೆರೆ ಸಂಕಲನ, ಅರ್ಜುನ್ ರಾಜ್ ಸಾಹಸ ನಿರ್ದೇಶನ ಹಾಗೂ ಎ ಸತೀಶ್ ಅವರ ಕಲಾ ನಿರ್ದೇಶನವಿರುವ ಈ ನೂತನ ಚಿತ್ರಕ್ಕೆ ಎಚ್ ಜಗದೀಶ್ ರಾವ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಚಿತ್ರಕ್ಕೆ ಕಥೆಯೇ ನಾಯಕ. ನನ್ನ ಹಿಂದಿನ ಚಿತ್ರದಂತೆ ಈ ಚಿತ್ರದಲ್ಲೂ ಅನುಭವಿ ಕಲಾವಿದರ ದೊಡ್ಡ ತಾರಾಬಳಗವೇ ಇರುತ್ತದೆ. "ಪುಟ್ಟಕ್ಕನ ಮಕ್ಕಳು" ಧಾರಾವಾಹಿಯಲ್ಲಿ "ಕಂಠಿ" ಪಾತ್ರದ ಮೂಲಕ ಚಿರಪರಿಚಿತರಾಗಿರುವ ಧನುಷ್ ಹಾಗೂ ಕೆಲವು ಧಾರಾವಾಹಿ ಹಾಗೂ ಚಲನಚಿತ್ರಗಳಲ್ಲಿ ನಟಿಸಿರುವ ಮನಸ್ವಿ ಪ್ರಮುಖಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಉಳಿದ ಕಲಾವಿದರ ಆಯ್ಕೆ ನಡೆಯುತ್ತಿದೆ. ಇದೊಂದು ನಾಡಿನ ಕಥೆ. ಪ್ರೀತಿ, ಕಾಮಿಡಿ, ಸೆಂಟಿಮೆಂಟ್ ಹೀಗೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳಿರುವ ಮನೋರಂಜನೇಯೇ ಪ್ರಧಾನವಾದ ಕುಟುಂಬ ಸಮೇತ ನೋಡಬಹುದಾದ ಚಿತ್ರವಿದು. ಇನ್ನೂ, ಈ ಚಿತ್ರದಲ್ಲಿ ಮಳೆಯದು ಮುಖ್ಯ ಪಾತ್ರ. ಹಾಗಾಗಿ ಚಿತ್ರೀಕರಣಕ್ಕೆ ಮಳೆಗಾಲಕ್ಕಾಗಿ ಕಾಯುತ್ತಿದ್ದೆವು. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗಲಿದೆ. ತೀರ್ಥಹಳ್ಳಿ, ಆಗುಂಬೆ, ಕಾರ್ಕಳ, ಚಿಕ್ಕಮಗಳೂರು ಮುಂತಾದ ಕಡೆ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ ಎಂದು ನಿರ್ದೇಶಕ ಉಮೇಶ್ ಕೆ ಕೃಪ ತಿಳಿಸಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.