Skip to main content

"ಮಹಾನ್" ಚಿತ್ರದಲ್ಲಿ ಡಾ||ಶಿವರಾಜಕುಮಾರ್... ‌ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಕರುನಾಡ ಚಕ್ರವರ್ತಿ...

"ಮಹಾನ್" ಚಿತ್ರದಲ್ಲಿ ಡಾ||ಶಿವರಾಜಕುಮಾರ್... ‌ವಿಜಯ ರಾಘವೇಂದ್ರ ಅಭಿನಯದ ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ ಕರುನಾಡ ಚಕ್ರವರ್ತಿ...
ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ನಿರ್ಮಿಸುತ್ತಿರುವ, ಪಿ.ಸಿ.ಶೇಖರ್ ನಿರ್ದೇಶಿಸುತ್ತಿರುವ "ಮಹಾನ್" ಚಿತ್ರದ ವಿಶೇಷಪಾತ್ರದಲ್ಲಿ ಕರುನಾಡ ಚಕ್ರವರ್ತಿ ಡಾ||ಶಿವರಾಜಕುಮಾರ್ ಅಭಿನಯಿಸಿದ್ದಾರೆ. ವಿಜಯ್ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸಿದ್ದಾರೆ. ಬಹಳ ವರ್ಷಗಳ ನಂತರ ಶಿವರಾಜಕುಮಾರ್ ಹಾಗೂ ವಿಜಯ ರಾಘವೇಂದ್ರ ಒಂದೇ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
  "ಮಹಾನ್" ರೈತರ ಕುರಿತಾದ ಕಥಾಹಂದರ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಮುಖ್ಯ ಪಾತ್ರಗಳಾಗಿರುತ್ತದೆ. ಮನೆಯಲ್ಲಿ ನಾವೇನಾದರೂ ತಪ್ಪು ಮಾಡಿದರೆ, ನಮಗೆ ಬುದ್ದಿ ಹೇಳಲು ತಂದೆ - ತಾಯಿ ಇರುತ್ತಾರೆ. ಅಂತಹುದೇ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾದಾಗ ಅಲ್ಲಿನ ತೊಂದರೆಗಳನ್ನು ತಿದ್ದಲು "ಮಹಾನ್" ವ್ಯಕ್ತಿಯ ಅಗತ್ಯವಿರುತ್ತದೆ. ಅಂತಹ "ಮಹಾನ್" ವ್ಯಕ್ತಿಯ ಪಾತ್ರದಲ್ಲಿ ಡಾ||ಶಿವರಾಜಕುಮಾರ್ ಅಭಿನಯಿಸಿದ್ದಾರೆ. "ಮಹಾನ್" ಚಿತ್ರದಲ್ಲಿ ಹಿರಿಯ ವಕೀಲರಾಗಿ ಶಿವರಾಜಕುಮಾರ್ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಈ ಪಾತ್ರ ತುಂಬಾ ಪ್ರಮುಖವಾದದ್ದು. ಎಲ್ಲಾ ನಿರ್ದೇಶಕರಿಗೂ ಶಿವರಾಜಕುಮಾರ್ ಅವರ ಚಿತ್ರ ನಿರ್ದೇಶನ ಮಾಡುವ ಆಸೆ ಇರುತ್ತದೆ. ನನಗೂ ಅದು ಬಹಳ ದಿನಗಳ ಹಂಬಲ. ಆ ಆಸೆ ಈಗ ಈಡೇರಿದೆ. ಶಿವರಾಜಕುಮಾರ್ ಅವರ ಅಭಿನಯ ಪ್ರಕಾಶ್ ಬುದ್ದೂರು ಅವರಿಗು ತುಂಬಾ ಸಂತೋಷ ತಂದಿದೆ. ಇಡೀ "ಮಹಾನ್" ಚಿತ್ರತಂಡ ಶಿವರಾಜಕುಮಾರ್ ಅವರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ನಿರ್ದೇಶಕ ಪಿ‌.ಸಿ.ಶೇಖರ್ ತಿಳಿಸಿದ್ದಾರೆ. . 
  "ಮಹಾನ್" ಬಹು ತಾರಾಬಳಗದ ಚಿತ್ರವಾಗಿದ್ದು, ಡಾ||ಶಿವರಾಜಕುಮಾರ್, ವಿಜಯ ರಾಘವೇಂದ್ರ, ರಾಧಿಕಾ ನಾರಾಯಣ್, ಮಿತ್ರ, ನಮ್ರತಾ ಗೌಡ, ವರ್ಷ ಬೊಳ್ಳಮ್ಮ, ಕಿರಣ್ ಶ್ರೀನಿವಾಸ್ ಸಹ ಆಭಿನಯಿಸಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...