Skip to main content

ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ಸಂಚಲನ: ಹೊಂಬಾಳೆ ಫಿಲ್ಮ್ಸ್, ನಟ ಸೂರ್ಯ ಹಾಗೂ ‘ಜೈ ಭೀಮ್’ ನಿರ್ದೇಶಕ ಜ್ಞಾನವೇಲ್ ಅಪೂರ್ವ ಸಂಯೋಜನೆ ಘೋಷಣೆ!

ಭಾರತೀಯ ಚಿತ್ರರಂಗದಲ್ಲಿ ಮತ್ತೊಂದು ಸಂಚಲನ: ಹೊಂಬಾಳೆ ಫಿಲ್ಮ್ಸ್, ನಟ ಸೂರ್ಯ ಹಾಗೂ ‘ಜೈ ಭೀಮ್’ ನಿರ್ದೇಶಕ ಜ್ಞಾನವೇಲ್ ಅಪೂರ್ವ ಸಂಯೋಜನೆ ಘೋಷಣೆ!
ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು ತನ್ನ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದೆ. ವಿಜಯ್ ಕಿರಗಂದೂರು ನಿರ್ಮಿಸಲಿರುವ ಈ ಚಿತ್ರಕ್ಕಾಗಿ ಜನಪ್ರಿಯ ನಟ ಸೂರ್ಯ, ನಟಿ ಕಾಯಾದು ಲೋಹರ್ ಮತ್ತು ಖ್ಯಾತ ನಿರ್ದೇಶಕ ಟಿ. ಜೆ. ಜ್ಞಾನವೇಲ್ ಕೈಜೋಡಿಸಿದ್ದು, ಪ್ರಭಾವಶಾಲಿ ಕಥಾಹಂದರ ಹಾಗೂ ಭವ್ಯ ದೃಶ್ಯವೈಭವದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ.
ಭಾರತೀಯ ಚಿತ್ರರಂಗದ ಯಶಸ್ವಿ ನಟರಲ್ಲಿ ಒಬ್ಬರಾದ ಸೂರ್ಯ, ಕಳೆದ ಎರಡು ದಶಕಗಳಿಂದ ತಮ್ಮ ವೈವಿಧ್ಯಮಯ ನಟನೆ ಮತ್ತು ಧೀಮಂತ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಎರಡು ರಾಷ್ಟ್ರ ಪ್ರಶಸ್ತಿಗಳು ಹಾಗೂ ಏಳು ಫಿಲ್ಮ್‌ಫೇರ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವ ಇವರು, ಕೇವಲ ನಟನೆಯಷ್ಟೇ ಅಲ್ಲದೆ ಉತ್ತಮ ಸಂದೇಶವಿರುವ ಸಿನಿಮಾಗಳನ್ನು ನಿರ್ಮಿಸುವ ಮೂಲಕವೂ ಗುರುತಿಸಿಕೊಂಡಿದ್ದಾರೆ.
ಇವರೊಂದಿಗೆ ಕೈಜೋಡಿಸಿರುವ ನಿರ್ದೇಶಕ ಟಿ. ಜೆ. ಜ್ಞಾನವೇಲ್ ಅವರು ತಮ್ಮ ‘ಜೈ ಭೀಮ್’ ಚಿತ್ರದ ಮೂಲಕ ದೇಶಾದ್ಯಂತ ಅಪಾರ ಪ್ರಶಂಸೆ ಗಳಿಸಿದವರು. ಸಾಮಾಜಿಕ ಕಳಕಳಿ, ಭಾವನಾತ್ಮಕ ಆಳ ಮತ್ತು ದಿಟ್ಟ ಕಥಾಹಂದರಕ್ಕೆ ಹೆಸರಾಗಿರುವ ಜ್ಞಾನವೇಲ್, ಇಂದಿನ ಭಾರತೀಯ ಚಿತ್ರರಂಗದ ವಿಶಿಷ್ಟ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ.
ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯು ‘ಕೆ.ಜಿ.ಎಫ್’, ‘ಕಾಂತಾರ’ ಮತ್ತು ‘ಸಲಾರ್’ ನಂತಹ ಬೃಹತ್ ಚಿತ್ರಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಬರೆದಿದೆ. ಪ್ರಾದೇಶಿಕ ಗಡಿಗಳನ್ನು ಮೀರಿ, ವಿಭಿನ್ನ ಆಲೋಚನೆಗಳ ತಂತ್ರಜ್ಞರಿಗೆ ಮುನ್ನಲೆಗೆ ತರುವ ಮೂಲಕ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಳ್ಳುವ ಕಥೆಗಳನ್ನು ಈ ಸಂಸ್ಥೆ ನಿರಂತರವಾಗಿ ಬೆಂಬಲಿಸುತ್ತಾ ಬಂದಿದೆ.
"ಚಿತ್ರರಂಗದ ಮೇಲಿನ ಅಪಾರ ಪ್ರೀತಿ ಹಾಗೂ ಒಂದೇ ರೀತಿಯ ಯೋಚನೆ ಉಳ್ಳವರು ಒಂದಾದಾಗ ಅತ್ಯುತ್ತಮ ಸಿನಿಮಾ ಮೂಡಿಬರಲು ಸಾಧ್ಯ ಎಂದು ಹೊಂಬಾಳೆ ಫಿಲ್ಮ್ಸ್ ಸದಾ ನಂಬುತ್ತದೆ. ಸೂರ್ಯ ಮತ್ತು ಟಿ. ಜೆ. ಜ್ಞಾನವೇಲ್ ಅವರೊಂದಿಗೆ ಕೆಲಸ ಮಾಡುತ್ತಿರುವುದು ಜಾಗತಿಕ ಮಟ್ಟದಲ್ಲಿ ಎಲ್ಲರಿಗೂ ತಲುಪುವಂತಹ ಒಂದು ಪ್ರಾಮಾಣಿಕ ಹಾಗೂ ಅರ್ಥಪೂರ್ಣ ಕಥೆಯನ್ನು ಹೇಳುವ ನಿಟ್ಟಿನಲ್ಲಿ ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ."
ವಿಜಯ್ ಕಿರಗಂದೂರು, ಸಂಸ್ಥಾಪಕರು, ಹೊಂಬಾಳೆ ಫಿಲ್ಮ್ಸ್.
ಈ ಚಿತ್ರಕ್ಕೆ ಸಾಯಿ ಅಭ್ಯಂಕರ್ ಅವರ ಸಂಗೀತ ನಿರ್ದೇಶನವಿದ್ದು, ಎಸ್. ಆರ್. ಕದಿರ್ ಅವರ ಛಾಯಾಗ್ರಹಣವಿದೆ. ಚಿತ್ರದ ಕಲಾ ನಿರ್ದೇಶನವನ್ನು ಕೆ. ಕದಿರ್ ನಿರ್ವಹಿಸುತ್ತಿದ್ದು, ಫಿಲೋಮಿನ್ ರಾಜ್ ಅವರ ಸಂಕಲನ ಕಾರ್ಯವಿರಲಿದೆ.
ಈ ಹೊಸ ಸಿನಿಮಾದ ಪಯಣವು ಜೂನ್ 29, 2026 ರಂದು ಚೆನ್ನೈನ ಪಾರ್ಕ್ ಹ್ಯಾಟ್‌ನಲ್ಲಿ ನಡೆದ ಭವ್ಯ ಮುಹೂರ್ತ ಸಮಾರಂಭದೊಂದಿಗೆ ಅಧಿಕೃತವಾಗಿ ಆರಂಭವಾಗಿದೆ. ಚಿತ್ರತಂಡ ಹಾಗೂ ಚಿತ್ರರಂಗದ ಗಣ್ಯರು ಪಾಲ್ಗೊಂಡಿದ್ದ ಈ ಸಮಾರಂಭವು, ಭಾರತೀಯ ಚಿತ್ರರಂಗದ ಅತ್ಯಂತ ನಿರೀಕ್ಷಿತ ಒಕ್ಕೂಟಕ್ಕೆ ಸಾಕ್ಷಿಯಾಯಿತು.
ಪ್ರತಿಭಾವಂತ ನಟ, ಭರವಸೆಯ ನಟಿ, ದೀರ್ಘದೃಷ್ಟಿಯುಳ್ಳ ನಿರ್ದೇಶಕ ಹಾಗೂ ಯಶಸ್ವಿ ನಿರ್ಮಾಣ ಸಂಸ್ಥೆ ಒಟ್ಟಾಗಿರುವ ಈ ಚಿತ್ರವು, ಜಗತ್ತಿನಾದ್ಯಂತ ಎಲ್ಲಾ ತಲೆಮಾರಿನ ಪ್ರೇಕ್ಷಕರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿಯುವಂತಹ ಸೃಷ್ಟಿಯಾಗುವ ಭರವಸೆ ಮೂಡಿಸಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...