Skip to main content

"ಲಂಕೆ" ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಅವರ ಮುಂದಿನ ಚಿತ್ರ "ಡೀಟಾಕ್ಸ್"...

"ಲಂಕೆ" ನಿರ್ದೇಶಕ ರಾಮಪ್ರಸಾದ್ ದಾಸಪ್ಪ ಅವರ ಮುಂದಿನ ಚಿತ್ರ "ಡೀಟಾಕ್ಸ್"...  ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರದ ಪ್ರಮುಖಪಾತ್ರದಲ್ಲಿ ಬಹಭಾಷಾ ನಟ ಕಿಶೋರ್ ಕುಮಾರ್.. ಈ ಹಿಂದೆ "ಲಂಕೆ" ಚಿತ್ರವನ್ನು ನಿರ್ದೇಶಿಸಿದ್ದ, "ಬಣ್ಣಬಣ್ಣದ ಲೋಕ" ಚಿತ್ರದಲ್ಲಿ ನಟನೆಯನ್ನೂ ಮಾಡಿದ್ದ ರಾಮಪ್ರಸಾದ್ ದಾಸಪ್ಪ ನಿರ್ದೇಶನದ ಎರಡನೇ ಚಿತ್ರ "ಡೀಟಾಕ್ಸ್". ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್ ಕುಮಾರ್ ಅಭಿನಯಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.                
ನಾನು ಸಾಮಾನ್ಯವಾಗಿ ಚಿತ್ರ ಮುಗಿದ ಮೇಲೆ ಚಿತ್ರದ ಕುರಿತು ಮಾತನಾಡುತ್ತೇನೆ. ಏಕೆಂದರೆ ನಾವು ಮಾತನಾಡಬಾರದು. ನಮ್ಮ ಕೆಲಸ ಮಾತನಾಡಬೇಕು ಎಂಬುದರಲ್ಲಿ ನಂಬಿಕೆ ಇಟ್ಟಿರುವವನು ನಾನು. ಈ ಚಿತ್ರದ ಚಿತ್ರೀಕರಣ ಕೂಡ ಈಗ ಮುಕ್ತಾಯ ಹಂತ ತಲುಪಿದೆ. ಸೆಪ್ಟೆಂಬರ್ ಕೊನೆಯಲ್ಲಿ ತೆರೆಗೆ ತರುವ ಸಿದ್ದತೆ ನಡೆಯುತ್ತಿದೆ. ಇನ್ನೂ, "ಡೀಟಾಕ್ಸ್" ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. ಏಳರಿಂದ ಎಪ್ಪತ್ತರ ವಯಸ್ಸಿನ ಹೆಣ್ಣುಮಕ್ಕಳ ಮನಸ್ಸಿನಲ್ಲಿ ಯಾವ ರೀತಿ ಹೋರಾಟ ಇರುತ್ತದೆ. ಹೊಡೆದಾಟ ಇರುತ್ತದೆ ಇಂತಹ ವಿಷಯಗಳನ್ನು ಕ್ರೋಢೀಕರಿಸಿ ಈ ಕಥೆ ಬರೆದಿದ್ದೇನೆ. ಸಮಾಜದಲ್ಲಿರುವ ತೊಡಕುಗಳನ್ನು ಸಿನಿಮಾ ಮಾಧ್ಯಮದ ಮೂಲಕ "ಡೀಟಾಕ್ಸ್" ಮಾಡುವ ಪ್ರಯತ್ನ ಮಾಡಿದ್ದೇನೆ. ಇದೊಂದು ಸಮಾಜಕ್ಕೆ ಹತ್ತಿರವಾಗುವ ಕಥಾಹಂದರ ಹೊಂದಿರುವ ಚಿತ್ರ. ಕನ್ನಡ ಭಾಷೆಯಲ್ಲಿ ಮಾತ್ರ ಆರಂಭವಾದ ಈ ಚಿತ್ರ ಇಂದು ಐದು ಭಾಷೆಗಳಲ್ಲಿ ಬರುತ್ತಿದೆ. ಇದೊಂದು ಯುನಿವರ್ಸಲ್ ಕಂಟೆಂಟ್ ಆಗಿರುವುದರಿಂದ ಈ ಪ್ರಯತ್ನ ಮಾಡಿದ್ದೇವೆ. ಕನ್ನಡ ಸೇರಿದಂತೆ ಹಲವು ಭಾಷೆಗಳ ಅನೇಕ ಕಲಾವಿದರು ನಟಿಸಿರುವ ಚಿತ್ರವಿದು. ಇದೊಂದು ತಂತ್ರಜ್ಞರ ಸಿನಿಮಾ ಕೂಡ ಹೌದು. ಎಂದಿನಂತೆ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ರಾಮಪ್ರಸಾದ್ ದಾಸಪ್ಪ.                  
ನನಗೆ ರಾಮಪ್ರಸಾದ್ ಅವರು ಬಂದು ಕಥೆ ಹೇಳಿದಾಗ ಇನ್ಸ್‌ಪೆಕ್ಟರ್ ಪಾತ್ರ ಆದರೆ ಬೇಡ ಅಂತ ಹೇಳಿದೆ. ಅವರು ಇಲ್ಲ. ಇದು ಇನ್ಸ್‌ಪೆಕ್ಟರ್ ಪಾತ್ರ ಅಲ್ಲ. ಅವರು ಹೇಳಿದ ಹಾಗೆ ನಾನು ಈ ಚಿತ್ರದಲ್ಲಿ ಇನ್ಸ್‌ಪೆಕ್ಟರ್ ಪಾತ್ರ ಮಾಡುತ್ತಿಲ್ಲ. ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ರಾಮ್ ಪ್ರಸಾದ್ ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ. ಅದು ಜನರಿಗೂ ಮೆಚ್ಚುಗೆಯಾಗುವ ಭರವಸೆ ಇದೆ ಎಂದರು ನಟ ಕಿಶೋರ್ ಕುಮಾರ್.                       
ಎಲ್ಲರೂ ವಶೀಕರಣದ ಸಿನಿಮಾ ಮಾಡುತ್ತಿರುವ ಈ ಸಮಯದಲ್ಲಿ ನಿರ್ವಿಶಿಕರಣ ಮಾಡುವ ಸಿನಿಮಾ ಮಾಡಲು ರಾಮಪ್ರಸಾದ್ ಹೊರಟಿದ್ದಾರೆ. ನಾನು ಈ ಹಿಂದಿನ ಅವರ ಚಿತ್ರದಲ್ಲೂ ನಟಿಸಿದ್ದೆ. ಈ ಚಿತ್ರದಲ್ಲೂ ನಟಿಸಿದ್ದೇನೆ ಎಂದು ನಟ ಸುಚೇಂದ್ರ ಪ್ರಸಾದ್ ಹೇಳಿದರು. 
ನಾನು ಈ ಹಿಂದೆ ವರುಣ್ ಎಂಬ ಹೆಸರಿನಲ್ಲಿ ಅಭಿನಯಿಸಿದ್ದೆ. ಈಗ ಅದ್ಭುತ್ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದೇನೆ. ಎಂದು ನಟ ಅದ್ಭುತ್ ತಿಳಿಸಿದರು. ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ಕಿರಿಶಾ ತಾರಿಕಾ ದೇವಿ, ತುಮುಲ್ ಬಾಲ್ಯನ್, ವಾಣಿಶ್ರೀ ಕೂಡ ತಮ್ಮ ಪಾತ್ರದ ಕುರಿತು ಮಾತನಾಡಿದರು. ಈ ಚಿತ್ರದ ಮತ್ತೊಂದು ವಿಶೇಷವೆಂದರೆ ನಾಗೇಂದ್ರ ಅರಸ್, ಗುರುಪ್ರಸಾದ್, ಜಗದೀಶ್ ಕೊಪ್ಪ, ಮಂಜು ದೈವಜ್ಞ ಸೇರಿದಂತೆ ಆರುಜನ ನಿರ್ದೇಶಕರು ಅಭಿನಯಿಸಿದ್ದಾರೆ. ಅಭಿನಯಿಸಿರುವ ಎಲ್ಲಾ ನಿರ್ದೇಶಕರು, ವೆಂಕಟ್ ರಾಜು ಮುಂತಾದ ಕಲಾವಿದರು ಹಾಗೂ ಸಂಗೀತ ನಿರ್ದೇಶಕ ಎಲ್ವಿನ್ ಜೋಶ್ವ ಸೇರಿದಂತೆ ಅನೇಕ ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು.
ದಿ ಗ್ರೇಟ್ ಎಂಟರ್ ಟೇನರ್ಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿರುವ ಸುರೇಖ ರಾಮಪ್ರಸಾದ್ ಎಲ್ಲರಿಗೂ ಧನ್ಯವಾದ ಹೇಳಿದರು. ಹಾಲೇಶ್ ಈ ಚಿತ್ರದ ಛಾಯಾಗ್ರಹಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

Comments

Popular posts from this blog

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ.

ಮೊಟ್ಟ ಮೊದಲ ಬಾರಿ BIGG BOSS SHOW ರಂಗದಮೇಲೆ ನಡೆದ ಹೆಗ್ಗಳಿಕೆ ಅಮೇರಿಕಾದ California ದ San Ramon ನಗರದಲ್ಲಿ ಇರುವ Trivalley Kannada Sangha ಕ್ಕೆ ಸೇರುತ್ತದೆ. ಇತ್ತೀಚಿಗೆ ಸುರೇಶ್ ಬಾಬು ಪ್ರೊಡಕ್ಷನ್ ಮೂಲಕ BIG BOSS ಕಾರ್ಯಕ್ರಮ ಅಮೇರಿಕಾ ಕನ್ನಡಿಗರ ಮನ ಸೂರೆಗೊಂಡಿದೆ. ಪ್ರತೀ ಬಾರಿಯೂ ಸಂಗೀತ, ನೃತ್ಯ ನಾಟಕ ಇಂತಹ   ಕಾರ್ಯಕ್ರಮದಿಂದಲೇ ಆಯೋಜನೆಗೊಳ್ಳುತ್ತಿತ್ತು. ಆದರೆ ಈ ಬಾರಿ BIG BOSS ವಿಶೇಷವಾಗಿ ಮೂಡಿಬಂದಿದ್ದು ಅನಿವಾಸಿ ಕನ್ನಡಿಗರಲ್ಲಿ ಹೊಸ ರುಚಿ ಸಿಕ್ಕಂತಾಯಿತು.   ಕನ್ನಡದ ಪ್ರತಿಭಾವಂತ ತಾರಾ ಜೋಡಿ ವಿಕ್ರಮ್ ಸೂರಿ ಹಾಗೂ ನಮಿತ ರಾವ್ ಇದರಲ್ಲಿ ಭಾಗವಹಿಸಿ ಈ ಕಾರ್ಯಕ್ರಮ ರೂಪಿಸುವಲ್ಲಿ ಯಶಸ್ವಿಯಾದರು. ಇದಕ್ಕಾಗಿ ಸತತ ಎರೆಡು ತಿಂಗಳ ಮುಂಚಿತವಾಗಿ ಅಲ್ಲಿಯ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸರಿಹೊಂದುವ ಹಾಗೆ ಸ್ಕ್ರಿಪ್ಟ್ ಬರೆಸಲಾಯಿತು.  ಹಲವಾರು Reality Show ಗಳಿಗೆ Content Writer ಆಗಿ ಕೆಲಸ ನಿರ್ವಹಿಸುತ್ತಿರುವ ವಿಕ್ಕಿ ಕುದುರೆ ಮುಖ ಇದನ್ನು ಹಾಸ್ಯಭರಿತವಾಗಿ ರಚಿಸಿ ಭಾರತ ಮತ್ತು ಅಮೇರಿಕಾದಲ್ಲಿ ಇರುವ ಸಂಸ್ಕೃತಿ, ಪ್ರಸ್ತುತ ವಿದ್ಯಮಾ ನಗಳು, ಕುಟುಂಬದಲ್ಲಿನ ಸಂಭಂದಗಳು, ಹೀಗೆ ಹಲವು ವಿಷಯಗಳನ್ನು ವಿಡಂಬನಾತ್ಮಕವಾಗಿ ಎಲ್ಲಿಯೂ, ಯಾರಿಗೂ ಅವಹೇಳನವಾ ಗದಂತೆ ಸೂಕ್ಷ್ಮ ರೀತಿಯಾಗಿ ಹೆಣೆಯುವಲ್ಲಿ ಎಲ್ಲರ ಮನಗೆದ್ದರು. BIG BO...

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ..

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ಗುರುತೇಜ್ ಶೆಟ್ಟಿ ನಿರ್ದೇಶನದ ಕಿರಣ್ ರಾಜ್ ಅಭಿನಯದ “ರಾನಿ”ಸಿನಿಮಾ Z-5 OTT platform ನಲ್ಲಿ ಬಿಡುಗೆಯಾಗಿ ಬಾರಿ ಜನ ಮೆಚ್ಚುಗೆ ಪಡೆಯುತ್ತಿದೆ.. ಬಿಡುಗಡೆಯಾದ ಎರಡೇ ದಿನದಲ್ಲಿ ಮಿಲಿಯನ್ ವೀಕ್ಷಣೆ ಯಾಗಿ ದಾಖಲೆ ಬರೆದಿದೆ,ಸ್ಟಾರ್ ಕ್ರಿಯೇಷನ್ ಬ್ಯಾನರ್ ನಲ್ಲಿ ಚಂದ್ರಕಾಂತ್ ಪೂಜಾರಿ ಉಮೇಶ್ ಹೆಗ್ಡೆ ನಿರ್ಮಿಸಿರುವ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಕಥೆ ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ ಕಿರಣ್ ರಾಜ್ ಗೆ ರಾಧ್ಯ, ಸಮೀಕ್ಷಾ, ಅಪೂರ್ವ ಮೂವರು ನಾಯಕಿಯರಿದ್ದು ರವಿ ಶಂಕರ್,ಬಿ ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ,ಉಗ್ರಂ ಮಂಜು,ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್, ಮುಂತಾದ ದೊಡ್ಡ ತಾರಾಗಣ ವಿದ್ದು ಮಣಿಕಾಂತ್ ಕದ್ರಿ ಸಂಗೀತ ರಾಘವೇಂದ್ರ ಕೋಲರ್ ಛಾಯಾಗ್ರಹಣ,ಸತೀಶ್ ಕಲಾ ನಿರ್ದೇಶನ ಉಮೇಶ್ ಸಂಕಲನ ವಿದೆ,ಈ ಚಿತ್ರವು ಕಳೆದ ವರ್ಷ ಚಿತ್ರ ಮಂದಿರದಲ್ಲಿ ಬಿಡುಗಡೆಯಾಗಿ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಿಕರಿಂದಲೂ ಬಾರಿ ಮೆಚ್ಚುಗೆ ವ್ಯಕ್ತವಾಗಿತ್ತು ಈಗ OTT ನಲ್ಲೂ ಧೂಳೆಬ್ಬಿಸುತ್ತಿದೆ.

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..

'ಸೆಪ್ಟೆಂಬರ್ 10' ಸೆ. 12ರಂದು ಬಿಡುಗಡೆ..  ಆತ್ಮಹತ್ಯೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ, ಸಾಯೋಕೆ ಮಾಡೋ ಧೈರ್ಯವನ್ನು ಬದುಕುವುದಕ್ಕೆ ಮಾಡಿ ಎಂಬ ಸಾಮಾಜಿಕ ಸಂದೇಶ ಇಟ್ಟುಕೊಂಡು ಶತ ಚಿತ್ರಗಳ ಸರದಾರ ಓಂ ಸಾಯಿಪ್ರಕಾಶ್ ಅವರು ಆಕ್ಷನ್ ಕಟ್ ಹೇಳಿರುವ ಚಿತ್ರ 'ಸೆಪ್ಟೆಂಬರ್ 10' ವಿಶ್ವ ಆತ್ಮಹತ್ಯೆ ತಡೆ ದಿನದ ಸಂದರ್ಭದಲ್ಲೇ ಬಿಡುಗಡೆಯಾಗಲಿದೆ. ಸೆ.12 ರಂದು ಈ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ.   ಸೆಪ್ಟೆಂಬರ್ 10 ಚಿತ್ರಕ್ಕೆ ಹಿಂದಿನಿಂದಲೂ ಬೆಂಬಲವಾಗಿ ನಿಂತಿರುವ ವೈದ್ಯ ಡಾ.ರಾಜು ಅವರು ಚಿತ್ರದ ರಿಲೀಸ್ ಡೇಟ್ ಅನೌನ್ಸ್ ಮಾಡಿದರು. ನಟ, ನಿರ್ಮಾಪಕ ಕಮಲ್ ಅವರು ಸೆಪ್ಟೆಂಬರ್ 10 ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುವ ಜವಾಬ್ದಾರಿ ಹೊತ್ತಿದ್ದಾರೆ.  ಈ ಚಿತ್ರಕ್ಕೆ ನಮ್ಮ ಕರ್ನಾಟಕ ಸೇನೆಯ ಬಸವರಾಜ ಪಡುಕೋಣೆ, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ್ರು ಸೇರಿ ಹಲವಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ೩೧ ಜಿಲ್ಲೆಯಲ್ಲಿರೋ ತಮ್ಮ ಕಾರ್ಯಕರ್ತರಿಗೆ ಈ ಸಿನಿಮಾ ನೋಡಲು ಹೇಳಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಲ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬುದು ಚಿತ್ರದ ಸಂದೇಶ. ಸಾಯಿ ಪ್ರಕಾಶ್ ಅವರ ನಿರ್ದೇಶನದ 105ನೇ ಚಿತ್ರವಿದು.  ವೇದಿಕೆಯಲ್ಲಿ ಚಿತ್ರದ ನಿರ್ಮಾಪಕ, ನಿರ್ದೇಶಕ ಸಾಯಿಪ...