Skip to main content

ಟ್ರೇಲರ್ ನಲ್ಲೇ ಗಮನ ಸೆಳೆದ "ಕ್ಷಮೆಯಿರಲಿ ತಂದೆ"..

ಟ್ರೇಲರ್ ನಲ್ಲೇ ಗಮನ ಸೆಳೆದ "ಕ್ಷಮೆಯಿರಲಿ ತಂದೆ".. ಈ ಚಿತ್ರದ ಮೂಲಕ ನಿರ್ಮಾಣ ಹಾಗೂ ನಿರ್ದೇಶನಕ್ಕೆ ನಟ ಎಂ.ಎನ್ ಸುರೇಶ್ ಎಂಟ್ರಿ...
 ರಂಗಭೂಮಿ, ಕಿರುತೆರೆ, ಹಿರಿತೆರೆ ಕಲಾವಿದರಾಗಿ ಕಳೆದ ಮೂರು ದಶಕಗಳಿಂದ ಜನಪ್ರಿಯರಾಗಿರುವ ಎಂ ಎನ್ ಸುರೇಶ್ (ಮೂಗ್ ಸುರೇಶ್ ) ಈಗ ನಿರ್ಮಾಪಕ ಹಾಗೂ ನಿರ್ದೇಶಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮ್ಮ ಮೊದಲ ನಿರ್ಮಾಣ ಹಾಗೂ ನಿರ್ದೇಶನದ ಚಿತ್ರಕ್ಕೆ " ಕ್ಷಮೆಯಿರಲಿ ತಂದೆ" ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿ ಜೂನ್ 12ರಂದು ತೆರೆಗೆ ಬರಲು‌ ಸಿದ್ದವಾಗಿರುವ ಈ ಚಿತ್ರದ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕರಾದ ಟಿ.ಎಸ್.ನಾಗಾಭರಣ, ನಾಗತಿಹಳ್ಳಿ ಚಂದ್ರಶೇಖರ್, ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ರಾಮಕೃಷ್ಣ (ಮೇಕಪ್) ಮುಖ್ಯ ಅತಿಥಿಗಳಾಗಿ ಆಗಮಿಸಿ ಮೋಷನ್ ಪೋಸ್ಟರ್, ಟ್ರೇಲರ್ ಹಾಗೂ ಲಿರಿಕಲ್ ವಿಡಿಯೋ ಅನಾವರಣ ಮಾಡಿದರು. ಚಿತ್ರದ ಟ್ರೇಲರ್ ಚೆನ್ನಾಗಿದೆ. ಚಿತ್ರ ಯಶಸ್ವಿಯಾಗಲಿ. ಎಂ ಎನ್ ಸುರೇಶ್ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಗೆಲ್ಲಲಿ ಎಂದು ಅತಿಥಿಗಳು ಹಾರೈಸಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 
 ಸಮಾರಂಭಕ್ಕೆ ಆಗಮಿಸಿದ ಅತಿಥಿಗಳಿಗೆ ಧನ್ಯವಾದ ತಿಳಿಸಿ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಹಾಗೂ ನಿರ್ದೇಶಕ ಎನ್ ಎಂ ಸುರೇಶ್, ನಾನು ಕೆಲವು ಚಿತ್ರಗಳಿಗರ ಸಹ ನಿರ್ಮಾಪಕನಾಗಿದ್ದೆ. ಪೂರ್ಣ‌ಪ್ರಮಾಣದ ನಿರ್ಮಾಪಕನಾಗಿರುವುದು ಈ ಚಿತ್ರದಿಂದ. ಇನ್ನೂ, ನಿರ್ದೇಶನ ನಾನು ಮಾಡಬೇಕೆಂದುಕೊಂಡಿರಲಿಲ್ಲ. ನನ್ನ ಕಾರ್ಯವೈಖರಿ ಹತ್ತಿರದಿಂದ ಬಲ್ಲ ಸ್ನೇಹಿತರು ನೀವೇ ನಿರ್ದೇಶನ ಮಾಡಿ ಎಂದರು. ಮೊದಲ ನಿರ್ದೇಶನದ ಚಿತ್ರ, ಬೇರೆಯವರು ದುಡ್ಡು ಹಾಕುವುದು ಬೇಡ ಅಂತ ನಾನು ಕೂಡಿಟ್ಟಿದ್ದ ಹಣವನ್ನೇ ಈ ಚಿತ್ರಕ್ಕೆ ಹಾಕಿ ನಿರ್ಮಾಣ ಮಾಡಿದ್ದೇನೆ. ಇದಕ್ಕೆ ನನ್ನ ಕುಟುಂಬದ ಸಹಕಾರವೂ ಇದೆ. ಶೀರ್ಷಿಕೆಯೇ ತಿಳಿಸುವಂತೆ ಇದೊಂದು ತಂದೆ - ಮಗನ ಬಾಂಧವ್ಯದ ಚಿತ್ರ. ಹರೀಶ್ ಅವರು ಕಥೆ ಬರೆದಿದ್ದಾರೆ. ಮಂಜುನಾಥ್ ಹೆಗ್ಡೆ, ರೇಣುಕಾಬಾಲಿ , ಶ್ರೀಮಂತ, ವಿನ್ಯಾಶೆಟ್ಟಿ ಮುಂತಾದ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದು, ನಾನು ಸಹ ನಟಿಸಿದ್ದೇನೆ. ಸೂರ್ಯಕಾಂತ್ ಛಾಯಾಗ್ರಹಣ, ಮುತ್ತುರಾಜ್ ಸಂಕಲನ ಹಾಗೂ ಪುಣ್ಯೇಶ್ ಕುಮಾರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರ ಜೂನ್ 12 ರಂದು ತೆರೆಗೆ ಬರಲಿದೆ. ನನ್ನ ಮೊದಲ ನಿರ್ದೇಶನ ಹಾಗೂ ನಿರ್ಮಾಣದ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.             
 ನಟ ಶ್ರೀಮಂತ, ಕಥೆ ಬರೆದಿರುವ ಹರೀಶ್, ಸಂಕಲನಕಾರ ಮುತ್ತುರಾಜ್, ನಟ ಶಿವಕುಮಾರ್ ಆರಾಧ್ಯ ಹಾಗೂ ಕಾರ್ಯಕಾರಿ ನಿರ್ಮಾಪಕಿ ಅಹಲ್ಯ ಸುರೇಶ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.