Skip to main content

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಚಿತ್ರ ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ..

ಸ್ಯಾಂಡಲ್‌ವುಡ್‌ನ ಖ್ಯಾತ ನಟಿ ಶರ್ಮಿಳಾ ಮಾಂಡ್ರೆ ಮತ್ತು ಚಿತ್ರ ನಿರ್ಮಾಪಕ ಸುಧನ್ ಸುಂದರಂ ನಿಶ್ಚಿತಾರ್ಥ..
ದಕ್ಷಿಣ ಭಾರತದ ಚಿತ್ರರಂಗದ ಜನಪ್ರಿಯ ನಟಿ ಹಾಗೂ ನಿರ್ಮಾಪಕಿ ಶರ್ಮಿಳಾ ಮಾಂಡ್ರೆ ಮತ್ತು ತಮಿಳು ಚಿತ್ರರಂಗದ ಖ್ಯಾತ ನಿರ್ಮಾಪಕ ಸುಧನ್ ಸುಂದರಂ ಅವರು ತಮ್ಮ ನಿಶ್ಚಿತಾರ್ಥದ ಸಂಭ್ರಮದಲ್ಲಿದ್ದಾರೆ. ಆಪ್ತ ಕುಟುಂಬಸ್ಥರು ಹಾಗೂ ಹಿತೈಷಿಗಳ ಸಮ್ಮುಖದಲ್ಲಿ ನಡೆದ ಸರಳ ಹಾಗೂ ಅತ್ಯಂತ ಸುಂದರ ಸಮಾರಂಭದಲ್ಲಿ ಉಭಯ ಕುಶಲೋಪರಿಗಳೊಂದಿಗೆ ಇಬ್ಬರೂ ಉಂಗುರ ಬದಲಾಯಿಸಿಕೊಂಡಿದ್ದಾರೆ.
ಸಿನಿಮಾ ಹಾಗೂ ಸಾಂಪ್ರದಾಯಿಕ ಮೌಲ್ಯಗಳ ಬಗ್ಗೆ ಅಪಾರ ಗೌರವ ಹೊಂದಿರುವ ಈ ಜೋಡಿಯ ನಿಶ್ಚಿತಾರ್ಥದ ವೇದಿಕೆಯು ಬಿಳಿ ಹೂವುಗಳ ಅಲಂಕಾರ ಹಾಗೂ ಅತ್ಯಾಧುನಿಕ ಶೈಲಿಯ ವಿನ್ಯಾಸದಿಂದ ಕಂಗೊಳಿಸುತ್ತಿತ್ತು. ದಕ್ಷಿಣ ಭಾರತದ ಚಿತ್ರರಂಗದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಈ ಇಬ್ಬರು ಪ್ರಭಾವಿ ವ್ಯಕ್ತಿಗಳು ಬಾಳ ಬಂಧನಕ್ಕೆ ಬಲಗಾಲಿಡಲು ಅಣಿಯಾಗುತ್ತಿದ್ದಾರೆ.
ಸ್ಯಾಂಡಲ್‌ವುಡ್‌ ಬ್ಯೂಟಿ ಶರ್ಮಿಳಾ ಮಾಂಡ್ರೆ..
ಕನ್ನಡ ಚಿತ್ರರಂಗದ ಪ್ರಮುಖ ನಟಿಯರಲ್ಲಿ ಒಬ್ಬರಾದ ಶರ್ಮಿಳಾ ಮಾಂಡ್ರೆ ಅವರು 2007ರಲ್ಲಿ ಬಿಡುಗಡೆಯಾದ ‘ಸಜನಿ’ ಚಿತ್ರದ ಮೂಲಕ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಆನಂತರ ‘ಕೃಷ್ಣ’, ‘ನವಗ್ರಹ’, ‘ಸ್ವಯಂವರ’, ‘ಆಕೆ’, ‘ಗಾಳಿಪಟ 2’, ‘ಪೌಡರ್’ ಹಾಗೂ ಇತ್ತೀಚಿನ ‘ಡೆವಿಲ್’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ನಟನೆಯ ಜೊತೆಗೆ ‘ಶರ್ಮಿಳಾ ಮಾಂಡ್ರೆ ಪ್ರೊಡಕ್ಷನ್ಸ್’ ಸಂಸ್ಥೆಯ ಮೂಲಕ ಯಶಸ್ವಿ ಚಿತ್ರಗಳನ್ನು ನಿರ್ಮಿಸುತ್ತಾ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇದುವರೆಗೆ ಸುಮಾರು 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಇವರು, ಕಂಟೆಂಟ್ ಆಧಾರಿತ ಸಿನಿಮಾಗಳಿಗೆ ಸದಾ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.
ತಮಿಳಿನ ಖ್ಯಾತ ನಿರ್ಮಾಪಕ ಸುಧನ್ ಸುಂದರಂ..
ದಕ್ಷಿಣ ಭಾರತದ ಪ್ರತಿಷ್ಠಿತ ಚಲನಚಿತ್ರ ನಿರ್ಮಾಣ ಸಂಸ್ಥೆಯಾದ "ಪ್ಯಾಶನ್ ಸ್ಟುಡಿಯೋಸ್" ನ ಸಂಸ್ಥಾಪಕರು ಹಾಗೂ ನಿರ್ಮಾಪಕರಾದ ಸುಧನ್ ಸುಂದರಂ ಅವರು ಚಿತ್ರರಂಗಕ್ಕೆ ಹಲವು ಗುಣಮಟ್ಟದ ಸಿನಿಮಾಗಳನ್ನು ನೀಡಿದ್ದಾರೆ. ಇವರ ನಿರ್ಮಾಣದಲ್ಲಿ ಮೂಡಿಬಂದ ‘ಕಪ್ಪಲ್’, ‘ನಿಬುಣನ್’, ‘ಸೀತಕಾತಿ’, ‘ಅನಬೆಲ್ ಸೇತುಪತಿ’ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ‘ಪಾರ್ಕಿಂಗ್’ ಮತ್ತು ವಿಜಯ್ ಸೇತುಪತಿ ಅಭಿನಯದ ಬ್ಲಾಕ್‌ಬಸ್ಟರ್ ಹಿಟ್ ಸಿನಿಮಾ ‘ಮಹಾರಾಜ’ ಸೇರಿದಂತೆ ಹಲವು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರಗಳನ್ನು ಇವರು ನಿರ್ಮಿಸಿದ್ದಾರೆ. 
"ಇದು ನಮ್ಮ ಜೀವನದ ಅತ್ಯಂತ ಸುಂದರ ಹಾಗೂ ವಿಶೇಷವಾದ ಅಧ್ಯಾಯ. ನಮ್ಮ ಮೇಲೆ ಪ್ರೀತಿ ಮತ್ತು ಆಶೀರ್ವಾದ ಮಳೆಗರೆದ ಎಲ್ಲರಿಗೂ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ನಮ್ಮ ಈ ಹೊಸ ಜೀವನದ ಪಯಣವನ್ನು ಎದುರುನೋಡುತ್ತಿದ್ದೇವೆ." ಎಂದು ಶರ್ಮಿಳಾ ಮಾಂಡ್ರೆ ಹೇಳಿದರೆ, "ನಮ್ಮ ಬೆಂಬಲಕ್ಕೆ ನಿಂತಿರುವ ನಮ್ಮ ಕುಟುಂಬಸ್ಥರು, ಸ್ನೇಹಿತರು ಹಾಗೂ ಹಿತೈಷಿಗಳ ಪ್ರೀತಿ ಮತ್ತು ಸಹಕಾರಕ್ಕೆ ನಾವು ಎಂದಿಗೂ ಚಿರಋಣಿ." ಎಂಬುದು ಸುಧನ್ ಸುಂದರಂ ಅವರ ಮಾತು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...