Skip to main content

ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ "ಫಾರೆವರ್"ಗೆ ಅದ್ದೂರಿ ಚಾಲನೆ..

ಲೂಸ್ ಮಾದ ಯೋಗಿ ಅಭಿನಯದ 51 ಚಿತ್ರ "ಫಾರೆವರ್"ಗೆ ಅದ್ದೂರಿ ಚಾಲನೆ..
ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿ ಶುಭಕೋರಿದ ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾ..
 ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಲೂಸ್ ಮಾದ ಯೋಗಿ ಅಭಿನಯದ 51 ನೇ ಚಿತ್ರ "ಫಾರೆವರ್". ಸುಪ್ರೀಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಎಂ.ವೆಂಕಟನಾರಾಯಣ್(ಠಾಗೋರ್ ಕೃಷ್ಣ) ನಿರ್ಮಾಣದ, "ಚಂದ್ರಿಕ" ಖ್ಯಾತಿಯ ಯೋಗೇಶ್ ಎಂ ನಿರ್ದೇಶಿಸುತ್ತಿರುವ "ಫಾರೆವರ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಆರಂಭ ಫಲಕ ತೋರಿದರು. ಶಾಸಕ ಕೃಷ್ಣಪ್ಪ ಅವರು ಕ್ಯಾಮೆರಾ ಚಾಲನೆ ಮಾಡಿದರು. "ನಾಗರಹಾವು" ಚಿತ್ರದ ನಿರ್ಮಾಪಕ‌ ಸಾಜಿದ್ ಖುರೇಶಿ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಿದರು. ಗಣ್ಯರೆಲ್ಲರು ಸೇರಿ ಟ್ಯಾಂಕರ್ ಮೇಲಿದ್ದ ಶೀರ್ಷಿಕೆಯನ್ನು ಅನಾವರಣ ಮಾಡಿದ್ದು ವಿಶೇಷವಾಗಿತ್ತು. ಚಿತ್ರರಂಗ ಸಾಕಷ್ಟು ಗಣ್ಯರು ಹಾಗೂ ಸಹಸ್ರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.         
ನಾನು ಹಾಗೂ ಧ್ರುವ ಸರ್ಜಾ ಒಂದೇ ಸ್ಕೂಲ್ ನಲ್ಲಿ ಓದಿದವರು. ಮೆಚ್ಚಿನ ಗೆಳೆಯ ಅವರು. ಅವರು ಬಂದು ನಮ್ಮ ಚಿತ್ರಕ್ಕೆ ಕ್ಲಾಪ್ ಮಾಡಿದ್ದು ಖುಷಿಯಾಗಿದೆ. ಸುಮಾರು ಎರಡು ವರ್ಷಗಳ ನಂತರ ನಾನು ನಾಯಕನಾಗಿ ನಟಿಸುತ್ತಿರುವ ಚಿತ್ರದ ಮುಹೂರ್ತ ನಡೆಯುತ್ತಿದೆ. ಬಹಳ ಅದ್ದೂರಿಯಾಗಿಯೇ ನಡೆದಿದೆ.‌ ಚಿತ್ರ ಕೂಡ ಇಷ್ಟೇ ಅದ್ದೂರಿಯಾಗಿರುತ್ತದೆ. ನಿರ್ದೇಶಕರು ಒಂದೊಳ್ಳೆ ಕಥೆ ಬರೆದಿದ್ದಾರೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಫಸ್ಟ್ ಲುಕ್ ಪೋಸ್ಟರ್ ತುಂಬಾ ಚೆನ್ನಾಗಿದೆ. ಈ ಚಿತ್ರದಲ್ಲಿ ಲವ್, ಸೆಂಟಿಮೆಂಟ್, ಆಕ್ಷನ್ ಅಲ್ಲದೆ ಮತ್ತೊಂದು ಇದೆ. ಅದನ್ನು ಮುಂದಿನ ದಿನಗಳಲ್ಲಿ ಹೇಳುತ್ತೇವೆ. ನಾನು ತುಂಬಾ ಬೈಕ್ ಇಷ್ಟ ಪಡುತ್ತೇನೆ. ಬೈಕ್‌ ರೈಡರ್ ಕೂಡ. ಈ ಕಥೆ ಅದಕ್ಕೆ ಹತ್ತಿರವಾಗಿರುವುದು ಮತ್ತಷ್ಟು ಇಷ್ಟವಾಯಿತು. ಬೆಂಗಳೂರಿನಲ್ಲೇ ಮೊದಲ ಹಂತದ ಚಿತ್ರೀಕರಣ ನಡೆಯುತ್ತಿದೆ. ಚಿತ್ರವನ್ನು ಯಾವುದೇ ಕೊರತೆ ಬಾರದ ಹಾಗೆ ನಿರ್ಮಾಣ ಮಾಡುವುದಾಗಿ ಹೇಳಿರುವ ನಿರ್ಮಾಪಕರಿಗೆ ಹಾಗೂ ಇಡೀ ಚಿತ್ರತಂಡಕ್ಕೆ ನನ್ನ ಧನ್ಯವಾದ ಎಂದರು ನಾಯಕ‌ ಲೂಸ್ ಮಾದ ಯೋಗಿ. 
 ನಾನು ಮೂರು ವರ್ಷಗಳಲ್ಲಿ ಅತೀ ಹೆಚ್ಚು ಬಾರಿ ವಿಮಾನದಲ್ಲಿ ಪ್ರಯಾಣ ಮಾಡಿದ್ದೇನೆ. ವಿಮಾನ ಹತ್ತಿದ ತಕ್ಷಣ ಮೊಬೈಲ್ ಪಕ್ಕಕ್ಕೆ ಇಟ್ಟು ಈ ಚಿತ್ರದ ಕಥೆ ಬರೆಯುತ್ತಿದೆ. ಪ್ರತಿಬಾರಿ ಯೋಗಿ ಅವರ ಹುಟ್ಟುಹಬ್ಬಕ್ಕೆ ವಿಶ್ ಮಾಡುವಾಗ ಈ ವರ್ಷದ ಹುಟ್ಟುಹಬ್ಬಕ್ಕೆ ಚಿತ್ರ ಆರಂಭ‌ ಮಾಡೋಣ ಅಂತ ಹೇಳುತ್ತಿದ್ದೆ. ಕಾಲ ಈಗ ಕೂಡಿ ಬಂದಿದೆ. ಇತ್ತೀಚೆಗಷ್ಟೇ ಯೋಗಿ ಅವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲೇ ಮುಹೂರ್ತ ನಡೆದಿರುವುದು ಖುಷಿಯಾಗಿದೆ. ನಮ್ಮ ಚಿತ್ರಕ್ಕೆ "ಯುಗ ಮರೆಯದ ಪ್ರೇಮ ಕಥೆ" ಎಂಬ ಅಡಿಬರಹವಿದೆ. ಹಾಗಾಗಿ ಇದೊಂದು ಪ್ರೇಮಕಥೆ. ಆದರೆ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ವಿಶೇಷವಾದ್ದದ್ದು ಮತ್ತೊಂದಿದೆ. ಅದನ್ನು ಮುಂದಿನ ದಿನಗಳಲ್ಲಿ ತಿಳಿಸುವುದಾಗಿ ನಿರ್ದೇಶಕ ಯೋಗೇಶ್ ಮುನಿಸಿದ್ದಪ್ಪ ಹೇಳಿದರು. 
 ನಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಎಂ.ವೆಂಕಟನಾರಾಯಣ(ಟಾಗೂರ್ ಕೃಷ್ಣ). 
ಒಂದು ತುಳು ಚಿತ್ರದಲ್ಲಿ ನಟಿಸಿರುವ ನನಗೆ ಕನ್ನಡದಲ್ಲಿ ಇದು ಮೊದಲ ಚಿತ್ರ ಎಂದು ನಾಯಜಿ ಆಕಾಂಕ್ಷ ರಾವ್ ತಿಳಿಸಿದರು. ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದ್ಯೂತನ್ ಮಾಹಿತಿ ನೀಡಿದರು. ಛಾಯಾಗ್ರಾಹಕ ಸಂಕೇತ್ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...