Skip to main content

ಶ್ರೀನಗರ ಕಿಟ್ಟಿ ಹುಟ್ಟುಹಬ್ಬಕ್ಕೆ ವೇಷಗಳು ಚಿತ್ರದ ಸಾಂಗ್ ಗಿಫ್ಟ್...

ಶ್ರೀನಗರ ಕಿಟ್ಟಿ ಹುಟ್ಟುಹಬ್ಬಕ್ಕೆ ವೇಷಗಳು ಚಿತ್ರದ ಸಾಂಗ್ ಗಿಫ್ಟ್...
 ಒಂದೇ ವೇದಿಕೆಯಲ್ಲಿ ಮೂರು ಚಿತ್ರಗಳ ಕಾರ್ಯಕ್ರಮ..
 ಬುಧವಾರ ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬ. ಅವರ ಬರ್ತ್ ಡೇ ಅಂಗವಾಗಿ ಪತ್ರಕರ್ತ ರವಿ ಬೆಳಗೆರೆ ಅವರು ಜೋಗತಿಯರ ಜೀವನದ ಬಗ್ಗೆ ರಚಿಸಿದ 'ವೇಷಗಳು' ಕಥೆಯನ್ನಾಧರಿಸಿ‌ ನಿರ್ಮಾಣವಾಗುತ್ತಿರುವ ವೇಷಗಳು, ಲವ್ ಕೇಸ್ ಹಾಗೂ ಮದರ್ ಲವ್ ಈ ಮೂರೂ ಚಿತ್ರಗಳ ವಿಶೇಷ ಪತ್ರಿಕಾಗೋಷ್ಠಿ ಸಮಾರಂಭ ನಡೆಯಿತು. ಈ ವೇಳೆ ಕಿಟ್ಟಿ ಅವರ ಬಹುನಿರೀಕ್ಷಿತ ವೇಷಗಳು ಚಿತ್ರದಲ್ಲಿ ‌ಕಿಟ್ಟಿ ಅವರೇ ದನಿಯಾಗಿರುವ ವಿಶೇಷ ಹಾಡನ್ನು ಬಿಡುಗಡೆ ಮಾಡಲಾಯಿತು. ಕಿಶನ್ ರಾವ್ ದಳವಿ ಅವರು ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. 
  ಶ್ರೀನಗರ ಕಿಟ್ಟಿ ಅವರ ಕಳೆದ ಹುಟ್ಟುಹಬ್ಬದಂದು
ವೇಷಗಳು ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿತ್ತು. ಈ ವರ್ಷದ ಅವರ ಬರ್ತ್ಡೇಗೆ ಕಿಟ್ಟಿ ಅವರೇ ಹಾಡಿರುವ ವಿಶೇಷ ಸಾಂಗ್ ರಿಲೀಸಾಗಿದೆ. ಭಾವನಾ ಬೆಳಗೆರೆ ಹಾಗೂ ಶ್ರೀನಗರ ಕಿಟ್ಟಿ ಅರ್ಪಿಸುವ 'ವೇಷಗಳು' ಚಿತ್ರಕ್ಕೆ ಕಿಶನ್ ರಾವ್ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ. ಶ್ರೀನಗರ ಕಿಟ್ಟಿ ಅವರು ಈ ಚಿತ್ರದಲ್ಲಿ ಬಸಪ್ಪ ಹಾಗೂ ಬಸಮ್ಮ ಜೋಗತಿ ಹೀಗೆ ಎರಡು ಶೇಡ್ ಇರುವ ಪಾತ್ರವನ್ನು ನಿರ್ವಹಿಸಿದ್ದಾರೆ.  
    ವೇಷಗಳು ಚಿತ್ರದಲ್ಲಿ ನಮ್ಮ ಜೋಗತಿಯರ ಬಗ್ಗೆ ಹಾಗೂ ಅವರ ಜೀವನ ಶೈಲಿಯ ಕುರಿತಂತೆ ಹೇಳಲಾಗುತ್ತಿದೆ. ಇಲ್ಲಿ ನಟ ಶ್ರೀನಗರ ಕಿಟ್ಟಿ ಅವರು ಬಸಪ್ಪ ಹಾಗೂ ಬಸಮ್ಮ ಜೋಗತಿಯಾಗಿ ಎರಡು ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ 12 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. 
  ಚಿತ್ರದ ಕುರಿತಂತೆ ಮಾತನಾಡಿದ ನಿರ್ದೇಶಕ ಕಿಶನ್ ರಾವ್ ಸದ್ಯ ಒಂದು ಹಂತದ ಶೂಟಿಂಗ್ ಆಗಿದ್ದು, ಕಿಟ್ಟಣ್ಣನವರ ಭಾಗ ಇನ್ನೂ ಆರಂಭವಾಗಿಲ್ಲ. ಎರಡನೇ ಹಂತದ ಚಿತ್ರೀಕರಣಕ್ಕಾಗಿ ಸವದತ್ತಿ ಹಾಗೂ ಉತ್ತರ ಭಾರತದ ಮಹಾಕಾಲೇಶ್ವರ ಇಲ್ಲೆಲ್ಲ ಹೋಗಬೇಕಾಗಿದೆ. ಚಿತ್ರದಲ್ಲಿ ಬಹುತೇಕ ಬಳ್ಳಾರಿ ಕನ್ನಡ ಭಾಷೆಯನ್ನು ಬಳಸಲಾಗಿದೆ ಎಂದು ಮಾಹಿತಿ ನೀಡಿದರು. 
   ಮೂರೂ ಚಿತ್ರತಂಡದವರು ಒಟ್ಟಿಗೇ ಸೇರಿ ತನ್ನ ಬರ್ತ್ಡೇ ಆಚರಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಬರ್ತ್ ಡೇ ಬಾಯ್ ನಟ ಶ್ರೀನಗರ ಕಿಟ್ಟಿ ಈ ಮೂರೂ ಚಿತ್ರಗಳು ತುಂಬಾ ಚೆನ್ನಾಗಿ ಮೂಡಿ ಬರ್ತಿವೆ. ಅದರಲ್ಲೂ ವೇಷಗಳು ತುಂಬಾ ವಿಶೇಷವಾದ ಚಿತ್ರ. ಎರಡನೇ ಹಂತದ ಚಿತ್ರೀಕರಣದಲ್ಲಿ ನಾನು ಭಾಗವಹಿಸುತ್ತಿದ್ದೇನೆ. ನನ್ನ ಬರ್ತ್ ಡೇ ಒಂದು ರೀಸನ್ ಅಷ್ಟೇ. ಇಲ್ಲಿ 3 ಜನ ನಿರ್ದೇಶಕರಿದ್ದಾರೆ, ಅವ್ರಿಗೆಲ್ಲ ಒಳ್ಳೇದಾಗಬೇಕು. ಬರೀ ಬೇರೆ ಭಾಷೆಯ ಚಿತ್ರಗಳನ್ನು ಹೊಗಳುವುದಲ್ಲ, ಕನ್ನಡದಲ್ಲೂ ಒಳ್ಳೆಯ ನಿರ್ದೇಶಕರಿದ್ದಾರೆ. ರವಿ ಬೆಳಗೆರೆ ಅವರ ಉದ್ದೇಶ ಹಾಗೂ ಆಶಯಗಳನ್ನು ಇಟ್ಟುಕೊಂಡು ಸೌಜನ್ಯ ಹಾಗೂ ಕಿಶನ್ ತುಂಬಾ ಚೆನ್ನಾಗಿ ಕೆಲಸ ಮಾಡ್ತಿದಾರೆ ಎನ್ನುತ್ತಾ ವೇಷಗಳು ನಿರ್ಮಾಪಕರನ್ನುದ್ದೇಶಿಸಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿಬರ್ತಿದೆ. ಸುಮಾರು 5 ರಿಂದ 5.5 ಕೋಟಿ ಬಜೆಟ್ ನಲ್ಲಿ ಚಿತ್ರವನ್ನು ಮುಗಿಸಿಕೊಡುತ್ತೇವೆ. ಒಂದು ಅದ್ಭುತವಾದ ಸಿನಿಮಾ ಮಾಡಿದ ನಿರ್ಮಾಪಕ ನೀನಾಗ್ತೀಯ ಎಂದು ಅಭಯ ನೀಡಿದರು. 
 ಇಡೀ ಚಿತ್ರದಲ್ಲಿ ಬಸಪ್ಪ ಪಾತ್ರವೇ ಬಹುತೇಕ ಆವರಿಸಿಕೊಂಡಿದೆ. ಶ್ರೀನಗರ ಕಿಟ್ಟಿ ಅವರು ಜೋಗತಿ ಪಾತ್ರಕ್ಕಾಗಿ ಸಾಕಷ್ಟು ಮಾಹಿತಿ ಪಡೆದುಕೊಂಡು ಸಿದ್ದತೆ ಮಾಡಿಕೊಂಡಿದ್ದಾರೆ.‌ ಸಂಗೀತ ನಿರ್ದೇಶಕ ಕೌಶಿಕ್ ಹರ್ಷ ಮಾತನಾಡುತ್ತ ಅದೊಂದು ತತ್ವಪದ ಆಗಿರಬೇಕು. ಆದರೆ ಕಥೆಯನ್ನು ಹೇಳಬಾರದು ಎಂದುಕೊಂಡು ಮಾಡಿದ ಹಾಡಿದು. ಕಿಟ್ಟಿ ಅವರ ಕೇವಲ‌ ೩ ಗಂಟೆಯೊಳಗೆ ಈ ಹಾಡನ್ನು ಹಾಡಿದರು‌ ಎಂದು ಹೇಳಿದರು. ರಾಜ್ ಗುರು ದತ್ತರಾಜ್ ಅವರ ಸಂಭಾಷಣೆ, ಅಕ್ಷಯ್ ಪಿ.ರಾವ್ ಅವರ ಸಂಕಲನ ಈ ಚಿತ್ರಕ್ಕಿದೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...