Skip to main content

"ಅಡಿಕ್ಷನ್" ಚಿತ್ರ ಬಿಡುಗಡೆಗೆ ಸಿದ್ದ..

"ಅಡಿಕ್ಷನ್" ಚಿತ್ರ ಬಿಡುಗಡೆಗೆ ಸಿದ್ದ..
ನೈಜಘಟನೆ ಆಧರಿಸಿರುವ ಈ ಮಕ್ಕಳ ಚಿತ್ರದ ವಿಶೇಷಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ನಟನೆ...                                      
 ಎಸ್ .ಬಿ .ವಿ ಪ್ರೊಡಕ್ಷನ್ಸ್ ಅಡಿಯಲ್ಲಿ ಬೃಂದಾ ಎನ್ ಜಯರಾಮ್ ರವರು ನಿರ್ಮಾಣ ಮಾಡಿರುವ "ಅಡಿಕ್ಷನ್" ಎಂಬ ಕನ್ನಡ ಚಲನಚಿತ್ರವು ಸೆನ್ಸಾರ್ ಮಂಡಳಿಯಿಂದ ಮಕ್ಕಳ ಚಲನಚಿತ್ರ ಪ್ರಮಾಣಪತ್ರವನ್ನು ಪಡೆದುಕೊಂಡಿದೆ. ಚಿತ್ರ ಜೂನ್ ನಲ್ಲಿ ಬಿಡುಗಡೆಯಾಗಲಿದೆ. ಇದು ಮಕ್ಕಳಲ್ಲಿನ ಮೊಬೈಲ್ ಚಟದ ಕುರಿತ ಕಥೆಯಾಗಿದ್ದು, ನೈಜ ಘಟನೆಗಳನ್ನು ಆಧರಿಸಿ ಈ ಕಥೆಯನ್ನು ರಚಿಸಲಾಗಿದೆ. ಅಜಯ್ ಕುಮಾರ್ ಎ ಜೆ ರವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ನಿರ್ದೇಶಕರಿಗೆ ಎರಡನೇ ಚಿತ್ರ.  
 ಈ ಚಿತ್ರದ ಮುಖ್ಯ ಪಾತ್ರದಲ್ಲಿ ಸುಂದರ ಕೃಷ್ಣ ಅರಸ್ ರವರ ಮೊಮ್ಮಗ, ನಾಗೇಂದ್ರ ಅರಸ್ ರವರ ಮಗ ವಿಧು ಸುಂದರಕೃಷ್ಣ ಅರಸ್ ನಟಿಸಿದ್ದಾರೆ. ಈ ಮೂಲಕ ಸುಂದರಕೃಷ್ಣ ಅರಸ್ ಅವರ ಮೂರನೇ ತಲೆಮಾರಿನ ಕುಡಿ ಸಹ ಚಿತ್ರರಂಗ ಪ್ರವೇಶಿಸಿದ್ದಾರೆ. ಇದು ಅವರ ಚೊಚ್ಚಲ ಸಿನಿಮಾ .. ಹಾಗೆಯೇ ಅತಿಥಿ ಪಾತ್ರದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ "ಲವ್ ಯು ಮುದ್ದು" ಖ್ಯಾತಿಯ ಸಿದ್ದು ಮೂಲಿಮನಿಯವರು ನಟಿಸಿದ್ದಾರೆ.. ಉಳಿದಂತೆ ನಾ ನಿನ್ನ ಬಿಡಲಾರೆ ಧಾರಾವಾಹಿ ಖ್ಯಾತಿಯ ರಿಷಿಕ, ಕಾಟೇರ ಚಿತ್ರ ಹಾಗೂ ಅಣ್ಣಯ್ಯ ಧಾರಾವಾಹಿಯ ಬೇಬಿ ಅಂಕಿತ ಗೌಡ. ಮಾಸ್ಟರ್ ಆರುಷ್ ಗುಣಕಿಮಠ, ಶಾಮಸುಂದರ್, ಸುಂದರ್ ವೀಣಾ, ಹರೀಶ್ ರೈ, ಸಿತಾರಾ, ತನುಶ್ರೀ, ಅನುಪಮಾ ಪಂಚಾಕ್ಷರಿ, ಶೈಲೇಶ್, ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಶೇಷ ಪಾತ್ರದಲ್ಲಿ ನಿಮಾನ್ಸ್ ಮುಖ್ಯಸ್ಥರಾಗಿದ್ದ ಪದ್ಮಶ್ರೀ ಸಿ ಆರ್ ಚಂದ್ರಶೇಖರ್ ಅಭಿನಯಿಸಿದ್ದಾರೆ. ಒಂದು ಒಳ್ಳೆಯ ಸಂದೇಶ ನೀಡುವ ಪಾತ್ರ ಅವರದು.    
ಗುಂಡ್ಲುಪೇಟೆ ಸುರೇಶ್ ರವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ದಿನೇಶ್ ಕುಮಾರ್ ಸಂಗೀತ ಸಂಯೋಜಿಸಿದ್ದಾರೆ. ಚಿತ್ರದಲ್ಲಿ ಆರು ಹಾಡುಗಳಿದ್ದು, ರಾಯರ ಹರೀಶ್ ಮತ್ತು ನೆಲಮನೆ ರಾಘವೇಂದ್ರ ಗೀತರಚನೆ ಮಾಡಿದ್ದಾರೆ. ವ್ಯಾಸರಾಜ ಸೋಸಲೆ, ಮೊಹಮ್ಮದ್ ಸಾಬ್, ಸ್ನೇಹ ಹಾಗೂ ಅನಿತಾ ಸಾರಾ ಮಹೇಶ್, ಆದರ್ಶ್, ಮುಂತಾದವರು ಹಾಡುಗಳನ್ನು ಹಾಡಿದ್ದಾರೆ. ಜೂನ್ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡುವ ಸಿದ್ಧತೆಯಲ್ಲಿದೆ ಚಿತ್ರತಂಡ..                             
 ನಿರ್ಮಾಪಕಿ ಬೃಂದಾ ಎನ್ ಜಯರಾಮ್ ರವರ ಜನ್ಮದಿನದ ಪ್ರಯುಕ್ತ ಚಿತ್ರತಂಡ ಟೈಟಲ್ ಟೀಸರ್ ಬಿಡುಗಡೆ ಮಾಡಿದೆ. ಟೈಟಲ್ ಟೀಸರ್ ನಿರೀಕ್ಷೆಗೂ ಮೀರಿ ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’..

ಜುಲೈ 25 ರಂದು ತೆರೆಗೆ ಬರಲಿದೆ ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಸ್ವಪ್ನ ಮಂಟಪ’.. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿಜಯ ರಾಘವೇಂದ್ರ ನಾಯಕ.‌ ರಂಜನಿ ರಾಘವನ್ ನಾಯಕಿ .. ಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಖ್ಯಾತ ನಿರ್ದೇಶಕ ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ,‌‌ ನಾಯಕಿಯಾಗಿ ನಟಿಸಿರುವ ‘ಸ್ವಪ್ನಮಂಟಪ’ ಚಿತ್ರ ಇದೇ ಜುಲೈ 25 ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ದೇಶಕ ಬರಗೂರು ರಾಮಚಂದ್ರಪ್ಪ ಅವರು, ನಾನು ಇಪ್ಪತ್ತೈದು ವರ್ಷಗಳ ಹಿಂದೆ ಬರೆದಿದ್ದ "ಸ್ವಪ್ನ ಮಂಟಪ" ಕಾದಂಬರಿ ಈಗ ಸಿನಿಮಾ ರೂಪ ಪಡೆದುಕೊಂಡಿದೆ. ಇದೇ ಜುಲೈ 25 ರಂದು ಬಿಡುಗಡೆಯಾಗುತ್ತಿದೆ.  ಮೈಸೂರಿನ ಎ.ಎಂ.ಬಾಬು ನಿರ್ಮಾಣದ  ‘ಸ್ವಪ್ನಮಂಟಪ’ವನ್ನು ಮಾರ್ಸ್ ಸುರೇಶ್ ಅವರು ವಿತರಣೆ ಮಾಡುತ್ತಿದ್ದಾರೆ. ಇದು ಪಾರಂಪರಿಕ ಸ್ಥಳಗಳ ಸಂರಕ್ಷಣೆಯನ್ನು ಪ್ರತಿಪಾದಿಸುವ ಚಿತ್ರವಾಗಿದೆ. ಹಿಂದೆ ರಾಜ ತನ್ನ ಎರಡನೇ ಹೆಂಡತಿಗಾಗಿ ನಿರ್ಮಿಸುತ್ತಿದ್ದ ಮಂಟಪವನ್ನು "ಸ್ವಪ್ನ ಮಂಟಪ" ಎಂದು ಕರೆಯುತ್ತಿದ್ದರು.  ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.