Skip to main content

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ರಕ್ಕಿ" ಚಿತ್ರದ ಟ್ರೇಲರ್ ಅನಾವರಣ...

ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ರಕ್ಕಿ" ಚಿತ್ರದ ಟ್ರೇಲರ್ ಅನಾವರಣ...
ಅಶ್ವಿನಿ ಪುನೀತ್ ರಾಜಕುಮಾರ್ ಅವರ ಆಶೀರ್ವಾದದೊಂದಿಗೆ, ಎಸ್ ಎನ್ ಆರ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಾಲಿಗ್ರಾಮ ಸುರೇಶ್ ಅವರು ನಿರ್ಮಿಸಿರುವ, ವೆಂಕಟ್ ಭಾರದ್ವಾಜ್ ನಿರ್ದೇಶನದಲ್ಲಿ ರಕ್ಕಿ ನಾಯಕನಾಗಿ ನಟಿಸಿರುವ "ರಕ್ಕಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪಿ.ಆರ್.ಕೆ ಆಡಿಯೋದಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಈ ಟ್ರೇಲರ್ ಲಭ್ಯವಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. . 
ಜರ್ಮನಿಯಲ್ಲಿ ಹಲವು ವರ್ಷಗಳಿಂದ ನೆಲೆಸಿರುವ ಸಾಲಿಗ್ರಾಮ ಮೂಲದ ಸುರೇಶ್ ಅವರು ನನಗೆ ಇಪ್ಪತ್ತು ವರ್ಷಗಳ ಸ್ನೇಹಿತರು. ಅವರ ಮಗ ರಕ್ಕಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ನಾನು ಸುರೇಶ್ ಅವರ ಬಳಿ ಎರಡು ಕಥೆ ಹೇಳಿದ್ದೆ. ಅವರು ಈ ಕಥೆಯನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರ ಬಳಿ ಹೇಳಿ. ಅವರು ಒಪ್ಪುವ ಕಥೆಯನ್ನು ಸಿನಿಮಾ ಮಾಡೋಣ ಎಂದರು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಈ ಚಿತ್ರದ ಕಥೆ ಕೇಳಿ ಚೆನ್ನಾಗಿದೆ ಅಂತ ಹೇಳಿದರು. ನಂತರ ಚಿತ್ರ ಆರಂಭವಾಯಿತು. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮುಹೂರ್ತದ ದಿನ ಚಿತ್ರಕ್ಕೆ ಚಾಲನೆ ನೀಡಿದ್ದರು. ಇಂದು ಟ್ರೇಲರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ ಅವರಿಗೆ ಹಾಗೂ ಚಿತ್ರ ಚೆನ್ನಾಗಿ ಮೂಡಿಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ. ಚಿತ್ರೀಕರಣ ಹಾಗೂ ನಂತರದ ಕೆಲಸಗಳು ಪೂರ್ಣವಾಗಿ ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ. ಚಿತ್ರ ಜುಲೈ 10 ರಂದು ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ‌ ವೆಂಕಟ್ ಭಾರದ್ವಾಜ್ ತಿಳಿಸಿದರು. ‌‌‌  ಚಿತ್ರದ ಆರಂಭದಿಂದಲೂ ತಮಗೆ ಬೆನ್ನೆಲುಬಾಗಿ ನಿಂತಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಧನ್ಯವಾದ ತಿಳಿಸಿ ಮಾತನಾಡಿದ ನಾಯಕ ರಕ್ಕಿ, ನನ್ನ ಹೆಸರು ರಕ್ಕಿ ಹಾಗೂ ಚಿತ್ರದ ಶೀರ್ಷಿಕೆಯೂ "ರಕ್ಕಿ". ಇದೊಂದು ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ನಾನು ಗ್ಯಾಂಗ್ ಸ್ಟರ್ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಹಾಗಂತ,‌ ಮಚ್ಚು ಹಿಡಿಯುವ ಗ್ಯಾಂಗ್ ಸ್ಟರ್ ಅಲ್ಲ. ಸ್ಟೈಲಿಶ್ ಗ್ಯಾಂಗ್ ಸ್ಟರ್. ವಯಸ್ಸಿನ ಮಿತಿ ಇಲ್ಲದೆ ಎಲ್ಲರೂ ನೋಡಬಹುದಾದ ಚಿತ್ರವಿದು. ಜರ್ಮನಿಯಲ್ಲಿ ಇದಕ್ಕೆ ಬೇಕಾದ ತಯಾರಿ ಮಾಡಿಕೊಂಡು ಇಲ್ಲಿಗೆ ಬಂದು ಪರೀಕ್ಷೆ ಬರೆದಿದ್ದೇನೆ. ಜುಲೈ 10 ರಂದು ರಿಸಲ್ಟ್ ಬರಲಿದೆ. ನನ್ನ ಚೊಚ್ಚಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.
ನಾನು ಮೂಲತಃ ಸಾಲಿಗ್ರಾಮದವನು. ಐಟಿ ಉದ್ಯೋಗಿ. ಇಪ್ಪತ್ತು ವರ್ಷಗಳಿಂದ ಜರ್ಮನ್ ನಲ್ಲೇ ವಾಸಿಸುತ್ತಿದ್ದೇನೆ. ನನ್ನ ತಂದೆ ರಾಜಶೇಖರ್ ಅವರು ಡಾ||ರಾಜಕುಮಾರ್ ಅಭಿನಯದ "ಹೊಸಬೆಳಕು" ಚಿತ್ರವನ್ನು ನಿರ್ಮಾಣ ಮಾಡಿದ್ದರು. ಈಗ ನಾನು "ರಕ್ಕಿ" ಚಿತ್ರವನ್ನು ನಿರ್ಮಾಣ ಮಾಡಿದ್ದೇನೆ. ನನ್ನ ಮಗ "ರಕ್ಕಿ" ನಾಯಕನಾಗಿ ನಟಿಸಿದ್ದಾನೆ. ನಿರ್ದೇಶಕ ವೆಂಕಟ್ ಭಾರದ್ವಾಜ್ ಒಂದೊಳ್ಳ ಕಥೆ ಮಾಡಿದ್ದಾರೆ. ನಮ್ಮ ಕುಟುಂಬದ ಸ್ನೇಹಿತರಾದ ಅಶ್ವಿನಿ ಪುನೀತ್ ರಾಜಕುಮಾರ್ ಸಹಕಾರ ಈ ಚಿತ್ರಕ್ಕೆ ಅಪಾರ. ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಹಾಗೂ ಇಡೀ "ರಕ್ಕಿ" ಚಿತ್ರತಂಡಕ್ಕೆ ಧನ್ಯವಾದ ಎಂದರು ನಿರ್ಮಾಪಕ ಸಾಲಿಗ್ರಾಮ ಸುರೇಶ್.
ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಡ್ಯಾನಿ. ಭೂಗತ ಲೋಕದ ದೊರೆಯಾಗಿ ಕಾಣಿಸಿಕೊಂಡಿದ್ದೇನೆ ಎಂದು ತಮ್ಮ ಪಾತ್ರದ ಕುರಿತು ನಟ ಬಿ.ಸುರೇಶ್ ತಿಳಿಸಿದರು. 
ನಾಯಕಿಯರಾದ ಆಶಿಕಾ ಸೋಮಶೇಖರ್, ಪಲ್ಲವಿ ಮಂಜುನಾಥ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಸಂಗೀತದ ಕುರಿತು ಲೋಕಿ ತವಸ್ಯ ಮಾಹಿತಿ ನೀಡಿದರು. ಛಾಯಾಗ್ರಾಹಕ ಐಸಾಕ್ ಪ್ರಭಾಕರ್, ಕಲಾ ನಿರ್ದೇಶಕ ದೀಪಕ್ ಕಾಮತ್, ಕಾರ್ಯಕಾರಿ ನಿರ್ಮಾಪಕ‌ ವಜ್ರೇಶ್ವರಿ ಸ್ವಾಮಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 
ರಕ್ಕಿ ಸುರೇಶ್, ಪಲ್ಲವಿ ಮಂಜುನಾಥ್, ಆಶಿಕಾ ಸೋಮಶೇಖರ್, ಬಿ.ಸರೇಶ್, ಸಂಪತ್ ಮೈತ್ರೇಯ, ರಮೇಶ್ ಪಂಡಿತ್, ಬಲ ರಾಜವಾಡಿ, ಜಿ ಜಿ, ಹರಿಣಿ ಶ್ರೀಕಾಂತ್ ಮುಂತಾದವರ ಭರ್ಜರಿ ತಾರಾಬಳಗವಿರುವ ಈ ಚಿತ್ರಕ್ಕೆ ದೀಪು ಎಸ್ ಕುಮಾರ್ ಅವರ ಸಂಕಲನವಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...